ಗದಗ: ಚುನಾವಣೆ ಮುನ್ನವೇ ಜಿಲ್ಲೆಯ ಚೆಕ್‌ಪೋಸ್ಟ್‌ಗಳಲ್ಲಿ (Checkpost) ಪೊಲೀಸರು (Police) ಭರ್ಜರಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣ, ತಂಬಾಕು (Tobacco) ಸೇರಿದಂತೆ ಅನೇಕ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳುತ್ತಿದ್ದಾರೆ.
ನಗರದ ಮುಳಗುಂದ ರಸ್ತೆಯಲ್ಲಿನ ಚೆಕ್‌ಪೋಸ್ಟ್ ತಪಾಸಣೆ ವೇಳೆ 15 ಲಕ್ಷ ರೂ. ಹಣ (Money) ಸಿಕ್ಕಿದೆ. ಹಾವೇರಿ ಜಿಲ್ಲೆ ಹುಲಗೂರನಿಂದ ಗದಗ ಮಾರ್ಗವಾಗಿ ದೇವದುರ್ಗಕ್ಕೆ ಹೊರಟಿದ್ದ ಕಾರಿನಲ್ಲಿ ದಾಖಲೆ ಇಲ್ಲದೇ ತೆಗೆದುಕೊಂಡು ಹೊರಟಿದ್ದ ಹಣ ವಶಕ್ಕೆ ಪಡೆದುಕೊಂಡಿದ್ದಾರೆ.
Advertisement
Advertisement
ಮುಂಡರಗಿ ಚೆಕ್‌ಪೋಸ್ಟ್‌ನಲ್ಲಿ ತಂಬಾಕು ಸೀಜ್ ಮಾಡಲಾಗಿದೆ. ಶಿವರಾಜ್ ನಾಗರಕಟ್ಟಿ ಎಂಬವರು ಬಿಲ್ ಇಲ್ಲದೇ ಅಕ್ರಮವಾಗಿ ಸಾಗಿಸುತ್ತಿದ್ದ 1 ಲಕ್ಷ 84 ಸಾವಿರ ರೂ. ಮೌಲ್ಯದ ತಂಬಾಕು ವಶಕ್ಕೆ ಪಡೆದುಕೊಳ್ಳಲಾಗಿದೆ. ಇದನ್ನು ಗದಗದಿಂದ ಮುಂಡರಗಿ ಮಾರ್ಗವಾಗಿ ಕೊಪ್ಪಳಕ್ಕೆ ರವಾನೆ ಮಾಡಲಾಗುತ್ತಿತ್ತು. ಇದನ್ನೂ ಓದಿ: ಮದ್ಯಪಾನ ಮಾಡಿ ಒಂದೇ ವಾರದಲ್ಲಿ ಐವರ ಸಾವು – ಗ್ರಾಮಸ್ಥರಲ್ಲಿ ಮೂಡಿದ ಆತಂಕ
Advertisement
ಶಿರಹಟ್ಟಿ ತಾಲೂಕಿನ ಬೆಳ್ಳಟ್ಟಿ ಚೆಕ್‌ಪೋಸ್ಟ್‌ನಲ್ಲಿ ಸಹ ಆಟೋ ರಿಕ್ಷಾದಲ್ಲಿ ಸಾಗಿಸುತ್ತಿದ್ದ 1 ಲಕ್ಷ 10 ಸಾವಿರ ರೂ. ಮೌಲ್ಯದ ತಂಬಾಕು ಜಪ್ತಿ ಮಾಡಲಾಗಿದೆ. ಇದು ರಾಣೆಬೆನ್ನೂರಿನಿಂದ ಶಿರಹಟ್ಟಿಗೆ ಶ್ಯಾಮ ನವಲೆ ಎಂಬವರು ಸಾಗಿಸುತ್ತಿದ್ದ ವೇಳೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
Advertisement
ಗದಗ ಎಸ್‌ಪಿ ಬಿಎಸ್ ನೇಮಗೌಡ ಹಾಗೂ ಜಿಲ್ಲಾಧಿಕಾರಿ ವೈಶಾಲಿ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ಗದಗ, ಮುಂಡರಗಿ ಹಾಗೂ ಶಿರಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 3 ಪ್ರತ್ಯೇಕ ಪ್ರಕರಣಗಳು ಕಂಡು ಬಂದಿವೆ. ಈ ಬಗ್ಗೆ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ತಾಯಿಗೆ ದ್ರೋಹ ಮಾಡಿದ ಬಾಬುರಾವ್ ಚಿಂಚನಸೂರು – ಗಿರೀಶ್ ಮಟ್ಟಣ್ಣನವರ್