ಚಂಡೀಗಢ: ಪಂಜಾಬ್ ಮಾಜಿ ಶಾಸಕರು 2 ಬಾರಿ, 5 ಬಾರಿ ಅಥವಾ ಹತ್ತು ಬಾರಿ ಗೆದ್ದಿದ್ದರೂ ಅವರು ಇನ್ನು ಮುಂದೆ ಒಂದು ಅವಧಿಗೆ ಮಾತ್ರ ಪಿಂಚಣಿ ಪಡೆಯಲು ಅರ್ಹರಾಗಿರುತ್ತಾರೆ. ಅವರು ಸಲ್ಲಿಸಿದ್ದ ಸೇವೆಗೆ ಪ್ರತಿ ಅವಧಿಗೂ ಪಿಂಚಣಿ ಪಡೆಯುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ತಿಳಿಸಿದ್ದಾರೆ.
Advertisement
ಶುಕ್ರವಾರ ವೀಡಿಯೋ ಸಂದೇಶವೊಂದರಲ್ಲಿ ಮಾತನಾಡಿರುವ ಅವರು, ಈ ಹಿಂದೆ ಶಾಸಕರಾಗಿದ್ದ ಹಲವಾರು ಸಂಸದರು ಸಹ ಪಿಂಚಣಿ ಪಡೆಯುತ್ತಿದ್ದಾರೆ. ಆದರೆ ಇನ್ನು ಮುಂದೆ ಅವರ ಪಿಂಚಣಿಯನ್ನು ಒಂದು ಅವಧಿಗೆ ಮಾತ್ರ ಸೀಮಿತಗೊಳಿಸಲಾಗುತ್ತದೆ. ಇದರಿಂದ ಉಳಿತಾಯವಾಗುವ ಹಣವನ್ನು ಜನರ ಕಲ್ಯಾಣಕ್ಕೆ ವಿನಿಯೋಗಿಸಲಾಗುವುದು ಎಂದಿದ್ದಾರೆ. ಇದನ್ನೂ ಓದಿ: ಭಗತ್ ಸಿಂಗ್ ಪುಣ್ಯಸ್ಮರಣೆಯಂದು ಪಂಜಾಬ್‌ನಲ್ಲಿ ಸಾರ್ವಜನಿಕ ರಜೆ
Advertisement
`ನಮ್ಮ ರಾಜಕೀಯ ನಾಯಕ ಸಾರ್ವಜನಿಕರ ಸೇವೆ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಕೈಮುಗಿದು ಮತ ಪಡೆದು ಗೆಲ್ಲುತ್ತಾರೆ. ಆದರೆ 3-4 ಬಾರಿ ಗೆದ್ದ ನಂತರವೂ ಹಲವು ಹಲವು ಶಾಸಕರು ಮುಂದಿನ ಚುನಾವಣೆಯಲ್ಲಿ ಸೋತರು ಅಥವಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಸಿಗದಿದ್ದರೂ ತಿಂಗಳಿಗೆ ಲಕ್ಷಾಂತರ ರೂಪಾಯಿ ಪಿಂಚಣಿ ಪಡೆಯುತ್ತಾರೆ. ಇದು ರಾಜ್ಯದ ಬೊಕ್ಕಸಕ್ಕೆ ದೊಡ್ಡ ಹೊಡೆತ ನೀಡುತ್ತಿದೆ ಭಗವಂತ್ ಮಾನ್ ಹೇಳಿದ್ದಾರೆ.
Advertisement
Advertisement
ಚುನಾವಣೆಯಲ್ಲಿ ಸೋತರೂ ಕೆಲವರು 3.50 ರಿಂದ 5 ಲಕ್ಷ ರೂ. ವರೆಗೂ ಪಿಂಚಣಿ ಪಡೆಯುತ್ತಿದ್ದಾರೆ. ಲಾಲ್‌ಸಿಂಗ್, ಸರ್ವಾನ್‌ಸಿಂಗ್ ಫಿಲೌ ಹಾಗೂ ರಾಜಿಂದರ್ ಕೌರ್ ಭಟ್ಟಾಲ್ ತಿಂಗಳಿಗೆ 3.55 ಲಕ್ಷ ಪಿಂಚಣಿ ಪಡೆಯುತ್ತಿದ್ದಾರೆ. ರವಿಂದರ್ ಸಿಂಗ್, ಬೈಲ್ವಿಂದರ್ ಸಿಂಗ್ 2.75 ಲಕ್ಷ ಹಾಗೂ ಅಕಾಲಿ ದಳದ ಮುಖ್ಯಸ್ಥ ಪ್ರಕಾಶ್ ಸಿಂಗ್ ಬಾದಲ್ 5 ಲಕ್ಷ ಪಿಂಚಣಿ ಪಡೆಯುತ್ತಿದ್ದಾರೆ. ಇದರಿಂದ ಬೊಕ್ಕಸಕ್ಕೆ ಕೋಟ್ಯಂತರ ರೂ. ಆರ್ಥಿಕ ಹೊರೆಯಾಗುತ್ತಿದೆ ಎಂದು ಆತಂಕಪಟ್ಟಿದ್ದಾರೆ. ಇದನ್ನೂ ಓದಿ: ಉಡ್ತಾ ಪಂಜಾಬ್ ಅಲ್ಲ, ಪ್ರಗತಿಪರ ಪಂಜಾಬ್: ಭಗವಂತ್ ಮಾನ್
ಒಂದು ಅವಧಿಗೆ ಮಾತ್ರ ಶಾಸಕರಾಗಿ ಆಯ್ಕೆಯಾದರೂ ಕೂಡ ಅವರಿಗೆ ಜೀವನಪರ್ಯಂತ ಪಿಂಚಣಿ ಹಣ ನೀಡಲಾಗುತ್ತದೆ. ಆದರೆ ಪಂಜಾಬ್‌ನ ಭಗವಂತ್ ಮಾನ್ ಸರ್ಕಾರಲ್ಲಿ ಈ ಯೋಜನೆಗೆ ಕಡಿವಾಣ ಹಾಕಲು ಮುಂದಾಗಿದೆ. ಇನ್ಮುಂದೆ ಶಾಸಕರು ಎಷ್ಟು ಬಾರಿ ಗೆದ್ದರೂ ಒಂದೇ ಅವಧಿಗೆ ಪಿಂಚಣಿ ಪಡೆಯಲಿದ್ದಾರೆ ಎಂದು ಪಂಜಾಬ್ ಮುಖ್ಯಮಂತ್ರಿ ಮಾಹಿತಿ ನೀಡಿದ್ದಾರೆ.