ನವದೆಹಲಿ: ಕೇಜ್ರಿವಾಲ್ ಕಾಶ್ಮೀರಿ ಹಿಂದೂಗಳನ್ನು ಅವಮಾನಿಸಿ ಸಿಕ್ಕಿ ಬಿದ್ದಿದ್ದಾರೆ. ಈಗ ಅದರಿಂದ ಹೊರಬರಲು ಅವರಿಗೆ ಇರುವ ಒಂದೇ ಒಂದು ಮಾರ್ಗವೆಂದರೆ ಅದು ಬಲಿಪಶು ಎಂದು ತೋರಿಸಿಕೊಳ್ಳುವುದಾಗಿದೆ ಎಂದು ಬಿಜೆಪಿ ಸಂಸದ ಗೌತಮ್ ಗಂಭೀರ್ ಲೇವಡಿ ಮಾಡಿದರು.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಹೊರಗೆ ಬಿಜೆಪಿ ಕಾರ್ಯಕರ್ತರು ಧ್ವಂಸ ಮಾಡಿದ ನಂತರ ಕೇಜ್ರಿವಾಲ್ ಅವರ ಜೀವಕ್ಕೆ ಬೆದರಿಕೆ ಇದೆ ಎಂದು ಆಮ್ ಆದ್ಮಿ ಪಕ್ಷ ಹೇಳಿಕೊಂಡಿತ್ತು. ಇದಕ್ಕೆ ಗಂಭೀರ್ ಟ್ವೀಟ್ ಮಾಡಿ ಪ್ರತಿಕ್ರಿಯಿಸಿದ್ದಾರೆ.
Advertisement
Advertisement
ಕೇಜ್ರಿವಾಲ್ ಅವರನ್ನು ಲೇವಡಿ ಮಾಡಿದ ಗೌತಮ್ ಗಂಭೀರ್, ಕೇಜ್ರಿವಾಲ್ ಪರವಾಗಿ ಟ್ವೀಟ್ ಮಾಡಿದ್ದಾರೆ. ಟ್ವೀಟ್‍ನಲ್ಲಿ ಹಲೋ ದೆಹಲಿ, ಕಾಶ್ಮೀರಿ ಹಿಂದೂಗಳ ಬಗ್ಗೆ ಅವಹೇಳನಕಾರಿ ಕಾಮೆಂಟ್‍ಗಳನ್ನು ಮಾಡಿದ ನಂತರ ನಾನು ಸಿಕ್ಕಿಬಿದ್ದಿದ್ದೇನೆ. ಹಲವಾರು ಸಂದರ್ಶನಗಳನ್ನು ನೀಡಿದ ನಂತರವೂ ಪರಿಸ್ಥಿತಿ ನಿಯಂತ್ರಣಕ್ಕೆ ಬರುತ್ತಿಲ್ಲ. ಈಗ ನನಗೆ ಒಂದೇ ಒಂದು ದಾರಿ ಇರುವುದು. ಅದೇನೆಂದರೆ ಬಲಿಪಶುವಾಗಿದ್ದೇನೆಂದು ತೋರಿಸಿಕೊಳ್ಳುವುದಾಗಿದೆ. ಬಿಜೆಪಿ ನನ್ನನ್ನು ಕೊಲ್ಲಲು ಬಯಸುತ್ತಿದೆ. ದಯವಿಟ್ಟು ಇದರಿಂದ ತಪ್ಪಿಸಿಕೊಳ್ಳಲು ಸಹಾಯ ಮಾಡಿ. ನಿಮ್ಮ ಪ್ರಚಾರ ಸಚಿವರು ಎಂದು ವ್ಯಂಗ್ಯವಾಡಿದ್ದಾರೆ.
Advertisement
नमस्ते दिल्ली
कश्मीरी हिन्दुओं का अपमान करके मैं बुरी तरह फँस चुका हूँ. लाख कोशिशों और बिकाऊ इंटरव्यू के बाद भी हालात काबू में नहीं आ रहे. अब एक ही रास्ता है, विक्टिम कार्ड। भाजपा मुझे जान से मार देना चाहती है. कृपया इसे फ़ैलाने में मदद करें!
आपका प्रचारमंत्री
— Gautam Gambhir (@GautamGambhir) March 30, 2022
ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು, ಬುಧವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಮೇಲೆ ದುಷ್ಕರ್ಮಿಗಳ ಗುಂಪೊಂದು ದಾಳಿ ನಡೆಸಿದೆ. ದೆಹಲಿ ಸಿಎಂ ಕೇಜ್ರಿವಾಲ್ ಅವರ ನಿವಾಸದ ಭದ್ರತಾ ಆಸ್ತಿಗಳನ್ನು ಬಿಜೆಪಿ ಕಾರ್ಯಕರ್ತರು ಧ್ವಂಸಗೊಳಿಸಿದ್ದಾರೆ. ಸಿಸಿಟಿವಿ ಕ್ಯಾಮೆರಾಗಳು ಹಾಗೂ ಭದ್ರತಾ ತಡೆಗೋಡೆಗಳು ಧ್ವಂಸವಾಗಿದೆ. ಈ ಮೂಲಕ ಕೇಜ್ರಿವಾಲ್ ಹತ್ಯೆಗೆ ಬಿಜೆಪಿ ಯತ್ನಿಸಿದೆ ಎಂದು ಆರೋಪಿಸಿದ್ದರು. ಇದನ್ನೂ ಓದಿ: ಕೇಜ್ರಿವಾಲ್ ಹತ್ಯೆಗೆ ಬಿಜೆಪಿ ಯತ್ನ – ಎಎಪಿ ಆರೋಪ
Advertisement
ಇತ್ತೀಚೆಗೆ ಬಿಡುಗಡೆಯಾಗಿದ್ದ ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಕುರಿತು ಕೇಜ್ರಿವಾಲ್ ವಿರೋಧವಾಗಿ ಹೇಳಿಕೆ ನೀಡಿದ್ದರು. ಇದಕ್ಕಾಗಿ ಅವರ ನಿವಾಸದ ಮುಂದೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಭದ್ರತಾ ತಡೆಗೋಡೆ ಹಾಗೂ ಸಿಸಿಟಿವಿ ಕ್ಯಾಮೆರಾಗಳು ಧ್ವಂಸಗೊಂಡಿದೆ ಎಂಬ ಆರೋಪ ಕೇಳಿ ಬಂದಿದೆ. ಇದನ್ನೂ ಓದಿ: 10ನೇ ದಿನದಲ್ಲಿ 9ನೇ ಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ