ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಆರ್ಭಟ ಮುಂದುವರಿದ ಹಿನ್ನೆಲೆ ಹಳೆ ಮೈಸೂರು ಭಾಗದ ಜೀವನಾಡಿ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ (Srirangapatna) ತಾಲೂಕಿನ ಕೆಆರ್‌ಎಸ್ (KRS) ಡ್ಯಾಂ ಭರ್ತಿಗೆ ಇನ್ನು ಕೇವಲ 8 ಅಡಿ ಮಾತ್ರ ಬಾಕಿ ಇದೆ.
ಒಂದು ವಾರದಿಂದ ಕೊಡಗು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮವಾಗಿ ಮಳೆ ಸುರಿಯುತ್ತಿದೆ. ಇದರಿಂದ ದಿನೇ ದಿನೇ ಕೆಆರ್‌ಎಸ್ ಅಣೆಕಟ್ಟಿಗೆ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದೆ. ಇಂದು ಕೆಆರ್‌ಎಸ್ ಡ್ಯಾಂಗೆ 44,617 ಕ್ಯುಸೆಕ್ ನೀರು ಬರುತ್ತಿದೆ. ಇದರಿಂದ 124.80 ಅಡಿ ಗರಿಷ್ಠ ಅಡಿಯ ಕೆಆರ್‌ಎಸ್ ಡ್ಯಾಂ 116.60 ಅಡಿ ಭರ್ತಿಯಾಗಿದೆ. ಇದನ್ನೂ ಓದಿ: ಸಾರ್ವಜನಿಕ ಜೀವನದಲ್ಲಿ ಒಂದೇ ಒಂದು ಕಪ್ಪುಚುಕ್ಕೆ ಇಲ್ಲ ಅನ್ನೋ ಸಿದ್ದರಾಮಯ್ಯ ಮಾತನ್ನ ಯಾರೂ ನಂಬಲ್ಲ: ಸಿ.ಟಿ ರವಿ
Advertisement
Advertisement
ಇನ್ನೂ ಡ್ಯಾಂನಲ್ಲಿ 38.900 ಟಿಎಂಸಿ ನೀರು ಶೇಖರಣೆ ಆಗಿದ್ದು, ಇನ್ನೂ 11 ಟಿಎಂಸಿ ನೀರು ಬಂದರೆ 49.452 ಟಿಎಂಸಿ ಶೇಖರಣೆ ಆಗಿ ಸಂಪೂರ್ಣ ಭರ್ತಿಯಾಗಲಿದೆ. ಇಂದು ಕೆಆರ್‌ಎಸ್ ಡ್ಯಾಂನಿಂದ 2,566 ಕ್ಯುಸೆಕ್ ನೀರನ್ನು ನಾಲೆ ಹಾಗೂ ಕುಡಿಯಲು ಬಿಡಲಾಗುತ್ತಿದೆ. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಅಧಿಕಾರಿಗಳಿಗೆ ಶಾಕ್ – ರಾಜ್ಯದ 30 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ
Advertisement
Advertisement
ಇಂದಿನ ಕೆಆರ್‌ಎಸ್ ನೀರಿನ ಮಟ್ಟ
ಗರಿಷ್ಠ ಮಟ್ಟ – 124.80 ಅಡಿ
ಇಂದಿನ ಮಟ್ಟ – 116.60 ಅಡಿ
ಗರಿಷ್ಠ ಸಾಂದ್ರತೆ – 49.452 ಟಿಎಂಸಿ
ಇAದಿನ ಸಾಂದ್ರತೆ – 38.900 ಟಿಎಂಸಿ
ಒಳ ಹರಿವು – 44,617 ಕ್ಯುಸೆಕ್
ಹೊರ ಹರಿವು – 2,566 ಕ್ಯುಸೆಕ್