ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬಹು ದೊಡ್ಡ ಆಪರೇಷನ್ ಕಮಲ ನಡೆಯುತ್ತಿದ್ದು, ಬರೋಬ್ಬರಿ 13 ಶಾಸಕರು ರಾಜೀನಾಮೆ ಕೊಡುವ ಸಾಧ್ಯತೆ ಇದೆ. ಈ ಮೂಲಕ ಅಮೇರಿಕದಿಂದ ಬರುವ ಮೊದಲೇ ಸಿಎಂಗೆ ಶಾಕ್ ಕಾದಿದೆ.
ಕಾಂಗ್ರೆಸ್ ಮತ್ತು ಜೆಡಿಎಸ್ ಸೇರಿದಂತೆ 13ಕ್ಕೂ ಹೆಚ್ಚು ಅತೃಪ್ತ ಶಾಸಕರು ಇಂದು ರಾಜೀನಾಮೆ ಕೊಡುವ ಸಾಧ್ಯತೆ ಇದೆ. ಅದರಲ್ಲೂ ಬಂಡಾಯಗಾರರ ಪಟ್ಟಿಯಲ್ಲಿ ಬೆಂಗಳೂರಿನ ಐವರು ಶಾಸಕರ ಹೆಸರೂ ಇದೆ ಎಂಬುದಾಗಿ ತಿಳಿದುಬಂದಿದೆ.
Advertisement
Advertisement
ಮೊದಲನೆಯದಾಗಿ ಬಿಡುಗಡೆಯಾಗಿರುವ ಬಂಡಾಯಗಾರರ ಪಟ್ಟಿಯಲ್ಲಿ ಅಥಣಿ ಶಾಸಕ ಮಹೇಶ್ ಕುಮಟಳ್ಳಿ, ಹಿರೇಕೆರೂರು ಶಾಸಕ ಬಿ.ಸಿಪಾಟೀಲ್, ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ್, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಮತ್ತು ಯಲ್ಲಾಪುರ ಶಾಸಕ ಶಿವರಾಂ ಹೆಬ್ಬಾರ್ ರಾಜೀನಾಮೆ ಕೊಡುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
Advertisement
Advertisement
ಬೆಂಗಳೂರಿನ ಕೆ.ಆರ್.ಪುರಂ ಶಾಸಕ ಭೈರತಿ ಬಸವರಾಜು, ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್, ಬಿಟಿಎಂ ಲೇಔಟ್ ಶಾಸಕ ರಾಮಲಿಂಗಾ ರೆಡ್ಡಿ, ಜಯನಗರ ಶಾಸಕಿ ಸೌಮ್ಯಾ ರೆಡ್ಡಿ, ಹುಣಸೂರು ಶಾಸಕ ಎಚ್. ವಿಶ್ವನಾಥ್, ಕೆ.ಆರ್ ಪೇಟೆ ಶಾಸಕ. ನಾರಾಯಣ ಗೌಡ ಇವರೆಲ್ಲರೂ ಹೆಸರು ರಾಜೀನಾಮೆ ಪಟ್ಟಿಗೆ ಹೊಸದಾಗಿ ಸೇರಿಕೊಂಡಿದ್ದು, ರಾಜ್ಯ ರಾಜಕಾರಣದಲ್ಲಿ ತಲ್ಲಣ ಶುರುವಾಗಿದೆ.
ನಾಗೇಂದ್ರ, ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಹಳ್ಳಿ, ಬಿ.ಸಿ.ಪಾಟೀಲ್ ಇವರು ಹಳೆಯ ಆಪರೇಷನ್‍ಗೆ ಒಳಗಾದ ಶಾಸಕರಾಗಿದ್ದು, ಹೊಸದಾಗಿ ಸೇರಿಕೊಂಡಿರುವ ಶಾಸಕರ ಹೆಸರಿಂದ ಎಲ್ಲರಿಗೂ ಶಾಕ್ ಆಗಿದೆ. ಈಗಾಗಲೇ ಸ್ಪೀಕರ್ ಭೇಟಿಗೆ ಬಂಡಾಯಗಾರರು ಕಾಲಾವಕಾಶ ಕೇಳಿದ್ದಾರೆ ಎಂದು ತಿಳಿದು ಬಂದಿದೆ.