Bengaluru CityDistrictsKarnatakaLatestMain Post

ಉಕ್ರೇನ್‍ನಲ್ಲಿರುವ ಕಟ್ಟ ಕಡೆಯ ವಿದ್ಯಾರ್ಥಿಯನ್ನು ಸುರಕ್ಷಿತವಾಗಿ ಕರೆತರುವ ತನಕ ಆಪರೇಷನ್ ನಿಲ್ಲದು: ಆರ್.ಅಶೋಕ್

ಬೆಂಗಳೂರು: ಉಕ್ರೇನ್‍ನಲ್ಲಿರುವ ವಿದ್ಯಾರ್ಥಿಗಳನ್ನು ರಾಜ್ಯಕ್ಕೆ ಸುರಕ್ಷಿತವಾಗಿ ಕರೆತರಲು ಕ್ರಮಕೈಗೊಳ್ಳುವುದಾಗಿ ಆರ್.ಅಶೋಕ್ ಹೇಳಿದರು.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 12 ವಿದ್ಯಾರ್ಥಿಗಳ ಮೊದಲತಂಡವನ್ನು ತಾಯ್ನಾಡಿಗೆ ಖುದ್ದು ಆರ್.ಅಶೋಕ್ ಅವರು ಸ್ವಾಗತಿಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಲ ವಿದ್ಯಾರ್ಥಿಗಳು ರೊಮೆನಿಯಾ ಮೂಲಕ ಭಾರತಕ್ಕೆ ಮರಳಿದ್ದಾರೆ. ಮುಂಬೈ ಹಾಗೂ ನವದೆಹಲಿಗೆ ಆಗಮಿಸಿರುವ ವಿದ್ಯಾರ್ಥಿಗಳನ್ನು ಬೆಂಗಳೂರಿಗೆ ಸರ್ಕಾರವೇ ಎಲ್ಲ ವ್ಯವಸ್ಥೆ ಮಾಡಿ ಕರೆತರಲಾಗುತ್ತಿದೆ. ಕಂದಾಯ ಇಲಾಖೆಯ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ವಿದ್ಯಾರ್ಥಿಗಳ ಪ್ರಯಾಣ ಹಾಗೂ ಇನ್ನಿತರ ವೆಚ್ಚಗಳನ್ನು ಭರಿಸಲಾಗುತ್ತಿದೆ ಎಂದರು. ಇದನ್ನೂ ಓದಿ:  ಕನ್ನಡಿಗರ ರಕ್ಷಣೆಯ ಸಂಪೂರ್ಣ ವೆಚ್ಚ ಸರ್ಕಾರ ಭರಿಸಲಿದೆ: ಬೊಮ್ಮಾಯಿ

ಉಕ್ರೇನ್‍ನಿಂದ ಇನ್ನುಳಿದ ವಿದ್ಯಾರ್ಥಿಗಳನ್ನು ಕರೆತರಲು ಕೇಂದ್ರ ವಿದೇಶಾಂಗ ಸಚಿವರ ಜೊತೆ ಮುಖ್ಯಮಂತ್ರಿಗಳು ನಿರಂತರ ಸಂಪರ್ಕದಲ್ಲಿದ್ದಾರೆ. ಕೇಂದ್ರ ಹಾಗೂ ರಾಜ್ಯದ ಸಹಾಯವಾಣಿಗಳು ನಿರಂತರವಾಗಿ ಕಾರ್ಯನಿರ್ವಹಿಸುತ್ತಿವೆ. ಹಲವಾರು ವಿದ್ಯಾರ್ಥಿಗಳು ಹಾಗೂ ಪೆÇೀಷಕರ ಜೊತೆಗೆ ಚರ್ಚಿಸಲಾಗಿದೆ ಎಂದು ಹೇಳಿದರು.

ಉಕ್ರೇನ್ ನ ಕರಕೈನಲ್ಲಿ ಬಹಳಷ್ಟು ವಿದ್ಯಾರ್ಥಿಗಳು ಸಿಲುಕಿದ್ದು, ಅದೇ ಪ್ರದೇಶದಲ್ಲಿ ಪ್ರಸ್ತುತ ಯುದ್ಧ ನಡೆಯುತ್ತಿರುವುದಾಗಿ ತಿಳಿದುಬಂದಿದೆ. ವಿದ್ಯಾರ್ಥಿಗಳ ಸುರಕ್ಷತೆಯ ಜೊತೆಗೆ ಊಟ ಮತ್ತು ನೀರಿನ ವ್ಯವಸ್ಥೆಯನ್ನು ಪೂರೈಸಲು ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಮಾಡಲಾಗಿದೆ. ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ ನೀಡುವ ಜೊತೆಗೆ ಅವರನ್ನು ಭಾರತಕ್ಕೆ ಕರೆತರುವ ಬಗ್ಗೆಯೂ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದೆ ಎಂದು ತಿಳಿಸಿದರು. ಇದನ್ನೂ ಓದಿ:  ಚುನಾವಣೆಗೂ ಮುನ್ನ ಭಾರೀ ಅವಘಡ – ಮಗು ಸೇರಿ ಇಬ್ಬರ ಸಾವು, ಐವರಿಗೆ ಗಾಯ

ರಾಜ್ಯದ ಅಧಿಕಾರಿಗಳು ಕ್ಷಣ-ಕ್ಷಣದ ಮಾಹಿತಿ ಪಡೆಯುತ್ತಿದ್ದಾರೆ. ಪೋಷಕರು ಧೈರ್ಯದಿಂದ ಇರಬೇಕು. ಯಾವುದೇ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ. ಸರ್ಕಾರ ನಿಮ್ಮ ಮಕ್ಕಳ ರಕ್ಷಣೆಗೆ ಸಕಲಸಿದ್ಧತೆ ಮಾಡುತ್ತದೆ ಎಂದು ಭರವಸೆ ಕೊಟ್ಟರು. ಉಕ್ರೇನ್ ನಲ್ಲಿರುವ ಕಟ್ಟ ಕಡೆಯ ವಿದ್ಯಾರ್ಥಿಯನ್ನು ಪೋಷಕರ ಮಡಿಲಿಗೆ ತಲುಪಿಸುವ ತನಕ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸುತ್ತದೆ ಎಂದು ವಿಶ್ವಾಸದ ಮಾತುಗಳನ್ನಾಡಿದರು.

Leave a Reply

Your email address will not be published. Required fields are marked *

Back to top button