ಬೆಂಗಳೂರು: ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಇಂದು ವಿಧಾನಸಭೆಯಲ್ಲಿ ಆನ್ ಲೈನ್ ಬೆಟ್ಟಿಂಗ್ ಪ್ರತಿಬಂಧಕ ಕಾಯ್ದೆಯ ವಿಧೇಯಕವನ್ನು ಮಂಡಿಸಿದರು.
ಸಚಿವರು, ವಿಧೇಯಕವನ್ನು ಮಂಡಿಸಿ ಮಾತನಾಡುತ್ತಾ, ರಾಜ್ಯದಲ್ಲಿ ಆನ್‍ಲೈನ್ ಗ್ಯಾಂಬಲಿಂಗ್ ನಿಷೇಧದ ನಿಟ್ಟಿನಲ್ಲಿ ಇದೊಂದು ಸರ್ಕಾರದ ಮಹತ್ವದ ಹೆಜ್ಜೆ ಎಂದು ಬಣ್ಣಿಸಿದರು.
Advertisement
Advertisement
ಈ ತಿದ್ದುಪಡಿ ವಿಧೇಯಕ ಲಾಟರಿ, ಕುದುರೆ ರೇಸ್ ಗೆ ಅನ್ವಯವಾಗುವುದಿಲ್ಲ. ಉಳಿದಂತೆ ಮೊಬೈಲ್, ಕಂಪ್ಯೂಟರ್ ಸೇರಿದಂತೆ ಇನ್ನಿತರ ಆನ್ ಲೈನ್ ಜೂಜಾಟ, ಬೆಟ್ಟಿಂಗ್ ಗಳಿಗೆ ಅನ್ವಯವಾಗಲಿದೆ.
Advertisement
ಆನ್ ಲೈನ್ ಗ್ಯಾಂಬ್ಲಿಂಗ್ ತೊಡಗುವವರಿಗೆ ಸಹಾಯ ಮಾಡುವವರಿಗೆ ಹಾಗೂ ಆಶ್ರಯ ನೀಡುವವರಿಗೂ 6 ತಿಂಗಳು ಜೈಲುಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಲಾಗುವುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಕತ್ತಿ, ಖಡ್ಗ, ತಲ್ವಾರ್ ಒಂದು ಶಸ್ತ್ರ ಮನೆಯಲ್ಲಿ ಇರಲೇಬೇಕು: ಮುತಾಲಿಕ್