`ಆಪರೇಷನ್ ಸಿಂಧೂರ’ ಇನ್ನೂ ಮುಗಿದಿಲ್ಲ, ಇದು ಟ್ರೇಲರ್ ಅಷ್ಟೇ – ರಾಜನಾಥ್ ಸಿಂಗ್

Public TV
1 Min Read
Rajnath Singh in bhuj airpase

– ಗುಜರಾತ್‌ನ ಭುಜ್ ವಾಯುನೆಲೆಗೆ ಭೇಟಿ ನೀಡಿದ ರಕ್ಷಣಾ ಸಚಿವ

ಶ್ರೀನಗರ: `ಆಪರೇಷನ್ ಸಿಂಧೂರ’ (Operation Sindoor) ಇನ್ನೂ ಮುಗಿದಿಲ್ಲ, ಈಗ ನಡೆದಿದ್ದು ಟ್ರೇಲರ್ ಅಷ್ಟೇ ಎಂದು ವಾಯುಪಡೆಯ ಶೌರ್ಯವನ್ನು ಹೊಗಳುತ್ತಾ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಪಾಕ್‌ಗೆ ಸಂದೇಶ ರವಾನಿಸಿದರು.

ಇಂದು ಗುಜರಾತ್‌ನ (Gujarat) ಭುಜ್ (Bhuj) ವಾಯುನೆಲೆಗೆ ಭೇಟಿ ನೀಡಿ ಭಾರತೀಯ ವಾಯುಪಡೆಯನ್ನುದ್ದೇಶಿಸಿ ಮಾತನಾಡಿದ ಅವರು, ಕದನ ವಿರಾಮದ ಬಳಿಕ ನಾವು ಪಾಕಿಸ್ತಾನದ ನಡವಳಿಕೆಯನ್ನು ಪರೀಕ್ಷಿಸುತ್ತಿದ್ದೇವೆ. ಅವರ ನಡವಳಿಕೆಯಲ್ಲಿ ಏನಾದರೂ ಸುಧಾರಣೆಯಾದರೆ ಸರಿ, ಇಲ್ಲವಾದರೆ ತಕ್ಕ ಪಾಠ ಕಲಿಸುತ್ತೇವೆ. `ಆಪರೇಷನ್ ಸಿಂಧೂರ’ ಇನ್ನೂ ಮುಗಿದಿಲ್ಲ. ಈಗ ನಡೆದಿದ್ದು ಟ್ರೇಲರ್ ಅಷ್ಟೇ. ಸರಿಯಾದ ಸಮಯ ಬಂದಾಗ ಜಗತ್ತಿಗೆ ಸಿನಿಮಾವನ್ನು ತೋರಿಸುತ್ತೇವೆ ಎಂದರು.ಇದನ್ನೂ ಓದಿ: IMF ಸಾಲವನ್ನು ಪಾಕ್ ಪರೋಕ್ಷವಾಗಿ ಭಯೋತ್ಪಾದನೆಗೆ ಬಳಸ್ತಿದೆ – ರಾಜನಾಥ್ ಸಿಂಗ್

1965 ಮತ್ತು 1971ರಲ್ಲಿ ಭುಜ್ ವಾಯುನೆಲೆ ಪಾಕಿಸ್ತಾನ ವಿರುದ್ಧದ ಭಾರತದ ಗೆಲುವಿಗೆ ಸಾಕ್ಷಿಯಾಗಿತ್ತು. ಇಂದು ಅದೇ ಭುಜ್ ನೆಲೆ ಮತ್ತೆ ಪಾಕಿಸ್ತಾನ ವಿರುದ್ಧದ ನಮ್ಮ ಗೆಲುವಿಗೆ ಸಾಕ್ಷಿಯಾಗಿದೆ. ಇಂದು ನಾನು ಇಲ್ಲಿರುವುದು ನನಗೆ ಹೆಮ್ಮೆ. ಆಪರೇಷನ್ ಸಿಂಧೂರ ಕಾರ್ಯಾಚರಣೆ ಇಡೀ ಭಾರತೀಯರು ಹೆಮ್ಮೆಪಡುವಂತಹ ವಿಷಯವಾಗಿದೆ ಎಂದರು.

ಗುರುವಾರವಷ್ಟೇ ನಾನು ಶ್ರೀನಗರದಲ್ಲಿ ನಮ್ಮ ಧೈರ್ಯಶಾಲಿ ಸೇನಾ ಸಿಬ್ಬಂದಿಯನ್ನು ಭೇಟಿಯಾದೆ. ಇಂದು ನಾನು ವಾಯುಪಡೆಯನ್ನು ಭೇಟಿಯಾಗಿದ್ದೇನೆ. ನೀವು ಭಾರತದ ಗಡಿಗಳಲ್ಲಿ ಯಾವಾಗಲೂ ಕಾರ್ಯಪ್ರವೃತ್ತರಾಗಿರುವುದರಿಂದ ನಾವೆಲ್ಲರೂ ಸುರಕ್ಷಿತವಾಗಿದ್ದೇವೆ ಎನ್ನುವ ಭರವಸೆ ನನಗಿದೆ. ಬ್ರಹ್ಮೋಸ್ ಕ್ಷಿಪಣಿಯ ಶಕ್ತಿಯನ್ನು ಪಾಕಿಸ್ತಾನ ಕೂಡ ಒಪ್ಪಿಕೊಂಡಿದೆ. ಕ್ಷಿಪಣಿಗಳ ಶಬ್ದದಲ್ಲಿ ನಿಮ್ಮೆಲ್ಲರ ಶೌರ್ಯ ಹಾಗೂ ಭಾರತೀಯ ಮೂರು ಪಡೆಗಳ ಶೌರ್ಯ ಪ್ರತಿಧ್ವನಿಸುತ್ತಿತ್ತು ಎಂದು ತಿಳಿಸಿದರು.ಇದನ್ನೂ ಓದಿ: ಆಪರೇಷನ್‌ ಸಿಂಧೂರ ಬಳಿಕ ಭಾರತೀಯ ಸೇನೆಗೆ ಬೂಸ್ಟ್‌ – ರಕ್ಷಣಾ ಇಲಾಖೆಗೆ 50,000 ಕೋಟಿ ಹೆಚ್ಚುವರಿ ಬಜೆಟ್

Share This Article