ನವದೆಹಲಿ: ಆಪರೇಷನ್ ಸಿಂಧೂರ (Operation Siindoor) ಕಾರ್ಯಾಚರಣೆ ಸಮಯದಲ್ಲಿ ಭಾರತ ಪಾಕಿಸ್ತಾನದ ಮಿರಾಜ್ (Mirage Jet) ಯುದ್ಧ ವಿಮಾನವನ್ನು ಹೊಡೆದುರುಳಿಸಲಾಗಿದೆ ಎಂದು ಅಧಿಕೃತವಾಗಿ ತಿಳಿಸಿದೆ. ಭಾರತೀಯ ಸೇನೆ ಇಂದು ಹಂಚಿಕೊಂಡ ವೀಡಿಯೊದಲ್ಲಿ ಪಾಕಿಸ್ತಾನಿ ಮಿರಾಜ್‌ನ ಅವಶೇಷಗಳನ್ನು ನೋಡಬಹುದು.
ಇಂದು ಮಧ್ಯಾಹ್ನ ಭಾರತೀಯ ಸೇನೆ, ವಾಯುಪಡೆ ಮತ್ತು ನೌಕಾಪಡೆಯ ಹಿರಿಯ ಕಮಾಂಡರ್‌ಗಳು ಏಪ್ರಿಲ್ 22 ರಂದು ಜಮ್ಮು ಮತ್ತು ಪಹಲ್ಗಾಮ್‌ನಲ್ಲಿ ನಡೆದ ಮಾರಕ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಮೇ 7 ರಂದು ಪ್ರಾರಂಭಿಸಲಾದ ಆಪರೇಷನ್ ಸಿಂಧೂರ್‌ನ ಸಮಗ್ರ ವಿವರವನ್ನು ನೀಡಿದರು. ಇದನ್ನೂ ಓದಿ: ಪಾಕ್‍ಗೆ ನಾವು ಹೇಗಾದ್ರೂ ಪ್ರತಿಕ್ರಿಯಿಸುತ್ತೇವೆ, ಇದನ್ನು ಟ್ರಂಪ್ ಅರ್ಥ ಮಾಡಿಕೊಳ್ಳಲಿ: ಮೋದಿ
आकाशे शत्रुन् जहि I
Destroy the Enemy in the Sky.#PahalgamTerrorAttack #OperationSindoor#JusticeServed #IndianArmy@IAF_MCC @indiannavy pic.twitter.com/vO28RS0IdE
— ADG PI – INDIAN ARMY (@adgpi) May 12, 2025
ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕ (DGMO) ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್, ವಾಯು ಕಾರ್ಯಾಚರಣೆಗಳ ಮಹಾನಿರ್ದೇಶಕ ಏರ್ ವೈಸ್ ಮಾರ್ಷಲ್ ಎಕೆ ಭಾರ್ತಿ ಮತ್ತು ನೌಕಾ ಕಾರ್ಯಾಚರಣೆಗಳ ಮಹಾನಿರ್ದೇಶಕ ವೈಸ್ ಅಡ್ಮಿರಲ್ ಎಎನ್ ಪ್ರಮೋದ್ ಜಂಟಿಯಾಗಿ ಸುದ್ದಿಗೋಷ್ಠಿ ನಡೆಸಿದರು.
ಕೆಲ ದಿನಗಳಿಂದ ಭಾರತ ಪಾಕ್‌ನ ಯುದ್ಧ ವಿಮಾನವನ್ನು ಹೊಡೆದು ಹಾಕಿದೆ ಎಂಬ ವರದಿ ಬರುತ್ತಿತ್ತು. ಆದರೆ ಅಧಿಕೃತವಾಗಿ ಭಾರತ ತಿಳಿಸಿರಲಿಲ್ಲ. ಆದರೆ ಇಂದು ಅಧಿಕೃತವಾಗಿ ಮಿರಾಜ್ ವಿಮಾನವನ್ನು ಆಕಾಶದಲ್ಲೇ ಹೊಡೆದು ಹಾಕಿದ್ದೇವೆ ಎಂದು ತಿಳಿಸಿದರು.
ಆಪರೇಷನ್ ಸಿಂಧೂರ್ ಸುಮಾರು 25 ನಿಮಿಷಗಳ ಕಾಲ ನಡೆಯಿತು ಮತ್ತು ಮೇ 7 ರ ಮುಂಜಾನೆ ನಡೆಸಲಾಯಿತು. ಇದು ಒಂಬತ್ತು ದೃಢೀಕೃತ ಭಯೋತ್ಪಾದಕ ತಾಣಗಳ ಮೇಲೆ ದಾಳಿ ನಡೆಸಿತು, ಅದರಲ್ಲಿ ನಾಲ್ಕು ಪಾಕಿಸ್ತಾನದ ಮುಖ್ಯ ಭೂಭಾಗದಲ್ಲಿ ಮತ್ತು ಐದು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಸೇರಿವೆ.