ಬೆಂಗಳೂರು: ನಗರದಲ್ಲಿ ಆನ್‍ಲೈನ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಮಡಿವಾಳ ಪೊಲೀಸರು ಬಂಧಿಸಿದ್ದಾರೆ.
Advertisement
ಕರ್ನಾಟಕದಲ್ಲಿ ಆನ್‍ಲೈನ್ ಬೆಟ್ಟಿಂಗ್ ದಂಧೆಯನ್ನು ಸರ್ಕಾರ ನಿಷೇಧ ಮಾಡಿದ ಬಳಿಕ ಆನ್‍ಲೈನ್ ಬೆಟ್ಟಿಂಗ್ ದಂಧೆ ನಡೆಸುವವರ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಆದರು ಎಗ್ಗಿಲ್ಲದೆ ದಂಧೆ ನಡೆಯುತ್ತಿದೆ. ಬೆಂಗಳೂರು ನಗರದಲ್ಲಿ ಆನ್‍ಲೈನ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಬಂಧಿತರಿಂದ 59 ಸಾವಿರ ರೂ, ಒಂದು ಕಾರು, ಒಂದು ಬೈಕ್ ಸೇರಿದಂತೆ 3 ಮೊಬೈಲ್ ವಶ ಪಡಿಸಿಕೊಳ್ಳಲಾಗಿದೆ. ಇದನ್ನೂ ಓದಿ: ಪಟಾಕಿ, ವಾದ್ಯದ ಸದ್ದಿಗೆ ಬೆದರಿದ ಆನೆ – ಜಂಬೂ ಸವಾರಿ ಮೆರವಣಿಗೆ ಸ್ಥಗಿತ
Advertisement
Advertisement
ಆರೋಪಿಗಳು ಐಪಿಎಲ್ ಮ್ಯಾಚ್ ವೇಳೆ ಬೆಟ್ಟಿಂಗ್‍ನಲ್ಲಿ ತೊಡಗಿದ್ದರು. ಈ ವೇಳೆ ದಾಳಿ ಮಾಡಿದ ಮಡಿವಾಳ ಇನ್ಸ್‌ಪೆಕ್ಟರ್ ಸುನೀಲ್ ನಾಯ್ಕ್ ಅ್ಯಂಡ್ ಟೀಂ ಮೂವರನ್ನು ಬಂಧಿಸಿ, ಕರ್ನಾಟಕ ಸ್ಟೇಟ್ ಪೊಲೀಸ್ ಆಕ್ಟ್ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ. ಇದನ್ನೂ ಓದಿ: ಸಿದ್ದರಾಮಯ್ಯ, ಕುಮಾರಸ್ವಾಮಿ ವೋಟಿಗಾಗಿ ಜೊಲ್ಲು ಸುರಿಸ್ತಿದ್ದಾರೆ: ಆರಗ ಜ್ಞಾನೇಂದ್ರ
Advertisement