ನವದೆಹಲಿ: ಡ್ರೋನ್ ದಾಳಿ (Drone Attack) ನಡೆಸುತ್ತಿದ್ದ ಪಾಕಿಸ್ತಾನ (Pakistan) ಈಗ ಭಾರತದ ವಿರುದ್ಧ ಖಂಡಾಂತರ ಕ್ಷಿಪಣಿಯನ್ನು (Ballistic Missiles) ಪ್ರಯೋಗಿಸಿದೆ.
ದೆಹಲಿಯನ್ನು(Delhi) ಗುರಿಯಾಗಿಸಿ ಪಾಕಿಸ್ತಾನ ಫತಾಹ್-II (Fatah-II) ಉಡಾವಣೆ ಮಾಡಿತ್ತು. ಆದರೆ ಭಾರತ ಈ ಕ್ಷಿಪಣಿಯನ್ನು ಆಕಾಶದಲ್ಲೇ ಛಿದ್ರಗೊಳಿಸಿದೆ. ಹರ್ಯಾಣದ ಸಿರ್ಸಾದಲ್ಲಿ ಭಾರತ ಯಶಸ್ವಿಯಾಗಿ ಧ್ವಂಸಗೊಳಿಸಿದೆ.
ಪಾಕಿಸ್ತಾನದ ಫತಾಹ್-II ಅಲ್ಪ-ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿಯಾಗಿದ್ದು ಅಂದಾಜು 400 ಕಿಲೋಮೀಟರ್ ದೂರವನ್ನು ಕ್ರಮಿಸುವ ಜೊತೆಗೆ 365-ಕಿಲೋಗ್ರಾಂಗಳಷ್ಟು ಸಿಡಿತಲೆಯನ್ನು ಹೊತ್ತುಕೊಂಡು ಹೋಗುವ ಸಾಮರ್ಥ್ಯ ಹೊಂದಿದೆ. ಇದನ್ನೂ ಓದಿ: ಶಕ್ತಿಶಾಲಿ ಅಸ್ತ್ರಗಳಿಂದಲೇ ಪಾಕ್‌ಗೆ ಶತಕೋಟಿ ಲಾಸ್ – ದಿವಾಳಿಯತ್ತ ʻಭಿಕಾರಿಸ್ತಾನʼ
ಏನಿದು ಬ್ಯಾಲಿಸ್ಟಿಕ್ ಕ್ಷಿಪಣಿ?
ಚಲಿಸುವ ಪಥದ ಆಧಾರದ ಮೇಲೆ ಕ್ಷಿಪಣಿಗಳನ್ನು ಬ್ಯಾಲಿಸ್ಟಿಕ್ ಮತ್ತು ಕ್ರೂಸ್ ಕ್ಷಿಪಣಿಗಳಾಗಿ ವಿಂಗಡಿಸಲಾಗುತ್ತದೆ. ಬ್ಯಾಲಿಸ್ಟಿಕ್ ಕ್ಷಿಪಣಿ ಭೂಮಿಯ ವಾತಾವರಣವನ್ನು ಬಿಟ್ಟು ಬಾಹ್ಯಾಕಾಶವನ್ನು ಪ್ರವೇಶಿಸಿ ನಂತರ ಭೂಮಿಗೆ ಅಪ್ಪಳಿಸುತ್ತದೆ. ಭಾರತದ ಅಗ್ನಿ, ಪೃಥ್ವಿ ಬ್ಯಾಲಿಸ್ಟಿಕ್ ಕ್ಷಿಪಣಿಗಳಾಗಿವೆ. ಇದನ್ನೂ ಓದಿ: 44 ಸೆಕೆಂಡ್‌ನಲ್ಲಿ 72 ರಾಕೆಟ್ – ಏನಿದು ಪಿನಾಕಾ ರಾಕೆಟ್ ಲಾಂಚರ್?
ಕ್ರೂಸ್ ಕ್ಷಿಪಣಿ ಶಬ್ಧದ ವೇಗಕ್ಕಿಂತ ಹೆಚ್ಚು ವೇಗದಲ್ಲಿ ಹೋಗುತ್ತದೆ. ಆರಂಭದಲ್ಲಿ ಕ್ರೂಸ್ ಕ್ಷಿಪಣಿ ಕೆಳಹಂತದಲ್ಲಿ ಭೂಮಿಯ ಮೇಲ್ಮೆಗೆ ಸಮಾನಂತರವಾಗಿ ಶಬ್ಧದ ವೇಗಕ್ಕಿಂತ ಕಡಿಮೆ ವೇಗದಲ್ಲಿ ಚಲಿಸಿ ಗುರಿ ತಲುಪುತ್ತಿದ್ದಂತೆ ಇದರ ವೇಗ ಶಬ್ಧದ ವೇಗಕ್ಕಿಂತ ಹೆಚ್ಚಾಗಿ ಕೊನೆಗೆ ಗುರಿಯನ್ನು ತಲುಪುತ್ತದೆ. ಈ ತಂತ್ರಜ್ಞಾನದಿಂದ ಶತ್ರುಗಳ ರೇಡಾರ್‌ಗಳಿಗೆ ಸಹ ಈ ಕ್ಷಿಪಣಿಯ ಪಥವನ್ನು ಅಷ್ಟು ಸುಲಭವಾಗಿ ಪತ್ತೆ ಹಚ್ಚಲು ಸಾಧ್ಯವಾಗುವುದಿಲ್ಲ. ಈ ಕ್ಷಿಪಣಿ ಸಮುದ್ರದ ಒಳಗೆ ಹೋಗಿ ಮತ್ತೆ ಮೇಲೆ ಬರುವ ಸಾಮರ್ಥ್ಯವನ್ನು ಹೊಂದಿದೆ. ಭಾರತದ ಬ್ರಹ್ಮೋಸ್ ಕ್ರೂಸ್ ಕ್ಷಿಪಣಿಯ ವರ್ಗಕ್ಕೆ ಸೇರುತ್ತದೆ.