ಬೆಂಗಳೂರು: ಕೋಲ್ಕತ್ತಾದಲ್ಲಿ ವೈದ್ಯೆ ಅತ್ಯಾಚಾರ ಹಾಗೂ ಹತ್ಯೆ (Kolkata Doctor Rape and Murder) ಖಂಡಿಸಿ ಶನಿವಾರ (ಆ.17) ರಾಜ್ಯಾದ್ಯಂತ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು (OPD Service) ಸ್ಥಗಿತಗೊಳ್ಳಲಿದೆ.
ಇಂಡಿಯನ್ ಮೆಡಿಕಲ್ ಅಸೋಸಿಯೇಶನ್‌ನಿಂದ (Indian Medical Association) ಬಂದ್‌ಗೆ ಕರೆ ನೀಡಲಾಗಿದ್ದು, ದೇಶಾದ್ಯಂತ ಪ್ರತಿಭಟನೆ ನಡೆಯಲಿದೆ. ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ರಾಜ್ಯ ಘಟಕ ಬಂದ್‌ಗೆ ಬೆಂಬಲ ನೀಡಿದ್ದು, ಅಸೋಸಿಯೇಶನ್ ರಾಜ್ಯಾಧ್ಯಕ್ಷ ಶ್ರೀನಿವಾಸ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಇದನ್ನೂ ಓದಿ: ಪಶ್ಚಿಮ ಘಟ್ಟದಲ್ಲಿ ಭೂಪರಿವರ್ತನೆಗೆ ತಾತ್ಕಾಲಿಕ ತಡೆ: ಈಶ್ವರ ಖಂಡ್ರೆ
ಈ ಕುರಿತು ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ರಾಜ್ಯಾಧ್ಯಕ್ಷ ಶ್ರೀನಿವಾಸ್ ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿ, ಶನಿವಾರ ಬೆಳಿಗ್ಗೆ 6 ಗಂಟೆಯಿಂದ ಭಾನುವಾರ ಬೆಳಿಗ್ಗೆ ಆರು ಗಂಟೆಯವರೆಗೂ ಓಪಿಡಿ ಸೇವೆ ಇರೋದಿಲ್ಲ. 24 ಗಂಟೆಗಳ ಕಾಲ ಹೊರ ರೋಗಿಗಳ ವಿಭಾಗ ಬಂದ್ ಆಗಲಿದೆ. ಎಮರ್ಜೆನ್ಸಿ ಪೇಷೆಂಟ್‌ಗಳಿಗೆ ಮಾತ್ರ ಟ್ರೀಟ್‌ಮೆಂಟ್ ಇರುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಶೀಘ್ರವೇ ಜಾರ್ಖಂಡ್ ಮಾಜಿ ಸಿಎಂ ಚಂಪೈ ಸೊರೆನ್ ಬಿಜೆಪಿ ಸೇರ್ಪಡೆ ಸಾಧ್ಯತೆ
ಪ್ರತಿಭಟನೆ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶನಿವಾರ ಬೆಳಗ್ಗೆ ಆರು ಗಂಟೆಯಿಂದ ಭಾನುವಾರ ಬೆಳಗ್ಗೆ ಆರು ಗಂಟೆಯವರೆಗೂ ಪ್ರತಿಭಟನೆ ಮಾಡುತ್ತಿದ್ದೇವೆ. ಎಮರ್ಜೆನ್ಸಿ ರೋಗಿಗಳಿಗೆ ಯಾವುದೇ ತೊಂದರೆ ಆಗಲ್ಲ. ಓಪಿಡಿ ಸೇವೆ ಮಾತ್ರ ಬಂದ್ ಮಾಡುತ್ತಿದ್ದೇವೆ. ಒಬ್ಬ ಹೆಣ್ಣು ಮಗಳ ಮೇಲೆ ಅತ್ಯಾಚಾರ ಆಗಿದೆ. ರಾತ್ರಿ ಡ್ಯುಟಿ ವೇಳೆ ಈ ಥರ ಆಗುತ್ತಿದೆ. ಇಂಡಿಯನ್ ಮೆಡಿಕಲ್ ಅಸೋಸಿಯೇಶನ್‌ನಲ್ಲಿ 30 ಸಾವಿರ ಮಂದಿ ಇದ್ದಾರೆ. ಒಂದೂವರೆ ಲಕ್ಷ ವೈದ್ಯರು ಇದ್ದಾರೆ. ಎಲ್ಲರಿಗೂ ರಿಕ್ವೆಸ್ಟ್ ಮಾಡಿಕೊಂಡಿದ್ದೇವೆ. ಫನಾ, ಪೀಡಿಯಾಟ್ರಿಕ್ ಅಸೋಸಿಯೇಶನ್ ಕೂಡ ಸೇರುತ್ತಾರೆ. ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಕಚೇರಿ ಬಳಿ ಎಲ್ಲಾ ಸೇರಿ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ವಿ.ಸೋಮಣ್ಣಗೆ ಬಿಗ್ ಶಾಕ್ – ಸಂಸದರ ಕಚೇರಿ ವಾಪಸ್ ಪಡೆದ ಸರ್ಕಾರ
ಇನ್ನು ನಾಳಿನ ವೈದ್ಯರ ಪ್ರತಿಭಟನೆಗೆ ಸಚಿವ ದಿನೇಶ್ ಗುಂಡೂರಾವ್ ಪರೋಕ್ಷವಾಗಿ ಬೆಂಬಲ ನೀಡಿದ್ದಾರೆ. ಪ್ರತಿಭಟನೆ ಉದ್ದೇಶ ಒಳ್ಳೆದಿದೆ. ಸಾರ್ವಜನಿಕರಿಗೆ ತೊಂದರೆ ಆಗದೇ ಇರೋಥರ ಮಾಡಲಿ ಎಂದು ದಿನೇಶ್ ಗುಂಡೂರಾವ್ ಪರೋಕ್ಷವಾಗಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಶನಿವಾರ ಖಾಸಗಿ ಆಸ್ಪತ್ರೆಗಳ ಮುಷ್ಕರ ಹಿನ್ನೆಲೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನಾಳೆ ಖಾಸಗಿ ಆಸ್ಪತ್ರೆಗಳು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಮೊನ್ನೆ ಪ್ರಿನ್ಸಿಪಲ್ ಸೆಕ್ರೆಟರಿಯ ಬಳಿ ಮಾತನಾಡಿದ್ದೇನೆ. ಏನೆಲ್ಲಾ ಕ್ರಮ ಕೈಗೊಳ್ಳಲು ಸಾಧ್ಯವಿದೆ ಎಂದು ಚರ್ಚಿಸಲು ಹೇಳಿದ್ದೇನೆ. ಪ್ರತಿಭಟನೆ ಆಗಲಿ, ಅವರ ಅಭಿಪ್ರಾಯ ವ್ಯಕ್ತಪಡಿಸಲಿ. ಸಾರ್ವಜನಿಕರಿಗೆ ತೊಂದರೆಯಾಗಬಾರದು. ತೊಂದರೆಯಾಗದಂತೆ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಎಲ್ಲಾ ಅಸೋಸಿಯೇಶನ್ ಜೊತೆ ನಾನು ಸಭೆ ಕರೆದಿದ್ದೇನೆ. ಮುನ್ನೆಚ್ಚರಿಕಾ ಕ್ರಮದ ಬಗ್ಗೆ ಚರ್ಚಿಸುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ತವರು ಮನೆಗೆ ಹಣ ಕಳಿಸಿ ರಾಬರಿ ನಾಟಕವಾಡಿದ್ದ ಪಿಎಸ್‌ಐ ಪತ್ನಿಯ ಮೇಲೆ ಕೇಸ್
ಪ್ರತಿಭಟನೆಗೆ ಯಾರೆಲ್ಲ ಬೆಂಬಲ?
*ಫನಾ ಬೆಂಬಲ ಖಾಸಗಿ ಆಸ್ಪತ್ರೆಗಳ ಒಕ್ಕೂಟ
*ಸರ್ಕಾರಿ ವೈದ್ಯಾಧಿಕಾರಿಗಳ ಅಸೋಸಿಯೇಶನ್
*ಮಕ್ಕಳ ವೈದ್ಯರ ಅಸೋಸಿಯೇಶನ್
*ಆರ್ಥೋಪಿಡಿಕ್ ಅಸೋಸಿಯೇಶನ್
*ಮೆಡಿಕಲ್ ಕಾಲೇಜು ವೈದ್ಯರ ಅಸೋಸಿಯೇಶನ್