ಬಳ್ಳಾರಿ: ದೇಶಾದ್ಯಂತ ಭಾರತೀಯ ವೈದ್ಯರು ಸಂಘದಿಂದ ನಡೆಯುತ್ತಿರುವ ಮುಷ್ಕರದ ಬಿಸಿ ಬಳ್ಳಾರಿಯಲ್ಲೂ ತಟ್ಟಿದ್ದು, ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಒಪಿಡಿ ಸೇವೆ ಸ್ಥಗಿತಗೊಂಡಿದೆ.
ಸಂಜೆ ಆರು ಗಂಟೆಯವರೆಗೆ ಸೇವೆ ಸ್ಥಗಿತಗೊಳ್ಳಲಿದ್ದು, ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ತುರ್ತು ಸೇವೆ ಹಾಗೂ ಒಳರೋಗಿ ಸೇವೆ ಮುಂದುವರಿದಿದೆ. ಮುಷ್ಕರ್ ಹಿನ್ನೆಲೆಯಲ್ಲಿ ಬಳ್ಳಾರಿಯಲ್ಲಿ ವೈದ್ಯರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಡಾ ರಾಮ್ ಪ್ರಸಾತ್ ಮನೋಹರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
Advertisement
ಸರ್ಕಾರಿ ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆ, ವಿಮ್ಸ್ ಆಸ್ಪತ್ರೆಯ ವೈದ್ಯರು ಸಿಬ್ಬಂದಿಗಳಿಗೆ ರಜೆ ಹಾಕದಂತೆ ಸೂಚನೆ ನೀಡಲಾಗಿದ್ದು, ರೋಗಿಗಳಿಗೆ ತೊಂದರೆಯಾಗದಂತೆ ಚಿಕಿತ್ಸೆ ನೀಡುವಂತೆ ವಿಮ್ಸ್ ಆಸ್ಪತ್ರೆಯ ಡಿಎಚ್‍ಓ ಹಾಗೂ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.
Advertisement
ಪ್ರತಿಭಟನೆ ಏಕೆ:
ರಾಷ್ಟ್ರೀಯ ವೈದ್ಯಕೀಯ ಆಯೋಗದ (ಎನ್‍ಎಂಸಿ) ಮಸೂದೆಯನ್ನು ಜಾರಿಗೆ ತರದಂತೆ ಒತ್ತಾಯಿಸಿ ಭಾರತೀಯ ವೈದ್ಯಕೀಯ ಸಂಘವು ಬಂದ್‍ಗೆ ಕರೆ ನೀಡಿದೆ.
Advertisement
ಏನಿದು ಎನ್‍ಎಂಸಿ ಮಸೂದೆ?:
ಕೇಂದ್ರ ಸರ್ಕಾರ ವೈದ್ಯಕೀಯ ಶಿಕ್ಷಣ ಕ್ಷೇತ್ರ ಹಾಗೂ ವೈದ್ಯ ವೃತ್ತಿಯಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ `ರಾಷ್ಟ್ರೀಯ ವೈದ್ಯಕೀಯ ಆಯೋಗ-2017′ ವಿಧೇಯಕವನ್ನು ಲೋಕಸಭೆಯಲ್ಲಿ ಮಂಡಿಸಲಾಗಿತ್ತು. ಈಗಿರುವ ಭಾರತೀಯ ವೈದ್ಯಕೀಯ ಪರಿಷತ್ (ಎಂಸಿಐ) ವಿಸರ್ಜಿಸಿ ಅದರ ಸ್ಥಾನದಲ್ಲಿ ರಾಷ್ಟ್ರೀಯ ವೈದ್ಯಕೀಯ ಆಯೋಗ ರಚಿಸುವುದು ಈ ವಿಧೇಯಕದ ಪ್ರಮುಖ ಉದ್ದೇಶವಾಗಿದೆ.