ಗುವಾಹಟಿ: 2026 ರ ವಿಧಾನಸಭಾ ಚುನಾವಣೆಯ ವೇಳೆಗೆ ಕೆಲವೇ ಮುಸ್ಲಿಂ ಶಾಸಕರು ಮಾತ್ರ ಕಾಂಗ್ರೆಸ್‌ನಲ್ಲಿ ಉಳಿಯುತ್ತಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಟೀಕಿಸಿದ್ದಾರೆ.
ಕಾಂಗ್ರೆಸ್ ಶಾಸಕರಾದ ರಾಕಿಬುಲ್ ಹುಸೇನ್, ರೆಕಿಬುದ್ದೀನ್ ಅಹ್ಮದ್, ಜಾಕಿರ್ ಹುಸೇನ್ ಸಿಕ್ದರ್, ನೂರುಲ್ ಹುದಾ ಮತ್ತು ಇನ್ನೂ ಕೆಲವರು ಪಕ್ಷದಲ್ಲಿಯೇ ಉಳಿಯುತ್ತಾರೆ ಎಂದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ʻಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆʼ ರದ್ದು – ಸಂಪುಟ ನಿರ್ಧಾರಕ್ಕೆ ಕಾಂಗ್ರೆಸ್ ಆಕ್ಷೇಪ; ಸಭಾತ್ಯಾಗ
Advertisement
Advertisement
ಇತ್ತೀಚೆಗೆ ಕಾಂಗ್ರೆಸ್‌ನ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ನಾಯಕ ರಾಣಾ ಗೋಸ್ವಾಮಿ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ಈ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ. ಅವರು ಕಾಂಗ್ರೆಸ್‌ನ ಪ್ರಬಲ ನಾಯಕರಾಗಿದ್ದು, ಅವರು ಬಿಜೆಪಿ ಸೇರಿದರೆ ಸ್ವಾಗತಿಸುತ್ತೇನೆ ಎಂದಿದ್ದಾರೆ.
Advertisement
Advertisement
ಮುಸ್ಲಿಮರ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆ ರದ್ದಿಗೆ ಸಂಪುಟ ನಿರ್ಧಾರ ಕೈಗೊಂಡಿದೆ ಎಂದು ಶರ್ಮಾ ಈಚೆಗೆ ಘೋಷಿಸಿದ್ದರು. ಏಕರೂಪ ನಾಗರಿಕ ಸಂಹಿತೆ ಜಾರಿಗೆ ಸರ್ಕಾರ ಮುಂದಾಗಿದೆ ಎಂದು ವಿಪಕ್ಷಗಳು ಟೀಕೆ ವ್ಯಕ್ತಪಡಿಸಿವೆ. ಇದನ್ನೂ ಓದಿ: ಮಹಿಳೆಯರು ಏನನ್ನು ಧರಿಸಬೇಕು ಅನ್ನೋದು ಅವರ ವೈಯಕ್ತಿಕ ವಿಚಾರ – ಹಿಜಬ್ ಬಗ್ಗೆ ಕೇಳಿದ್ದಕ್ಕೆ ರಾಹುಲ್ ಉತ್ತರ