-ಮಹಿಳಾ ಉದ್ಯಮಿಗಳಿಗೆ ಸರ್ಕಾರದಿಂದ ಪ್ರೋತ್ಸಾಹ
ಬೆಂಗಳೂರು: ಮಹಿಳೆಯರನ್ನು ಉದ್ಯಮದತ್ತ ಇನ್ನಷ್ಟು ಆಕರ್ಷಿಸಲು ಮೈಸೂರು, ಧಾರವಾಡ, ಹಾರೋಹಳ್ಳಿ ಮತ್ತು ಕಲಬುರಗಿಯಲ್ಲಿ ಮಹಿಳೆಯರಿಗಾಗಿಯೇ ಪ್ರತ್ಯೇಕ ಮಹಿಳಾ ಉದ್ಯಮ ಪಾರ್ಕ್‍ಗಳು ಶೀಘ್ರದಲ್ಲೇ ಪ್ರಾರಂಭವಾಗಲಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರು ಹೇಳಿದ್ದಾರೆ.
Advertisement
ಗುರುವಾರ ನಗರದ ಖಾಸಗಿ ಹೊಟೇಲ್‍ನಲ್ಲಿ ಅಂತಾರಾಷ್ಟ್ರೀಯ ಮಹಿಳಾ ಉದ್ಯಮ ಶೀಲತಾ ಪ್ರಯುಕ್ತ ಉಬುಂಟು ಸಂಸ್ಥೆ ಹಮ್ಮಿಕೊಂಡಿದ್ದ ‘ಟುಗೆದರ್ ವಿ ಗ್ರೋ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಉಬಂಟು, (UNUNTU-consortium of women entrepreneur’s associations) ಇದೊಂದು ಮಹಿಳಾ ವಾಣಿಜ್ಯೋದಮ ಒಕ್ಕೂಟಗಳ ಸಂಘಟನೆಯಾಗಿದೆ. ಇದರಡಿ ಸುಮಾರು 30 ಮಹಿಳಾ ಉದ್ಯಮಿಗಳ ಸಂಘಟನೆಗಳು ಹಾಗೂ 1500 ಸದಸ್ಯರ ಒಂದೇ ವೇದಿಕೆಯಡಿ ಕೆಲಸ ಮಾಡುತ್ತಾರೆ. ದೇಶದಲ್ಲೇ ಮೊದಲ ಬಾರಿಗೆ ಮಹಿಳಾ ಉದ್ಯಮಿಗಳಿಗಾಗಿಯೇ ನಿರ್ದಿಷ್ಟ ಕೈಗಾರಿಕಾ ಪಾರ್ಕ್ ಸ್ಥಾಪಿಸುತ್ತಿರುವ ಮೊದಲ ರಾಜ್ಯ ನಮ್ಮ ಕರ್ನಾಟಕ. ಇದರ ಸದುಪಯೋಗವನ್ನು ಪಡೆದುಕೊಂಡರೆ ಇದರ ಉದ್ದೇಶ ಸಾರ್ಥಕವಾಗುತ್ತದೆ ಎಂದು ತಿಳಿಸಿದರು.
Advertisement
Advertisement
ಮಹಿಳೆಯರು ಸ್ವಯಂ ಉದ್ಯಮಿಗಳಾಗಿ ಇನ್ನೊಬ್ಬರಿಗೆ, ಉದ್ಯೋಗ ನೀಡುವ ಹಂತಕ್ಕೆ ಬೆಳೆಯುವ ಮೂಲಕ ರಾಜ್ಯದ ಕೈಗಾರಿಕಾ ಪ್ರಗತಿಯಲ್ಲಿ ಕೈ ಜೋಡಿಸಬೇಕು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿದ್ದಾರೆ. ನೀವು ಉದ್ಯೋಗ ಪಡೆದರಷ್ಟೇ ಸಾಲದು. ಉದ್ಯಮಿಯಾಗುವುದರ ಜೊತೆಗೆ ನೂರಾರು ಜನರಿಗೆ ಕೆಲಸ ಕೊಡುವ ಮಟ್ಟಕ್ಕೆ ಬೆಳೆದಾಗ ಮಹಿಳಾ ಸಬಲೀಕರಣಕ್ಕೆ ನಿಜವಾದ ಅರ್ಥ ಬರುತ್ತದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಬಿಟ್‍ಕಾಯಿನ್ ಹಗರಣ – ರಾಕೇಶ್ ಸಿದ್ದರಾಮಯ್ಯ ಹೆಸರು ಎಳೆದು ತಂದ ಬಿಜೆಪಿ
Advertisement
ಇನ್ಫೋಸಿಸ್‍ನ ಸುಧಾ ನಾರಾಯಣ ಮೂರ್ತಿ, ಕಿರಣ್ ಮಜುಂದಾರ್ ಷಾ, ಸೇರಿದಂತೆ ಅನೇಕ ಯಶಸ್ವಿ ಮಹಿಳಾ ಉದ್ಯಮಿಗಳು ನಮಗೆಲ್ಲರಿಗೂ ಆದರ್ಶಪ್ರಾಯವಾಗಿದ್ದಾರೆ. ಅವರ ಜೀವನದ ಯಶೋಗಾಧೆ ಇಂದಿನ ಯುವ ಮಹಿಳಾ ಉದ್ಯಮಿಗಳಿಗೆ ಪ್ರೇರಣೆಯಾಗಬೇಕು. ಮಹಿಳೆಯರನ್ನು ಉದ್ಯಮದತ್ತ ಆಕರ್ಷಿಸಲು ನಮ್ಮ ಸರ್ಕಾರ ರಾಜ್ಯದಲ್ಲಿ ಅನೇಕ ಯೋಜನೆಗಳನ್ನು ಜಾರಿ ಮಾಡಿದೆ. ಉದ್ಯಮ ಶೀಲತೆಯ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಳ್ಳುವ ಮೂಲಕ ಉದ್ಯೋಗದಾತರಾಗಿ ಎಂದು ಸಲಹೆ ನೀಡಿದರು.
ಸ್ವಂತ ಉದ್ಯಮ ಸ್ಥಾಪಿಸಿ, ಉದ್ಯೋಗದಾತರಾಗುವುದರ ಜೊತಗೆ ಇತರರೂ ನಿಮ್ಮಂತೆ ಉದ್ಯಮಿಗಳಾಗಬೇಕು ಎಂಬುದು ನನ್ನ ಅಭಿಲಾಷೆಯಾಗಿದೆ. ಈ ನಿಟ್ಟಿನಲ್ಲಿ ನಮ್ಮಇಲಾಖೆ ‘ ಉದ್ಯಮಿಯಾಗು, ಉದ್ಯೋಗ ನೀಡು’ ಕಾರ್ಯಕ್ರಮ ಹಮ್ಮಿಕೊಂಡಿದ್ದೇವು. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿದ್ದು, ಮುಂಬರುವ ದಿನಗಳಲ್ಲಿ ಬೇರೆಬೇರೆ ಜಿಲ್ಲೆಗಳಲ್ಲೂ ಈ ಕಾರ್ಯಕ್ರಮನಡೆಯಲಿದೆ. ಮಹಿಳಾ ಉದ್ಯಮಿಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಹೆಚ್ಚಿನ ಅರಿವಿರುವ “ಉಬುಂಟು” ದಂತಹ ಸಂಸ್ಥೆಗಳು ಈಗ ಬೆಂಬಲ ನೀಡುವ ವ್ಯವಸ್ಥೆಯಾಗಿ ಮಾರ್ಪಟ್ಟಿವೆ. ನಿಮ್ಮ ಇಂಥ ಪ್ರಯತ್ನಗಳಲ್ಲಿ ಸರ್ಕಾರ ನಿಮ್ಮ ಜೊತೆ ಇರುತ್ತದೆ. ದೇಶದಲ್ಲಿಂದು ಮಹಿಳೆಯರೇ ನಡೆಸುವಂಥಹ ಉದ್ಯಮಗಳ ಸಂಖ್ಯೆ 13.5 ರಿಂದ 15.7 ದಶಲಕ್ಷವಿದ್ದು, ಒಟ್ಟು ಉದ್ಯಮಗಳಲ್ಲಿ ಇದರ ಪಾಲು ಶೇ.20ರಷ್ಟಿದೆ ಎಂಬುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯವಾಗಿದೆ. ಉದ್ಯಮಶೀಲತೆಯ ಗುಣಮಟ್ಟ ಮತ್ತು ಉತ್ಪಾದನಾ ಪ್ರಮಾಣವನ್ನು ಹೆಚ್ಚಿಸುವ ಮೂಲಕ ಮಹಿಳಾ ಸ್ವಾಮ್ಯದ ಉದ್ಯಮಗಳನ್ನು 30 ದಶಲಕ್ಷಕ್ಕೆ ಹೆಚ್ಚಿಸಬಹುದು. ಮಹಿಳೆಯರು ಮನಸ್ಸು ಮಾಡಿದರೆ ಈ ಗುರಿ ತಲುಪುವುದು ಕಷ್ಟವೇನಲ್ಲ ಎಂದು ಕಿವಿಮಾತು ಹೇಳಿದರು. ಇದನ್ನೂ ಓದಿ: ಬಿಟ್‌ಕಾಯಿನ್ ಹಗರಣದಲ್ಲಿ ಸಿಎಂ ತಲೆದಂಡ ಪಡೆಯಲಿದೆ: ಪ್ರಿಯಾಂಕ್ ಖರ್ಗೆ
1948ರ ಫ್ಯಾಕ್ಟರಿ ತಿದ್ದುಪಡಿ ಕಾಯಿದೆಯಡಿ ಕಾರ್ಖಾನೆಗಳಲ್ಲಿ ರಾತ್ರಿ 7 ರಿಂದ ಬೆಳಿಗ್ಗೆ 6 ರವರೆಗೆ ಕೆಲಸ ಮಾಡಲು ಸರ್ಕಾರ ಮಹಿಳೆಯರಿಗೆ ಅನುಮತಿ ನೀಡಿದೆ. ನೂತನ ಕೈಗಾರಿಕಾ ನೀತಿಯಡಿ SC/ST, ಮಹಿಳೆಯರು ಸೇರಿದಂತೆ ವಿಶೇಷ ವರ್ಗದ ಉದ್ಯಮಿಗಳಿಗೆ ಹೆಚ್ಚುವರಿ ಪ್ರೋತ್ಸಾಹವನ್ನು ಪ್ರಸ್ತಾಪಿಸಲಾಗಿದೆ. ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ನೇತೃತ್ವದ ಉಬುಂಟು ಮಹಿಳೆಯರಲ್ಲಿ ಉದ್ಯಮ ಶೀಲತೆಯ ಮನೋಭಾವವನ್ನು ಪ್ರೋತ್ಸಾಹಿಸಿ ಅವರು ಯಶಸ್ಸನ್ನು ಸಾಧಿಸಲು ನೆರವಾಗಿದೆ. ಇಂಥ ಸಂಘಟನೆಯ ಸಾರಥ್ಯ ವಹಿಸಿರುವ ಅವರ ಪರಿಶ್ರಮಕ್ಕೆ ಮೆಚ್ಚುಗೆ ಸೂಚಿಸಿದರು. ಇದನ್ನೂ ಓದಿ: ಬಿಜೆಪಿಯವ್ರಿಗೆ ಮಾನ-ಮರ್ಯಾದೆ ಇಲ್ಲ, ರಾಕೇಶ್ ಈಗ ಬದುಕಿದ್ದಾರಾ?- ಸಿದ್ದು ಗರಂ