ಜೈಪುರ: ಕಾಂಗ್ರೆಸ್ ಕಾಗದ ಚೂರು ಮತ್ತು ವಿಡಿಯೋ ಗೇಮ್‍ನಲ್ಲಿ ಮಾತ್ರ ಸರ್ಜಿಕಲ್ ಸ್ಟ್ರೈಕ್ ಮಾಡುತ್ತದೆ ಎಂದು ಪ್ರಧಾನಿ ಮೋದಿ ಅವರು ಯುಪಿಎ ನಾಯಕರನ್ನು ಲೇವಡಿ ಮಾಡಿದ್ದಾರೆ.
ಕಾಂಗ್ರೆಸ್ ನಮ್ಮ ಅಧಿಕಾರದ ಅವಧಿಯಲ್ಲಿ 6 ಸರ್ಜಿಕಲ್ ಸ್ಟ್ರೈಕ್ ಮಾಡಿದ್ದೇವೆ ಎಂದು ಪಟ್ಟಿ ಬಿಡುಗಡೆ ಮಾಡಿದ ವಿಚಾರಕ್ಕೆ ರಾಜಸ್ಥಾನದ ಸಿಕಾರ್ ಲೋಕಸಭಾ ಕ್ಷೇತ್ರದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಮೋದಿ ತಿರುಗೇಟು ನೀಡಿದರು.
Advertisement
Advertisement
ಕಾಗದ ಚೂರು ಮತ್ತು ವಿಡಿಯೋ ಗೇಮ್‍ನಲ್ಲಿ 6 ಅಲ್ಲ 25 ಸರ್ಜಿಕಲ್ ಸ್ಟ್ರೈಕ್ ಮಾಡಿದರೆ ಏನೂ ಪ್ರಯೋಜನ? ಕಾಂಗ್ರೆಸ್ ಮಾಡಿದ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ನನಗೆ ಅನುಮಾನವಿದೆ. ಯಾರಿಗೂ ಗೊತ್ತಾಗದ ರೀತಿಯಲ್ಲಿ ದಾಳಿ ನಡೆಸಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.
Advertisement
ಕಾಂಗ್ರೆಸ್ ನಾಯಕರು 2016ರ ಮೊದಲ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಅಪಹಾಸ್ಯ ಮಾಡಿದರು. ನಂತರ ಅದರ ವಿರುದ್ಧ ಪ್ರತಿಭಟನೆ ಮಾಡಿದರು. ಈಗ ನೋಡಿದರೆ ನಮ್ಮ ಕಾಲದಲ್ಲೂ ಸರ್ಜಿಕಲ್ ಸ್ಟ್ರೈಕ್ ಮಾಡಿ ಮೀಟೂ ಎಂದು ಹೇಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
Advertisement
ರಿಮೋಟ್ ಕಂಟ್ರೋಲ್ ಆಡಳಿತದಲ್ಲಿ ಯಾವುದಾದರೂ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಪತ್ರಿಕೆಯಲ್ಲಿ ಓದಿದ್ದೀರಾ? ಕಾಂಗ್ರೆಸ್ ಅವರು ಸರ್ಜಿಕಲ್ ಸ್ಟ್ರೈಕ್ ಮಾಡಿದ್ದು ಪಾಕಿಸ್ತಾನದವರಿಗೂ ತಿಳಿದಿರಲಿಲ್ಲವೇ? ಭಾರತೀಯರಿಗೂ ತಿಳಿಯದ ಹಾಗೆ ಸರ್ಜಿಕಲ್ ಸ್ಟ್ರೈಕ್ ಮಾಡಲು ಸಾಧ್ಯವೇ? ನನ್ನ ಮೇಲೆ ಜನರು ಇಟ್ಟಿರುವ ಪ್ರೀತಿ ಮತ್ತು ನಂಬಿಕೆ ನೋಡಿ ನಮಗೂ ಸ್ವಲ್ಪ ಆ ಪ್ರೀತಿ ತೋರಿಸಲಿ ಎನ್ನುವ ಕಾರಣಕ್ಕೆ ಚುನಾವಣೆಯ ಸಮಯದಲ್ಲಿ ಸರ್ಜಿಕಲ್ ಸ್ಟ್ರೈಕ್‍ನ ಪ್ರಸ್ತಾಪ ಮಾಡಿದ್ದಾರೆ ಎಂದರು.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು, ನಮ್ಮ ಅಧಿಕಾರದ ಅವಧಿಯಲ್ಲೂ ಹಲವಾರು ಸರ್ಜಿಕಲ್ ಸ್ಟ್ರೈಕ್ ಮಾಡಿದ್ದೇವೆ ಅದರೆ ನಾವು ಅದನ್ನು ಪ್ರಚಾರಕ್ಕೆ ಬಳಸಿಕೊಂಡಿಲ್ಲ ಎಂದು ಹೇಳಿದ್ದರು.
ಗುರುವಾರ ಕಾಂಗ್ರೆಸ್ ತಮ್ಮ ಅಧಿಕಾರದ ಅವಧಿಯಲ್ಲಿ 2008 ರಿಂದ 2014 ರ ವರೆಗೆ ನಡೆದ 6 ಸರ್ಜಿಕಲ್ ಸ್ಟ್ರೈಕ್‍ಗಳ ವಿವರಗಳನ್ನು ಚಿತ್ರ ಸಮೇತ ಬಿಡುಗಡೆ ಮಾಡಿತ್ತು. ಕಾಂಗ್ರೆಸ್ ನಾಯಕ ರಾಜೀವ್ ಶುಕ್ಲಾ ಸುದ್ದಿ ಗೋಷ್ಠಿ ನಡೆಸಿ ನಮ್ಮ ಅವಧಿಯಲ್ಲೂ ಅನೇಕ ಸರ್ಜಿಕಲ್ ಸ್ಟ್ರೈಕ್‍ಗಳು ನಡೆದಿವೆ. ಅದರೆ ನಾವು ಅದನ್ನು ಪ್ರಚಾರಕ್ಕೆಂದು ಬಳಸಿಕೊಂಡಿಲ್ಲ ಎಂದು ಹೇಳಿದ್ದರು.