ನವದೆಹಲಿ: ಇಂದಿನ ಸೂರ್ಯೋದಯ ನೋಡುವುದಕ್ಕೂ ಮುನ್ನವೇ ಭಾರತೀಯ ಸೇನೆ ಪಾಕಿಸ್ತಾನಕ್ಕೆ ದೊಡ್ಡ ಶಾಕ್ ಕೊಟ್ಟಿದೆ. ಕಾಶ್ಮೀರದ ಬೈಸರನ್ ಕಣಿವೆಯಲ್ಲಿ ನಡೆದ ಹಿಂದೂಗಳ ನರಮೇಧಕ್ಕೆ ಪ್ರತೀಕಾರವಾಗಿ ಭಾರತ ʻOperation Sindoorʼ ಹೆಸರಿನಲ್ಲಿ ಏರ್‌ಸ್ಟ್ರೈಕ್ ನಡೆಸಿದೆ. ತಡರಾತ್ರಿ ಕೇವಲ 23 ನಿಮಿಷಗಳ ಕಾಲ ನಡೆಸಿದ ದಾಳಿಯಲ್ಲಿ ಪಾಕ್‌ನ 80ಕ್ಕೂ ಹೆಚ್ಚು ಉಗ್ರರು ಮಟ್ಯಾಶ್ ಆಗಿದ್ದಾರೆ ಎಂದು ಕೆಲ ವರದಿಗಳು ತಿಳಿಸಿವೆ.
ಹೌದು.. ತಡರಾತ್ರಿ 1:44 ಗಂಟೆ ವೇಳೆಗೆ ಪಾಕ್ ಉಗ್ರರ ಅಡಗುತಾಣಗಳ ಮೇಲೆ ರಫೇಲ್ ಇನ್ನಿತರ ಫೈಟರ್‌ಜೆಟ್‌ಗಳಿಂದ ದಾಳಿ ನಡೆಸಿದ ಭಾರತೀಯ ಸೇನೆ ರಾತ್ರಿ 2:07 ವೇಳೆಗೆ ಕಾರ್ಯಾಚರಣೆ ಮುಗಿಸಿತ್ತು. ದಾಳಿ ನಡೆಸಿದ ಬಳಿಕ ಭಾರತೀಯ ಸೇನೆಯ ಜೆಟ್‌ಗಳು ಸೇಫ್ ಆಗಿ ಮರಳಿವೆ. ಇನ್ನೂ ಈ ದಾಳಿಯಲ್ಲಿ 80ಕ್ಕೂ ಹೆಚ್ಚು ಉಗ್ರರು ಹತ್ಯೆಯಾಗಿದ್ದಾರೆ, ಜೊತೆಗೆ ಲಷ್ಕರ್ ಉಗ್ರರಿಗೆ ತರಬೇತಿ ನೀಡಿದ್ದ ಸುಬಾನಲ್ಲಾಹ್ ಮಸೀದಿ ಸೇರಿದಂತೆ ಪ್ರಮುಖ ತಾಣಗಳು ಧ್ವಂಸವಾಗಿದೆ. ಇದನ್ನೂ ಓದಿ: ನಾವು ಭಾರತದ ಸೈನಿಕರನ್ನು ಸೆರೆ ಹಿಡಿದಿಲ್ಲ: ಬುರುಡೆ ಬಿಟ್ಟು ಸತ್ಯ ಒಪ್ಪಿಕೊಂಡ ಪಾಕ್ ಸಚಿವ
ಸದ್ಯ ಪಾಕಿಸ್ತಾನದಲ್ಲಿನ 9ಕ್ಕೂ ಹೆಚ್ಚು ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಲಾಗಿದ್ದು, ಈ ವಿಷಯದಲ್ಲಿ ಸೇನೆಗಳಿಗೆ ಭಾರತ್ ಸರ್ಕಾರ ಪರಮಾಧಿಕಾರ ನೀಡಿದೆ. ʻMock Drill’ಗೆ ಸೂಚನೆ ಬಂದ ಬೆನ್ನಲ್ಲೇ ಪಾಕಿಸ್ತಾನದ ವಿರುದ್ಧ ಭಾರತ ಸೇನೆಗಳು ಅಧಿಕೃತವಾಗಿ ಕಾರ್ಯಾಚರಣೆಗೆ ಇಳಿದಿವೆ. ಅತ್ತ ಪಾಕಿಸ್ತಾನದ ಗಡಿಯಲ್ಲೂ ತೀವ್ರ ಕಟ್ಟೆಚ್ಚರ ವಹಿಸಲಾಗಿದ್ದು, ಸೇನಾ ಚಟುವಟಿಕೆಗಳು ಬಿರುಸುಪಡೆದುಕೊಂಡಿವೆ. ಇದನ್ನೂ ಓದಿ: 9 ಉಗ್ರರ ನೆಲೆಗಳು ಉಡೀಸ್- ಗಡಿಯಿಂದ ಎಷ್ಟು ದೂರ ಇದೆ? ಎಲ್ಲೆಲ್ಲಿ ದಾಳಿ?
ಭಾರತ ಪಾಕಿಸ್ತಾನಗಳ ನಡುವೆ ಸೇನಾ ಸಮರದ ನಡೆಯಲಿದೆ ಎಂದು ಚರ್ಚೆಯಾಗಿತ್ತು. ಅದಕ್ಕೆ ಪೂರಕ ಎಂಬಂತೆ ಎರಡು ರಾಷ್ಟ್ರಗಳು ಸಮರಾಭ್ಯಾಸ ಸೇರಿದಂತೆ ಸೇನೆಗೆ ಸಂಬಂಧಿಸಿದ ಚಟುವಟಿಕೆಗಳನ್ನು ಆರಂಭಿಸಿದ್ದವು. ಶತ್ರು ರಾಷ್ಟ್ರದಿಂದ ದಾಳಿ ನಡೆದ ಪಕ್ಷದಲ್ಲಿ ನಾಗರಿಕರಿಗೆ ತುರ್ತು ಪರಿಸ್ಥಿತಿಯನ್ನು ನಿಭಾಯಿಸಲು ಬೇಕಾದ ಸಿದ್ಧತೆ ಕೈಗೊಳ್ಳುವುದಕ್ಕಾಗಿ ಬುಧವಾರ ನಾಗರಿಕ ಸ್ವರಕ್ಷಣೆ ತಾಲೀಮು ನಡೆಸಲು ಕೇಂದ್ರ ಗೃಹಸಚಿವಾಲಯ ಎಲ್ಲ ರಾಜ್ಯಗಳಿಗೆ ಸೂಚಿಸಿತ್ತು. ರಾಜ್ಯಗಳು ಸಿದ್ಧತೆಯನ್ನೂ ನಡೆಸಿದ್ದವು. ಇದರ ನಡುವೆಯೇ ಭಾರತೀಯ ಸೇನೆಯು ಮಂಗಳವಾರ ರಾತ್ರಿ ಉಗ್ರರ ಶಿಬಿರಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಇದನ್ನೂ ಓದಿ: Justice is Served ಜೈ ಹಿಂದ್ ಎಂದ ಭಾರತೀಯ ಸೇನೆ