InternationalLatestMain Post

ಅಪ್ಘಾನಿಸ್ತಾನದಲ್ಲಿ ಆನ್‌ಲೈನ್ ಶಾಪಿಂಗ್ ಸ್ಥಗಿತ

ಕಾಬೂಲ್: ತಾಲಿಬಾನ್ ವಶಪಡಿಸಿಕೊಂಡ ಬಳಿಕ ಹಾಗೂ ಭೀಕರ ಆರ್ಥಿಕ ಬಿಕ್ಕಟ್ಟಿನಿಂದ ನಲುಗುತ್ತಿರುವ ಅಫ್ಘಾನಿಸ್ತಾನದ ಬಹುತೇಕ ಎಲ್ಲಾ ಪ್ರಮುಖ ಆನ್‌ಲೈನ್ ಶಾಪಿಂಗ್ ಸೇವೆಗಳು ಸ್ಥಗಿತಗೊಂಡಿರುವುದಾಗಿ ವರದಿಯಾಗಿದೆ.

ಇತ್ತೀಚೆಗೆ ಅಫ್ಘಾನಿಸ್ತಾನದ 2 ಅತಿ ದೊಡ್ಡ ಆನ್‌ಲೈನ್ ಶಾಪಿಂಗ್ ಸೇವೆಗಳಾದ Click.af ಮತ್ತು Baqal ದೇಶದ ಆರ್ಥಿಕ ಪ್ರಕ್ಷುಬ್ಧತೆಯ ಕಾರಣದಿಂದಾಗಿ ಮುಚ್ಚುವುದಾಗಿ ಘೋಷಿಸಿತ್ತು. ಇದೀಗ ಬಹುತೇಕ ಎಲ್ಲಾ ಆನ್‌ಲೈನ್ ಶಾಪಿಂಗ್ ಸೇವೆಗಳು ಸ್ಥಗಿತಗೊಂಡಿವೆ. ಇದನ್ನೂ ಓದಿ: ಸಿಧು ಹತ್ಯಾ ಪ್ರಕರಣ – ಉತ್ತರ ಭಾರತದಾದ್ಯಂತ 50 ಕಡೆಗಳಲ್ಲಿ ಎನ್‌ಐಎ ದಾಳಿ

ತಾಲಿಬಾನ್ ಅಧಿಕಾರವನ್ನು ವಶಪಡಿಸಿಕೊಂಡಾಗಿನಿಂದ ಅಫ್ಘಾನಿಸ್ತಾನ ಈಗ 1 ವರ್ಷದಿಂದ ಸಂಪೂರ್ಣ ಪ್ರಕ್ಷುಬ್ಧ ಸ್ಥಿತಿಯಲ್ಲಿದೆ. ತಾಲಿಬಾನ್ ಲಿಂಗ ಆಧಾರಿತ ಹಿಂಸಾಚಾರವನ್ನು ಪರಿಹರಿಸಲು ವ್ಯವಸ್ಥೆಯನ್ನು ಕಿತ್ತುಹಾಕಿದ್ದು ಮಾತ್ರವಲ್ಲದೇ ಮಹಿಳೆಯರ ಆರೋಗ್ಯ ಮತ್ತು ಶಿಕ್ಷಣಕ್ಕೆ ಹೊಸ ಅಡೆತಡೆಗಳನ್ನು ನಿರ್ಮಿಸಿತು. ಮಹಿಳಾ ಹಕ್ಕುಗಳ ಪ್ರತಿಭಟನಾಕಾರರ ಮೇಲೆ ದಾಳಿಯನ್ನೂ ಮಾಡಿತು. ಇದನ್ನೂ ಓದಿ: ಟ್ರಾಫಿಕ್‍ನಲ್ಲಿ ಸಿಲುಕಿದ್ದ ಕಾರನ್ನು ಅಲ್ಲೇ ಬಿಟ್ಟರು – 3 ಕಿ.ಮೀ ಓಡಿ ಶಸ್ತ್ರಚಿಕಿತ್ಸೆ ಮಾಡಿ ರೋಗಿಯ ಪ್ರಾಣ ಉಳಿಸಿದ ಡಾಕ್ಟರ್

ಆನ್‌ಲೈನ್ ಶಾಪಿಂಗ್ ಅಪ್ಲಿಕೇಶನ್ ಆಗಿರುವ Click.af ಶನಿವಾರ ಸ್ಥಗಿತಗೊಳಿಸುವುದಾಗಿ ಘೋಷಿಸಿದೆ. ಸಂಸ್ಥೆ ತನ್ನ ಫೇಸ್‌ಬುಕ್ ಪುಟದಲ್ಲಿ ಹಣಕಾಸಿನ ಸಮಸ್ಯೆಗಳಿಂದ ಮುಚ್ಚಲಾಗಿದೆ ಎಂದು ಸಂದೇಶವನ್ನು ಪೋಸ್ಟ್ ಮಾಡಿದೆ.

3 ವರ್ಷಗಳ ಹಳೆಯ Baqal ಕಂಪನಿ ಭಾನುವಾರ ಆರ್ಥಿಕ ತೊಂದರೆಗಳಿಂದಾಗಿ ಸೇವೆಗಳನ್ನು ಮುಚ್ಚುತ್ತಿರುವುದಾಗಿ ಘೋಷಿಸಿತು.

Live Tv

Leave a Reply

Your email address will not be published.

Back to top button