ತಿರುವನಂತಪುರಂ: ಮಲಯಾಳಂ ಸಿನಿ ರಂಗದಲ್ಲಿ ಸಂಚಲನ ಸೃಷ್ಟಿ ಮಾಡಿರೋ ಹೇಮಾ ವರದಿ (Hema Committee report), ಇದೀಗ ನಾನಾ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ತಮ್ಮ ಮೇಲೆ ನಡೆದ ಲೈಂಗಿಕ ದೌರ್ಜನ್ಯ (Sexual Assault) ಕುರಿತಂತೆ ಬಹಿರಂಗವಾಗಿ ನಟಿಯರು ಮಾತಾಡುತ್ತಿದ್ದಾರೆ. ಜೊತೆಗೆ ದೂರುಗಳು ದಾಖಲಾಗುತ್ತಿವೆ.
ಈ ನಡುವೆ ಮಲಯಾಳಂ ಸೂಪರ್ ಸ್ಟಾರ್ ಮೋಹನ್‌ಲಾಲ್ (Mohanlal) ಮೌನ ಮುರಿದು ಮಾತನಾಡಿದ್ದಾರೆ. ಮಲಯಾಳಂ ಚಿತ್ರರಂಗದ ಯಾವುದೇ ಪವರ್ ಗ್ರೂಪ್‌ನಲ್ಲಿ (ಶಕ್ತಿ ಬಣ) ನಾನು ಗುರುತಿಸಿಕೊಂಡಿಲ್ಲ. ಅಂತಹ ಬಣಗಳ ಅಸ್ತಿತ್ವದ ಬಗ್ಗೆ ನನಗೆ ಮಾಹಿತಿಯೂ ಇಲ್ಲ ಅಂತ ಹೇಳಿದ್ದಾರೆ. ಇದನ್ನೂ ಓದಿ: ಸಿನಿಮಾಗೆ ಬರೋಲ್ಲ, ನೋಡಲ್ಲ ಅನ್ನೋವಾಗ್ಲೆ ಗತ್ತು ಗಾಂಭೀರ್ಯದಿಂದ ನುಗ್ಗಲಿಲ್ವಾ ಎರಡು ಸಿನಿಮಾ: ದರ್ಶನ್ ಫ್ಯಾನ್ಸ್‌ಗೆ ಕಿಚ್ಚನ ಖಡಕ್ ರಿಪ್ಲೈ
Advertisement
Advertisement
ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ (ಅಮ್ಮ) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಮೊದಲ ಬಾರಿಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಮೋಹನ್ ಲಾಲ್, ಹೇಮಾ ಸಮಿತಿ ವರದಿ ಬಿಡುಗಡೆ ಮಾಡಿರುವುದು ಸರ್ಕಾರ ಉತ್ತಮ ನಿರ್ಧಾರವಾಗಿದೆ ಅಂತ ಹೇಳಿದ್ದಾರೆ. ಇದನ್ನೂ ಓದಿ: ದರ್ಶನ್‌ಗಾಗಿ ಬಟ್ಟೆ, ಡ್ರೈಪ್ರೂಟ್ಸ್ ತಂದ ವಿಜಯಲಕ್ಷ್ಮಿ – ನಿಮ್ಮೊಂದಿಗೆ ನಾನಿದ್ದೇನೆ ಎಂದು ದರ್ಶನ್‌ಗೆ ಅಭಯ
Advertisement
ರಾಜೀನಾಮೆ ನೀಡಲು ಕಾರಣವೇನು ಎಂಬ ಪ್ರಶ್ನೆಗೆ, ವರದಿ ಬಿಡುಗಡೆಯಾದ ಬೆನ್ನಲ್ಲೇ ಕಲಾವಿದರ ಸಂಘದ ವಿರುದ್ಧ ಆರೋಪಗಳು ಕೇಳಿಬಂದಿದ್ದು, ಈ ಹಿನ್ನೆಲೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕಾಯಿತು. ಸಂಘದ ಕೆಲವು ಸದಸ್ಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪಗಳು ಕೇಳಿಬಂದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ತಪ್ಪು ಮಾಡಿದವರ ವಿರುದ್ಧ ಸರಿಯಾದ ಸಾಕ್ಷಿಗಳಿದ್ದರೆ ಶಿಕ್ಷಿಸಲಿ ಎಂದು ಆಗ್ರಹಿಸಿದರು. ಇದನ್ನೂ ಓದಿ: ವಿಲನ್ ರವಿಶಂಕರ್ ಪುತ್ರನ ಚೊಚ್ಚಲ ಸಿನಿಮಾ: ಪ್ರೀ ಲುಕ್ ಅನಾವರಣ
Advertisement
ಸಾವಿರಾರು ಜನ ಕೆಲಸ ಮಾಡುವ ಮಲಯಾಳಂ ಚಿತ್ರರಂಗವು ಒಂದು ದೊಡ್ಡ ಉದ್ಯಮವಾಗಿದ್ದು, ಅಲ್ಲಿ ತಲೆದೋರಿದ ಸಮಸ್ಯೆಗಳನ್ನು ಪರಿಹರಿಸಲು ಕಲಾವಿದರ ಸಂಘಕ್ಕೆ ಸಾಧ್ಯವಾಗಲಿಲ್ಲ ಎಂದು ಸಹ ಅವರು ವಿಷಾದಿಸಿದರು. ಇದನ್ನೂ ಓದಿ: ‘ದಿ ಗೋಟ್’ ಅಡ್ಡಾದಿಂದ ಧೂಳೆಬ್ಬಿಸೋ ಸಾಂಗ್ : ದಳಪತಿ ಫ್ಯಾನ್ಸ್ ದಿಲ್ ಖುಷ್
ಮಲಯಾಳ ಸಿನಿಮಾ ರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಲೈಂಗಿಕ ಶೋಷಣೆ, ತಾರತಮ್ಯ ಮತ್ತು ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುವ ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿ ಇತ್ತೀಚೆಗೆ ಬಿಡುಗಡೆಯಾಗಿತ್ತು. ವರದಿ ಬಹಿರಂಗಗೊಂಡ ಬೆನ್ನಲ್ಲೇ ಕಲಾವಿದರ ಸಂಘಕ್ಕೆ ಅಧ್ಯಕ್ಷ ನಟ ಮೋಹನ್‌ಲಾಲ್, ಇತರ ಪದಾಧಿಕಾರಿಗಳು ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದರು.
ವರದಿ ಬಿಡುಗಡೆಯಾದ ಬೆನ್ನಲ್ಲೇ ಮಲಯಾಳಂ ಸಿನಿಮಾ ರಂಗದಲ್ಲಿ ಸಹ ಕಲಾವಿದೆಯಾಗಿ ಗುರುತಿಸಿಕೊಂಡಿರೋ ನಟಿ ಸೋನಿಯಾ ಮಲಹಾರ್ ಸೇರಿದಂತೆ ಅನೇಕ ನಟಿಯರು ಮುಂದೆ ಬಂದು, ದೂರುಗಳನ್ನು ದಾಖಲಿಸುತ್ತಿದ್ದಾರೆ. ಇನ್ನೂ ಹಲವರು ದೂರು ನೀಡಲು ಚಿಂತನೆ ಕೂಡ ನಡೆಸಿದ್ದಾರಂತೆ. ಹಾಗಾಗಿ ನಟಿಯರು ಒತ್ತಡದಲ್ಲಿದ್ದಾರೆ ಅನ್ನುವ ಮಾಹಿತಿಯೂ ಇದೆ. ಈವರೆಗೆ ಒಟ್ಟು 17 ದೂರುಗಳು ದಾಖಲಾಗಿದೆ ಎಂದು ವರದಿಗಳು ಉಲ್ಲೇಖಿಸಿವೆ. ಇದನ್ನೂ ಓದಿ: ‘ಮೆಜೆಸ್ಟಿಕ್-2’ ಚಿತ್ರದಲ್ಲಿ ಮಾಲಾಶ್ರೀ : ಗುಣಗಾನ ಸಾಂಗ್ ನಲ್ಲಿ ಆ್ಯಕ್ಷನ್ ಕ್ವೀನ್