ನವದೆಹಲಿ: ಪಹಲ್ಗಾಮ್ ದಾಳಿಗೆ (Pahalgam Terrorist Attack) ಪ್ರತೀಕಾರವಾಗಿ ಭಾರತೀಯ ಸೇನೆ (Indian Army) ನಡೆಸಿದ `ಆಪರೇಷನ್ ಸಿಂಧೂರ’ ಯಾವುದೇ ದೋಷವಿಲ್ಲದೇ ಗುರಿ ತಲುಪಿದೆ ಎಂದು ಭಾರತೀಯ ಸಶಸ್ತ್ರ ಪಡೆಯನ್ನು ಪ್ರಧಾನಿ ನರೇಂದ್ರ ಮೋದಿ (PM Narendra Modi) ಶ್ಲಾಘಿಸಿದ್ದಾರೆ.
ಏ.22ರಂದು ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ಉಗ್ರರು ನಡೆಸಿದ ಹಿಂದೂಗಳ ನರಮೇಧದಲ್ಲಿ 26 ಜನರನ್ನು ಬಲಿತೆಗೆದುಕೊಂಡಿದ್ದರ ಪ್ರತೀಕಾರವಾಗಿ `ಆಪರೇಷನ್ ಸಿಂಧೂರ’ ಅಡಿಯಲ್ಲಿ ಭಾರತೀಯ ಸೇನೆ ಮಂಗಳವಾರ ತಡರಾತ್ರಿ 1:44ರ ಸುಮಾರಿಗೆ ರಫೇಲ್ ವಿಮಾನಗಳ ಮೂಲಕ ಪಾಕ್‌ನ 9 ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದೆ.ಇದನ್ನೂ ಓದಿ: ವಾಯುನೆಲೆ ನಿರ್ಬಂಧ – ಮೇ 10ರವರೆಗೆ 165ಕ್ಕೂ ಹೆಚ್ಚು ಇಂಡಿಗೋ ವಿಮಾನ ಬಂದ್
ದಾಳಿಯ ಬಳಿಕ ಭದ್ರತೆಯ ಕುರಿತು ಸಂಪುಟ ಸಮಿತಿ ಸಭೆ ಆಯೋಜಿಸಲಾಗಿತ್ತು. ಸಭೆಗೂ ಮುನ್ನ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಪ್ರಧಾನಿ ಮೋದಿಯವರನ್ನು ಭೇಟಿಯಾದರು.
ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಪಾಕಿಸ್ತಾನದ ವಿರುದ್ಧ ನಡೆಸಿದ `ಆಪರೇಷನ್ ಸಿಂಧೂರ’ ಕಾರ್ಯಾಚರಣೆಯ ಬಗ್ಗೆ ಮಾಹಿತಿ ನೀಡಿದರು. ಭಾರತೀಯ ಸೇನೆ ಅಂದುಕೊಂಡ ಹಾಗೆ ಯಾವುದೇ ದೋಷಗಳಿಲ್ಲದೇ ಕಾರ್ಯಾಚರಣೆಯ ಗುರಿ ತಲುಪಿದೆ. ಇಡೀ ದೇಶ ಭಾರತೀಯ ಸೇನೆಯೊಂದಿಗಿದೆ ಎಂದು ಹೇಳಿದರು.
ಭಾರತೀಯ ಸಶಸ್ತ್ರ ಪಡೆಗಳು ಒಟ್ಟು ಒಂಬತ್ತು ಭಯೋತ್ಪಾದಕ ನೆಲೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ರಕ್ಷಣಾ ಸಚಿವಾಲಯದ ಪ್ರಕಾರ, ಸೇನೆಯು ಕೇಂದ್ರಿಕರಿಸಿ, ಅಳತೆ ತೂಗಿ ನಿಖರವಾಗಿ ದಾಳಿ ನಡೆಸಿದ್ದು, ಪಾಕಿಸ್ತಾನದ ಯಾವುದೇ ಮಿಲಿಟರಿ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡಿಲ್ಲ ಎಂದು ತಿಳಿಸಿದೆ.ಇದನ್ನೂ ಓದಿ: ಏರ್‌ಸ್ಟ್ರೈಕ್‌ಗೆ ಸಾಕ್ಷಿ ಎಲ್ಲಿದೆ ಅಂದವರ ಬಾಯಿಯನ್ನೇ ಬಂದ್ ಮಾಡಿದ ಸೇನೆ!