– ಬೆಲೆ ಸಿಗದೆ ಎರಡು ಮಾರುಕಟ್ಟೆಯಿಂದ ರೈತರು ಕಂಗಾಲು
ಬೆಂಗಳೂರು: ಸಾಲ ಮಾಡಿ ಬೆಳೆದ ಈರುಳ್ಳಿ ಬೆಳೆಗೆ ಉತ್ತಮ ಬೆಲೆ ಸಿಗುತ್ತಿಲ್ಲ, ಮಾರುಕಟ್ಟೆಗೆ ಬಂದ ರೈತರು ಕಣ್ಣೀರಿನಲ್ಲಿ ಕೈತೊಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.
Advertisement
ಈರುಳ್ಳಿ ಬೆಲೆ ಪಾತಾಳಕ್ಕೆ ಕುಸಿದಿದ್ದು, ಎಪಿಎಂಸಿ ಮಾರುಕಟ್ಟೆಯಲ್ಲಿ ಪ್ರತಿ ಕೆಜಿ ಈರುಳ್ಳಿ ಬೆಲೆ 1 ರೂಪಾಯಿಯಿಂದ 50 ರೂಪಾಯಿ ವರೆಗೆ ಮಾತ್ರ ಮಾರಾಟವಾಗುತ್ತಿದೆ. ಈರುಳ್ಳಿ ಬೆಳೆದು ದೂರದ ಜಿಲ್ಲೆಗಳಿಂದ ತಂದ ರೈತನಿಗೆ ಬೆಂಗಳೂರಿನ ಮಾರುಕಟ್ಟೆಯಲ್ಲಿ ಲಾರಿ ಬಾಡಿಗೆ ಕೂಡ ಸಿಗುತ್ತಿಲ್ಲ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ. ಇದನ್ನೂ ಓದಿ: ಎಲೆಕ್ಟ್ರಾನಿಕ್ ಸಿಟಿ ಅಪಘಾತ – ನಿನ್ನೆಯಷ್ಟೇ ಕೆಲಸಕ್ಕೆ ಸೇರಿದ್ದ ಕೃತಿಕ ರಾಮಾನ್
Advertisement
ಸಾಲ ಮಾಡಿ ಬೆಳೆದು ಬೆಲೆ ಸಿಗದೆ ಇದ್ದರೆ ಹೇಗೆ ಎಂದು ಸರ್ಕಾರದ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಎರಡು ಮಾರುಕಟ್ಟೆಯಿಂದ ರೈತರಿಗೆ ಬೆಲೆ ಸಿಗುತ್ತಿಲ್ಲ. ಯಶವಂತಪುರ ಹಾಗೂ ದಾಸನಪುರ ಎರಡು ಮಾರುಕಟ್ಟೆಗಳಲ್ಲಿ ಇದೇ ಸಮಸ್ಯೆ ಇದೆ ಎಂದು ರೈತರು ಕಣ್ಣೀರು ಹಾಕುತ್ತಿದ್ದಾರೆ.
Advertisement
Advertisement
ಸಾಲ ಮಾಡಿ ಉಳುಮೆ ಮಾಡಿ, ಬೀಜ ಖರೀದಿಸಿ, ಗೊಬ್ಬರ ಹಾಕಿ ಬೆಳೆದ ಬೆಳೆಗೆ ಮಾರುಕಟ್ಟೆಯಲ್ಲಿ ಸೂಕ್ತ ಬೆಲೆ ಸಿಗುತ್ತಿಲ್ಲ. ರಾಜ್ಯ ಸರ್ಕಾರ ಬೆಂಬಲ ಬೆಲೆ ನೀಡಿ ಮಧ್ಯವರ್ತಿಗಳ ಹಾವಳಿಗೆ ಬ್ರೇಕ್ ಹಾಕಬೇಕು ಎಂದು ರೈತರು ಆಗ್ರಹಿಸಿದ್ದಾರೆ.