ನವದೆಹಲಿ: ಮುಂಬರುವ ವಿಧಾನಸಭೆ ಚುನಾವಣೆ ಗೆಲ್ಲಲು ಹಿಜಬ್, ಹಲಾಲ್ ನಂತಹ ಧಾರ್ಮಿಕ ವಿಚಾರಗಳು ಸಾಲದು ಉತ್ತಮ ಆಡಳಿತ ಮತ್ತು ಮೂಲಸೌಕರ್ಯಗಳ ಅಭಿವೃದ್ಧಿಯೂ ಮುಖ್ಯ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಬಿಜೆಪಿ ಹೈಕಮಾಂಡ್ ಹೇಳಿದೆ.
Advertisement
ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಬೊಮ್ಮಾಯಿ ಅವರು ಎರಡು ದಿನಗಳ ಕಾಲ ದೆಹಲಿಗೆ ತೆರಳಿದ್ದರು. ಈ ವೇಳೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಪಕ್ಷದ ಹಲವು ನಾಯಕರನ್ನು ಭೇಟಿ ಮಾಡಿದ್ದಾರೆ. ಈ ಭೇಟಿ ವೇಳೆ ನಡ್ಡಾ ಅವರು ರಾಜ್ಯದ ಹಲವು ಬೆಳವಣಿಗೆಗಳ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಗ್ರಾಮ ಪಂಚಾಯಿತಿ ಅಧ್ಯಕ್ಷನ ಶೋಕಿ ಲೈಫ್ – ಸ್ವಂತ ಗಾಡಿಗೆ ಸರ್ಕಾರದ ಲೋಗೋ ಹಾಕಿ ಪ್ರವಾಸ
Advertisement
ಆಡಳಿತದ ಮೇಲೆ ಗಮನ ಹರಿಸಬೇಕು. ರೈತರ ಮನ ಗೆಲ್ಲಲ್ಲು ನೀರಾವರಿ ಯೋಜನೆಗಳನ್ನು ಹೆಚ್ಚು ಕೇಂದ್ರಿಕರಿಸಬೇಕು. ಜನಪ್ರಿಯ ಆಡಳಿತ ನೀಡಲು ಪ್ರಯತ್ನಿಸಬೇಕು. ಅದನ್ನು ಬಿಟ್ಟು ಹಲಾಲ್ – ಹಿಜಬ್ ಎಂದು ಸಮುದಾಯದವೊಂದನ್ನು ಟಾರ್ಗೆಟ್ ಮಾಡಿ ಚುನಾವಣೆ ಗೆಲ್ಲಲು ಕನಸು ಉತ್ತಮವಲ್ಲ ಎಂದು ನಡ್ಡಾ ಅವರು, ಬೊಮ್ಮಾಯಿ ಅವರಿಗೆ ಹೇಳಿದ್ದಾರೆ.
Advertisement
Advertisement
ಹಿಜಬ್, ಹಲಾಲ್ ಒಂದು ಸಮುದಾಯದ ಮತಗಳನ್ನು ಕ್ರೋಢೀಕರಿಸಬಹುದು. ಆದರೆ ಇದು ಗೆಲುವಿಗೆ ಸಾಲದು, ಮತ್ತೆ ಅಧಿಕಾರಕ್ಕೆ ಬರಲು ಉತ್ತಮ ಆಡಳಿತವೂ ಬಹಳ ಮುಖ್ಯ ಎಂದು ಹೇಳಿದ್ದಾರೆ. ಇದೇ ವೇಳೆ ಬೊಮ್ಮಾಯಿ ಅವರು ರಾಜ್ಯದ ಹಲವು ನಾಯಕರ ವಿರುದ್ಧ ದೂರು ಕೂಡಾ ನೀಡಿದ್ದಾರೆ. ಕೆಲವು ನಾಯಕರ ಹೇಳಿಕೆ ಪಕ್ಷಕ್ಕೆ ಮುಜುಗರ ಉಂಟು ಮಾಡಿದೆ ಎಂದು ಬೇಸರ ಹೊರಹಾಕಿದ್ದಾರೆ.
ಮುಖ್ಯವಾಗಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ಹಲಾಲ್ ಮಾಂಸವನ್ನು ಹಿಂದೂಗಳು ಖರೀದಿಸಬಾರದು. ಹಲಾಲ್ ಆರ್ಥಿಕ ಜಿಹಾದ್ ಹೇಳಿಕೆ ಪ್ರಸ್ತಾಪವಾಗಿದೆ ಎನ್ನಲಾಗಿದ್ದು, ಈ ಹೇಳಿಕೆಗೆ ಜೆ.ಪಿ.ನಡ್ಡಾ ಕೂಡಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ವರದಿ ಮಾಡಲಾಗಿದೆ.
ಚುನಾವಣಾ ದೃಷ್ಟಿಯಿಂದ ಸರ್ಕಾರದ ಮೇಲೆ ಉತ್ತಮ ಅಭಿವೃದ್ಧಿ ಮೂಡಿಸಲು ಸರಣಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಉದ್ಘಾಟನೆ, ಭೂಮಿ ಪೂಜೆಗೆ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬರಲಿದ್ದಾರೆ. ಉತ್ತರ ಕರ್ನಾಟಕದಲ್ಲಿ ಕಾರ್ಯಕರ್ತರು ಪ್ರಮುಖ ನಾಯಕರು ಅಸಮಾಧಾನ ಹೊರ ಹಾಕುತ್ತಿದ್ದು, ಆ ಬಗ್ಗೆ ಗಮನಹರಿಬೇಕು ಎಂದು ನಡ್ಡಾ ಅವರು ಸೂಚಿಸಿದ್ದಾರೆ. ಇದನ್ನೂ ಓದಿ: ಸೋನಂ ಕಪೂರ್ ನಿವಾಸದಲ್ಲಿ 1.41 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಳವು
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಬಳಿಕ ಪಕ್ಷದ ವರ್ಚಸ್ಸು ಕುಗ್ಗಿದ್ದು, ಸ್ಥಳೀಯ ಚುನಾವಣೆಗಳಲ್ಲಿ ಅದು ಸಾಬೀತಾಗಿದೆ. ಪಕ್ಷದ ವರ್ಚಸ್ಸು ಹೆಚ್ಚಿಸಬೇಕು. ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವೆ ಜಗಳದ ಲಾಭ ಪಡೆಯಲು ಪೂರ್ಣ ಪ್ರಮಾಣದಲ್ಲಿ ಅವಲಂಬನೆಯಾಗುವುದು ಬೇಡ. ಅಭಿವೃದ್ಧಿ ಕೇಂದ್ರಿಕರಿಸಿ ಕಾರ್ಯನಿರ್ವಹಿಸುವಂತೆ ನಡ್ಡಾ ಅವರು ಕಿವಿ ಮಾತು ಹೇಳಿದ್ದಾರೆ ಎನ್ನಲಾಗಿದೆ.