– ರಾಜಕೀಯ, ಧಾರ್ಮಿಕ ಧ್ವಜಗಳಿಗೆ ಅವಕಾಶ ಇಲ್ಲ ಎಂದ ಸಚಿವ
ಬೆಂಗಳೂರು: ಸಂವಿಧಾನದ ಅಡಿಯಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಧ್ವಜ ಹಾರಿಸಲಷ್ಟೇ ಅವಕಾಶವಿದೆ. ಇದರ ಹೊರತಾಗಿ ಯಾವುದೇ ರಾಜಕೀಯ, ಧಾರ್ಮಿಕ ಧ್ವಜ ಹಾರಿಸಲು ಅವಕಾಶವಿಲ್ಲ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ (N Chaluvarayaswamy) ತಿಳಿಸಿದರು.
Advertisement
ಕೆರಗೋಡು (Keragodu) ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹನುಮ ಧ್ವಜ (Hanuman Flag) ಹಾರಿಸಿರುವ ವಿಚಾರವಾಗಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಜಾಗದಲ್ಲಿ ರಾಷ್ಟ್ರೀಯ ಧ್ವಜ ಹಾರಿಸಬಹುದು. ಅದನ್ನು ಹೊರತುಪಡಿಸಿ ಸರ್ಕಾರಿ ಜಾಗದಲ್ಲಿ ಬೇರೆ ಧ್ವಜವನ್ನು ಹಾರಿಸುವಂತಿಲ್ಲ. ತ್ರಿವರ್ಣ ಧ್ವಜಕ್ಕೆ ಅನುಮತಿ ಪಡೆದು ಬೇರೆ ಧ್ವಜ ಹಾರಿಸೋದು ತಪ್ಪು. ಸೋಮವಾರ ಬೆಳಗ್ಗೆ ಡಿಸಿ ಕಚೇರಿ ಮುಂದೆ ಹಾರಿಸುತ್ತೇನೆ ಎನ್ನುತ್ತಾರೆ. ಆಗ ಅವಕಾಶ ಕೊಡಲು ಆಗುತ್ತಾ? ಇದು ಒಂದು ಕಡೆ ಅವಕಾಶ ಕೊಟ್ಟರೆ ಎಲ್ಲಾ ಕಡೆ ಕೇಳುತ್ತಾರೆ. ಇದು ತಪ್ಪು ಎಂದರು. ಇದನ್ನೂ ಓದಿ: ಕಸ ಮತ್ತೆ ಡಸ್ಟ್‌ಬಿನ್‌ಗೆ ಹೋಗಿದೆ – ಪಕ್ಷ ತೊರೆದ ನಿತೀಶ್ ಕುಮಾರ್‌ಗೆ ಲಾಲೂ ಪುತ್ರಿ ಟಾಂಗ್
Advertisement
Advertisement
ಸ್ಥಳೀಯ ಯುವಕರು ಒಳ್ಳೆಯವರೇ, ಅವರನ್ನ ದಾರಿ ತಪ್ಪಿಸುತ್ತಿದ್ದಾರೆ. ಎಲ್ಲಾ ಯುವಕರ ಜೊತೆ ಮಾತನಾಡುತ್ತೇನೆ. ಖಾಸಗಿ ಜಾಗದಲ್ಲಿ ಅಥವಾ ದೇವಾಲಯದ ಮುಂದೆ ಹನುಮಾನ್ ಧ್ವಜ ಹಾರಿಸಲು ಅವಕಾಶ ಕೊಡೋಣ. ಆದರೆ ಸರ್ಕಾರಿ ಕಚೇರಿ ಮುಂದೆ ಬೇಡ ಎಂದು ಹೇಳಿದರು. ಇದನ್ನೂ ಓದಿ: ಇಂದು ಸಂಜೆ 5 ಕ್ಕೆ ಬಿಹಾರ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣ ವಚನ – BJPಯ ಇಬ್ಬರು ಡಿಸಿಎಂ
Advertisement
ನಾನು ರಾಮ ಭಕ್ತ, ನಮ್ಮ ಮನೆ ದೇವರು ವಿಷ್ಣು. ನಾವು ಯಾವುದೇ ಧ್ವಜದ ವಿರೋಧಿಗಳಲ್ಲ. ಪಂಚಾಯತ್‌ನ ಸಭೆಯಲ್ಲಿ ಹನುಮ ಧ್ವಜ ಹಾರಿಸಲು ಅನುಮೋದನೆ ನೀಡಿದರೆ ತಪ್ಪು. ಅವರ ವಿರುದ್ಧವೂ ಕ್ರಮ ಆಗುತ್ತದೆ. ಇದರಲ್ಲಿ ನಾನಾಗಲಿ, ಸ್ಥಳೀಯ ಶಾಸಕರಾಗಲಿ ರಾಜಕೀಯ ಮಾಡುತ್ತಿಲ್ಲ. ಸರ್ಕಾರಿ ಕಚೇರಿ ಮುಂದೆ ಹನುಮ ಧ್ವಜ ಹಾರಿಸಿರುವುದು ಸಂವಿಧಾನಕ್ಕೆ ವಿರುದ್ಧ ಆಗಿರುವುದರಿಂದ ಅದನ್ನು ತೆರವು ಮಾಡಲಾಗಿದೆ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ರಾಷ್ಟ್ರ ಧ್ವಜ ಹಾರಿಸೋ ಬದಲು ಹನುಮ ಧ್ವಜ ಹಾರಿಸಿದ್ದು ಸರಿಯಲ್ಲ – ಸಿದ್ದರಾಮಯ್ಯ