Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನ.28 ಕ್ಕೆ ‘ಆಪರೇಷನ್ ಲಂಡನ್ ಕೆಫೆ’ ರಾಜ್ಯಾದ್ಯಂತ ತೆರೆಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ನ.28 ಕ್ಕೆ ‘ಆಪರೇಷನ್ ಲಂಡನ್ ಕೆಫೆ’ ರಾಜ್ಯಾದ್ಯಂತ ತೆರೆಗೆ

Cinema

ನ.28 ಕ್ಕೆ ‘ಆಪರೇಷನ್ ಲಂಡನ್ ಕೆಫೆ’ ರಾಜ್ಯಾದ್ಯಂತ ತೆರೆಗೆ

Public TV
Last updated: November 22, 2025 5:24 pm
Public TV
Share
2 Min Read
operation london cafe
SHARE

ಮಂಗಳೂರು: ಬಹುನಿರೀಕ್ಷಿತ ಮಾಸ್ ಮತ್ತು ಆಕ್ಷನ್ ಪೋಸ್ಟರ್ಸ್, ಟೀಸರ್, ಟ್ರೈಲರ್ ಹಾಗೂ ರೈ ರೈ ರೈ ಅದ್ಭುತ ಹಾಡಿನ ಮೂಲಕ ಪ್ರೇಕ್ಷಕರಲ್ಲಿ ಇನ್ನಷ್ಟೂ ಕುತೂಹಲ ಮೂಡಿಸಿರುವ ಆಪರೇಷನ್ ಲಂಡನ್ ಕೆಫೆ ಕನ್ನಡ ಚಿತ್ರವು ಇದೇ ನವೆಂಬ‌ರ್ 28ರಂದು ಏಕಕಾಲಕ್ಕೆ ಕನ್ನಡ ಮರಾಠಿ ಮತ್ತು ಹಿಂದಿ ಭಾಷೆಯಲ್ಲಿ ತೆರೆ ಕಾಣಲಿದೆ ಎಂದು ನಟ ಅರ್ಜುನ್ ಕಾಪಿಕಾಡ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಿರ್ಮಾಪಕ ವಿಜಯ್ ಕುಮಾರ್ ಶೆಟ್ಟಿ ಚಿತ್ರಕ್ಕೆ ಸಾಕಷ್ಟು ಬಂಡವಾಳ ಹಾಕಿ ಸಿನಿಮಾ ಮಾಡಿದ್ದಾರೆ. ಮರಾಠಿ ಭಾಷೆ ಬಾರದೆ ಇದ್ರೂ ಯಾವುದೇ ಸಮಸ್ಯೆಯಾಗದಂತೆ ನಟಿಸಲು ಸಹಕಾರ ನೀಡಿದ್ದಾರೆ. ತುಳುವರು ನನ್ನನ್ನು ಬೆಳೆಸಿದ್ದಾರೆ. ಅದೇ ಪ್ರೀತಿ ಈ ಕನ್ನಡ ಸಿನಿಮಾಕ್ಕೂ ಇರಲಿ ಎಂದರು.

ನಟ ಕವೀಶ್ ಶೆಟ್ಟಿ ಮಾತನಾಡಿ, ಚಿತ್ರದ ಪ್ರಚಾರ ಕಾರ್ಯದಲ್ಲಿ ಈಗಾಗಲೇ ಚಿತ್ರತಂತ ತೊಡಗಿಸಿಕೊಂಡಿದ್ದು, ಕರ್ನಾಟಕ ಮತ್ತು ಮಹಾರಾಷ್ಟ್ರದೆಲ್ಲೆಡೆ ವಿವಿಧ ಪ್ರಚಾರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಕನ್ನಡ ಮತ್ತು ಮರಾಠಿ ಎರಡೂ ಭಾಷೆಯಲ್ಲಿ ಏಕಕಾಲಕ್ಕೆ ಚಿತ್ರೀಕರಣಗೊಂಡಿರುವ ಈ ಚಿತ್ರವನ್ನು ವಿಜಯ್ ಕುಮಾರ್ ಶೆಟ್ಟಿ ಅವರಾಲ್, ರಮೇಶ್ ಕೊಠಾರಿ, ದೀಪಕ್ ರಾಣೆ ಮತ್ತು ವಿಜಯ ಪ್ರಕಾಶ್ ಇಂಡಿಯನ್ ಫಿಲಂ ಫ್ಯಾಕ್ಟರಿ ಮತ್ತು ದೀಪಕ್ ರಾಣೆ ಫಿಲಂಸ್ ಲಾಂಛನದ ಅಡಿಯಲ್ಲಿ ಬಹಳ ಅದ್ದೂರಿಯಾಗಿ ನಿರ್ಮಿಸಿದ್ದಾರೆ. ಸಡಗರ ರಾಘವೇಂದ್ರ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಜಿಲ್ಕಾ ಸಿನಿಮಾದಲ್ಲಿ ಅಭಿನಯಿಸಿದ್ದ ನಾನು ಈ ಸಿನಿಮಾದಲ್ಲಿ ವಿಭಿನ್ನ ಸಾಹಸಗಳ ಮೂಲಕ ಪ್ರೇಕ್ಷಕರ ಮನಮುಟ್ಟುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಎಂದರು.

Operation London Cafe Press meet

ನಿರ್ಮಾಪಕ ವಿಜಯ್ ಕುಮಾರ್ ಶೆಟ್ಟಿ ಮಾತಾಡಿ, ನಟಿ ಮೇಘಾ ಶೆಟ್ಟಿ ಈಗಾಗಲೇ ಬಿಡುಗಡೆಗೊಂಡಿರುವ ಚಿತ್ರದ ಹಾಡು, ಡ್ಯಾನ್ಸ್ ಮತ್ತು ಟ್ರೇಲರ್‌ನಲ್ಲಿ ಲಂಗ ದಾವಣಿ ತೊಟ್ಟು ಅಪ್ಪಟ ಬಜಾರಿ ಹಳ್ಳಿ ಹುಡುಗಿಯಂತೆ ತರ್ಲೆ ಮಾಡುತ್ತಾ ತನ್ನ ನಟನೆಯ ಇನ್ನೊಂದು ಮಜಲನ್ನು ಪ್ರೇಕ್ಷಕರಿಗೆ ತಿಳಿಯಪಡಿಸಿದ್ದಾರೆ. ತುಳು ಚಿತ್ರರಂಗದ ಹೆಸರಾಂತ ನಟ ಅರ್ಜುನ್ ಕಾಪಿಕಾಡ್ ಈ ಚಿತ್ರದಲ್ಲಿ ಒಬ್ಬ ಖಡಕ್ ಆರ್ಮಿ ಆಫೀಸರ್ ಪಾತ್ರದಲ್ಲಿ ಮೊದಲ ಬಾರಿ ಕಾಣಿಸಿಕೊಂಡಿದ್ದಾರೆ. ಹಾಗೆ ಮರಾಠಿ ಚಿತ್ರರಂಗದ ಹೆಸರಾಂತ ನಟಿ ಶಿವಾನಿ ಸುರ್ವೆಯ ಜೊತೆ ಅದೇ ಮರಾಠಿಯ ವಿರಾಟ್ ಮಡ್ಕ, ಪ್ರಸಾದ್ ಖಾಂಡೇಕ‌ರ್ ಮುಂತಾದವರು ವಿಭಿನ್ನವಾದ ಚಾಲೆಂಜಿಂಗ್ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಕನ್ನಡದ ಚಿರಪರಿಚಿತ ಬಿ.ಸುರೇಶ್, ಕೃಷ್ಣ ಹೆಬ್ಬಾಳೆ, ನೀನಾಸಂ ಅಶ್ವಥ್, ಧರ್ಮೇಂದ್ರ ಅರಸ್ ಜೊತೆಯಲ್ಲಿ ಇನ್ನೂ ಹೆಸರಾಂತ ಕನ್ನಡ ಮತ್ತು ಮರಾಠಿಯ ಕಲಾವಿದರು ತೆರೆ ಹಂಚಿಕೊಂಡಿದ್ದಾರೆ ಎಂದು ತಿಳಿಸಿದರು.

ಮುಂಬೈ ಮೂಲದ ಪಾಂಶು ಝಾ ಸಂಗೀತವಿರುವ ಈ ಚಿತ್ರದಲ್ಲಿ ಆರ್.ಡಿ.ನಾಗಾರ್ಜುನ್ ಛಾಯಾಗ್ರಹಣ, ವರದರಾಜ್ ಕಾಮತ್ ಕಲೆ, ವಿಕ್ರಂ ಮೊರ್, ಮಾಸ್ ಮಾದ ಮತ್ತು ಅರ್ಜುನ್ ರಾಜ್ ಸಾಹಸವಿದೆ. ಕವಿರಾಜ್, ಡಾ. ನಾಗೇಂದ್ರ ಪ್ರಸಾದ್ ಮತ್ತು ಸಡಗರ ರಾಘವೇಂದ್ರ ಸಾಹಿತ್ಯವಿದೆ. ಅನಿರುದ್ ಶಾಸ್ತ್ರಿ, ಬ್ರಿಜೇಶ್ ಶಾಂಡಿಲ್ಯ, ಐಶ್ವರ್ಯ ರಂಗರಾಜನ್, ಪ್ರಥ್ವಿ ಭಟ್ ಮತ್ತು ಶ್ರೀ ಲಕ್ಷ್ಮೀ ಬೆಳ್ಳಣ್ಣು ಸಾಹಿತ್ಯಕ್ಕೆ ಇಂಪಾದ ಸ್ವರ ಸೇರಿಸಿದ್ದಾರೆ. ವಿನಾದ್ ಮ್ಯೂಸಿಕ್ ಲಾಂಛನದ ಅಡಿಯಲ್ಲಿ ಈಗಾಗಲೇ ಬಿಡುಗಡೆಗೊಂಡಿರುವ ಈ ಚಿತ್ರದ ಕನ್ನಡ ಮರಾಠಿ ಮತ್ತು ಹಿಂದಿ ಭಾಷೆಯ ಹಾಡುಗಳು ಮತ್ತು ಟ್ರೇಲರ್ ಈಗಾಗಲೇ ಟ್ರೆಂಡಿಂಗ್‌ನಲ್ಲಿದೆ.

TAGGED:Arjun KapikadMangaluruMegha ShettyOperation London Cafesandalwoodಅರ್ಜುನ್‌ ಕಾಪಿಕಾಡ್‌ಆಪರೇಷನ್ ಲಂಡನ್ ಕೆಫೆಮಂಗಳೂರುಮೇಘಾ ಶೆಟ್ಟಿ
Share This Article
Facebook Whatsapp Whatsapp Telegram

Cinema news

Sai Pallavi
ಎಂ.ಎಸ್ ಸುಬ್ಬಲಕ್ಷ್ಮಿ ಬಯೋಪಿಕ್‌ನಲ್ಲಿ ಸಾಯಿಪಲ್ಲವಿ ನಟನೆ ಫಿಕ್ಸ್‌
Bollywood Cinema Latest Top Stories
Sohail Khan
ಮಾಡಿದ ತಪ್ಪಿಗೆ ಕ್ಷಮೆ ಕೇಳಿದ ಸಲ್ಮಾನ್ ಖಾನ್ ಸಹೋದರ
Bollywood Cinema Latest
Kichcha Sudeep 2
ಮಸ್ತ್ ಮಲೈಕಾ ಜೊತೆ ಕಿಚ್ಚ ಸಖತ್ ಡಾನ್ಸ್‌
Cinema Latest Sandalwood
Actor Shivamanju
ನಿರ್ದೇಶಕನಾದ ಹಾಸ್ಯ ನಟ ಶಿವಮಂಜು
Cinema Latest Sandalwood Top Stories

You Might Also Like

droupadi murmu 1
Districts

ಸುತ್ತೂರು ಜಾತ್ರಾ ಮಹೋತ್ಸವ – ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

Public TV
By Public TV
13 minutes ago
jammu kashmir cop
Latest

ಜಮ್ಮು-ಕಾಶ್ಮೀರ; ಭಯೋತ್ಪಾದಕರೊಂದಿಗೆ ಗುಂಡಿನ ಚಕಮಕಿಯಲ್ಲಿ ಪೊಲೀಸ್‌ ಹುತಾತ್ಮ

Public TV
By Public TV
17 minutes ago
Droupadi Murmu
Districts

ಸುತ್ತೂರು ಶಿವರಾತ್ರಿ ಶಿವಯೋಗಿಗಳ 1066ನೇ ಜಯಂತೋತ್ಸವ – ಡಿ.17ಕ್ಕೆ ಮಳವಳ್ಳಿಗೆ ರಾಷ್ಟ್ರಪತಿ ಮುರ್ಮು

Public TV
By Public TV
33 minutes ago
Delhi Agra Expressway
Latest

ದಟ್ಟ ಮಂಜಿಗೆ ದೆಹಲಿ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ 10 ಬಸ್‌ಗಳು, ಕಾರುಗಳ ನಡುವೆ ಡಿಕ್ಕಿ; ನಾಲ್ವರು ಸಾವು

Public TV
By Public TV
40 minutes ago
Droupadi Murmu
Court

2 ವರ್ಷದ ಮಗು ಮೇಲೆ ಅತ್ಯಾಚಾರಗೈದು ಹತ್ಯೆ – ಅಪರಾಧಿಯ ದಯಾ ಅರ್ಜಿ ತಿರಸ್ಕರಿಸಿದ ರಾಷ್ಟ್ರಪತಿ ಮುರ್ಮು

Public TV
By Public TV
59 minutes ago
haveri police suspend
Haveri

ಶಿಕ್ಷಕನಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಕೇಸ್; ಸವಣೂರು ಸಿಪಿಐ, ಹೆಡ್‌ ಕಾನ್‌ಸ್ಟೆಬಲ್ ಅಮಾನತು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?