ಚಿಕ್ಕಮಗಳೂರು: ಸಿಎಂ ಸಿದ್ದರಾಮಯ್ಯನವರು (Siddaramaiah) ಯಾವಾಗಲೂ ಬಹುತ್ವದ ಬಗ್ಗೆ ಮಾತನಾಡುತ್ತಾರೆ. ಆದರೆ ಬಹುತ್ವವನ್ನ ಒಪ್ಪಿಕೊಂಡು, ಅಳವಡಿಸಿಕೊಂಡಿರುವುದು ಕೇವಲ ಹಿಂದೂ ಧರ್ಮ (Hindu Religion) ಮಾತ್ರ, ಬಹುತ್ವಕ್ಕೆ ಬೆಲೆ ಇರುವುದು ಹಿಂದೂ ಧರ್ಮದಲ್ಲಿಯೇ ಎಂದು ಮಾಜಿ ಸಚಿವ ಸಿ.ಟಿ.ರವಿ (CT Ravi) ಹೇಳಿದ್ದಾರೆ.
ಚಿಕ್ಕಮಗಳೂರು (Chikkamagaluru) ತಾಲೂಕಿನ ದತ್ತ ಪೀಠದಲ್ಲಿ ನಡೆದ ದತ್ತ ಜಯಂತಿಯ (Datta Jayanthi) ಹೋಮ ಪೂಜೆಯ ಬಳಿಕ ಮಾತನಾಡಿದ ಅವರು, ವಿಶ್ವ ಹಿಂದೂ ಪರಿಷತ್ ಬಜರಂಗದಳದ ವತಿಯಿಂದ ಹಮ್ಮಿಕೊಂಡಿದ್ದ ದತ್ತ ಮಾಲೆ ಜಯಂತಿ ಕಾರ್ಯಕ್ರಮ ವಿದ್ಯುಕ್ತವಾಗಿ ಸಂಪನ್ನಗೊಂಡಿದೆ. ಇದಕ್ಕೆ ಸಹಕರಿಸಿದ ಎಲ್ಲರಿಗೂ ಕೂಡ ವಿಶೇಷ ಧನ್ಯವಾದ ಎಂದರು. ಸರ್ಕಾರದ ಪ್ರತಿನಿಧಿಯಾಗಿ ಯಾರಾದರೂ ಒಬ್ಬರು ಭಾಗವಹಿಸಬೇಕಾಗಿತ್ತು. ಸರ್ಕಾರದ ಪ್ರತಿನಿಧಿಗಳಾಗಿ ಯಾರು ಬಾರದೇ ಇರುವುದು ದುರಾದೃಷ್ಟಕರ ಹಾಗೂ ನೋವಿನ ಸಂಗತಿ ಎಂದರು. ಇದನ್ನೂ ಓದಿ: ಯೂಟ್ಯೂಬ್‌ನಲ್ಲಿ ವಿಶ್ವದಾಖಲೆ ಬರೆದ ನರೇಂದ್ರ ಮೋದಿ
Advertisement
Advertisement
ಇದು ಮುಜರಾಯಿ ಇಲಾಖೆಗೆ ಸೇರಿದ ದತ್ತಾತ್ರೇಯ ಸ್ವಾಮಿ ದೇವಸ್ಥಾನವಾಗಿದ್ದು, ಯಾರಾದರೂ ಒಬ್ಬರು ಭಾಗವಹಿಸಬೇಕಾದದ್ದು ಕ್ರಮವಾಗಿತ್ತು. ಯಾರೂ ಭಾಗವಹಿಸದೇ ಇರುವುದು ದುರಾದೃಷ್ಟಕರ. ಅವರ ಮನಸ್ಸಿನಲ್ಲಿ ಹಿಂದೂ ಪೂಜಾ ವಿಧಿ ವಿಧಾನಗಳಲ್ಲಿ ಭಾಗವಹಿಸಿದರೆ ಜಾತ್ಯಾತೀತತೆಗೆ ಭಂಗ ಬರುತ್ತದೆ ಎಂಬ ಭಾವನೆ ಇರಬಹುದು. ಈದ್ ಮಿಲಾದ್‌ನಲ್ಲಿ ಪಾಲ್ಗೊಳ್ಳುತ್ತಾರೆ. ದತ್ತ ಜಯಂತಿಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದರೆ ಏನರ್ಥ? ಯಾವ ಸಂದೇಶ ಕೊಡುತ್ತಿದ್ದಾರೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಪಾಕಿಸ್ತಾನದ ಜೊತೆ ಭಾರತ ಸಂಬಂಧವನ್ನು ಸುಧಾರಿಸದೇ ಇದ್ದಲ್ಲಿ ಕಾಶ್ಮೀರಕ್ಕೆ ಗಾಜಾ ಪರಿಸ್ಥಿತಿ ಬರಬಹುದು: ಫಾರೂಖ್ ಅಬ್ದುಲ್ಲಾ
Advertisement
Advertisement
ನಾವು ಹಿಂದೂ ಭಾವನೆಗಳ ಜೊತೆಗಿಲ್ಲ ಎಂಬ ಸಂದೇಶವನ್ನು ಅವರು ಕೊಡುತ್ತಿದ್ದಾರೆಂದು ನನಗೆ ಅನಿಸುತ್ತಿದೆ. ಹಿಂದೂ ಧರ್ಮ ಮಾತ್ರ ಜಗತ್ತಿನ ಎಲ್ಲವನ್ನು ಒಳಗೊಳ್ಳುವಂತದ್ದು. ಇಲ್ಲಿ ಬಹುತ್ವಕ್ಕೆ ಅವಕಾಶವಿದೆ. ಅವರವರ ಭಾವಕ್ಕೆ, ಭಕ್ತಿಗೆ ತೆರನಾಗಿ ಇರುತಿಹನು ಶಿವಯೋಗಿ ಎಂಬ ತತ್ವದ ಮೇಲೆ ನಂಬಿಕೆ ಇಟ್ಟಿರುವುದು ಹಿಂದೂ ಧರ್ಮ. ಜಗತ್ತಿನ ಯಾವ ಶಕ್ತಿಯೂ ಕೂಡ ಶಿವನನ್ನು ಹಿಂದೂ ಧರ್ಮದಿಂದ ಬೇರ್ಪಡಿಸಲು ಸಾಧ್ಯವಿಲ್ಲ. ಬ್ರಹ್ಮ, ವಿಷ್ಣು, ಮಹೇಶ್ವರರು ಏಕೀಭಾವವಾಗಿ ಅವತರಿಸಿರುವುದೇ ದತ್ತಾತ್ರೇಯರ ಅವತಾರ. ಯಾವ ಶಕ್ತಿಯೂ ಕೂಡ ಅದನ್ನು ಬೇರ್ಪಡಿಸಲು ಸಾಧ್ಯವಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಕಲ್ಕಡ್ಕ ಪ್ರಭಾಕರ ಭಟ್ ವಿರುದ್ಧ ಎಫ್‌ಐಆರ್ ದಾಖಲು