– ಸಾಲ ತೀರಿಸಲಾಗದೇ ನಾಲೆಗೆ ಹಾರಿ ಪತಿ, ಪತ್ನಿ
ಹಾಸನ: ಸಾಲಭಾದೆ (Loan) ತಾಳಲಾರದೇ ಒಂದೇ ಕುಟುಂಬದ ಮೂವರು ನಾಲೆಗೆ ಹಾರಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಕೆರೆಬೀದಿಯಲ್ಲಿ ನಡೆದಿದೆ.
ಶ್ರೀನಿವಾಸ್ (43), ಆತನ ಪತ್ನಿ ಶ್ವೇತಾ (36) ಹಾಗೂ ಪುತ್ರಿ ನಾಗಶ್ರೀ (13) ಮೃತ ದುರ್ದೈವಿಗಳು. ಶ್ರೀನಿವಾಸ್ ಕಾರು ಚಾಲಕನಾಗಿದ್ದು, ಶ್ವೇತಾ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಪುತ್ರಿ ನಾಗಶ್ರೀ ಏಳನೇ ತರಗತಿ ಓದುತ್ತಿದ್ದಳು. ಇದನ್ನೂ ಓದಿ: 12 ವರ್ಷಗಳಲ್ಲೇ ಬೆಂಗ್ಳೂರು ಮೆಟ್ರೋದಲ್ಲಿ ದಾಖಲೆ ಪ್ರಯಾಣ
ಶ್ರೀನಿವಾಸ್ ಕೊರೊನಾ ಸಂದರ್ಭದಲ್ಲಿ ಡ್ರೈವರ್ ಕೆಲಸ ಬಿಟ್ಟು ಊರಿಗೆ ಮರಳಿದ್ದ. ಆನಂತರದಲ್ಲಿ ಕೆಲಸಕ್ಕೆ ಹೋಗದೇ ಆನ್‌ಲೈನ್ ರಮ್ಮಿ (Online Rummy) ಚಟಕ್ಕೆ ಬಿದ್ದು, ಇದರಿಂದಾಗಿ ಸಾಕಷ್ಟು ಸಾಲ ಮಾಡಿಕೊಂಡಿದ್ದ. ಸಾಲ ಮರು ಪಾವತಿಸುವಂತೆ ಸಾಲ ನೀಡಿದವರು ಪೀಡಿಸುತ್ತಿದ್ದರು. ಸಾಲ ವಾಪಾಸ್ ನೀಡಲು ಸಾಧ್ಯವಾಗದೇ ಶ್ರೀನಿವಾಸ್ ಸಂಕಷ್ಟಕ್ಕೆ ಸಿಲುಕಿದ್ದ.
ಮಂಗಳವಾರ ಮೂವರು ಮನೆಯಿಂದ ಹೋದವರು ವಾಪಾಸ್ ಆಗಿರಲಿಲ್ಲ. ಆತಂಕಗೊಂಡ ಪೋಷಕರು ಎಲ್ಲೆಡೆ ಹುಡುಕಾಟ ನಡೆಸಿ ಎಲ್ಲಿಯೂ ಪತ್ತೆಯಾಗದಿದ್ದಾಗ ಚನ್ನರಾಯಪಟ್ಟಣ (Channarayapatna) ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದನ್ನೂ ಓದಿ: ಸ್ವಾತಂತ್ರ‍್ಯ ದಿನಾಚರಣೆಯಲ್ಲಿ ಬ್ರೂಸ್ಲಿ ಅಭಿಮಾನಿಯ ಸಾಹಸ – ಹಲ್ಲಿನಿಂದ 1 ಟನ್ ತೂಕದ ಕಾರು ಎಳೆದ ಯುವಕ
ಪೊಲೀಸರು ಹುಡುಕಾಟ ನಡೆಸಿದ್ದು ಬುಧವಾರ ಸಂಜೆ ಬಾಗೂರು ಹೋಬಳಿ, ಮುದ್ಲಾಪುರ ಬಳಿಯ ಹೇಮಾವತಿ ನಾಲೆಯಲ್ಲಿ ಶ್ರೀನಿವಾಸ್, ಶ್ವೇತಾ ಶವ ಪತ್ತೆಯಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಎರಡು ಮೃತದೇಹಗಳನ್ನು ಹೊರತೆಗೆದಿದ್ದು, ಬಾಲಕಿ ನಾಗಶ್ರೀ ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರೆದಿದೆ. ಸ್ಥಳಕ್ಕೆ ಎಸ್ಪಿ ಮಹಮದ್ ಸುಜೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ನುಗ್ಗೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.