Operation Sindoor | ಮೋಸ್ಟ್‌ ಡೇಂಜರಸ್‌ ಉಗ್ರರನ್ನ ತಯಾರು ಮಾಡ್ತಿದ್ದ ತಾಣಗಳು ಉಡೀಸ್‌

Public TV
4 Min Read
Operation Sindoor 3 1

– ಅಮೆರಿಕ, ಇಂಗ್ಲೆಂಡ್, ಸೌದಿ, ರಷ್ಯಾಗೆ ಮಾಹಿತಿ

ನವದೆಹಲಿ: ರಾತ್ರೋ ರಾತ್ರಿ ಭಾರತ ನಡೆಸಿದ ʻಆಪರೇಷನ್‌ ಸಿಂಧೂರʼ ಪ್ರತೀಕಾರದ ದಾಳಿಯಲ್ಲಿ (Pahalgam Terrorist Attack) ನಿಷೇಧಿತ ಮೂರು ಉಗ್ರ ಸಂಘಟನೆಗಳಾದ ಜೈಶ್‌ ಎ ಮೊಹಮ್ಮದ್‌, ಲಷ್ಕರ್‌ ಎ ತೈಬಾ (LET) ಮತ್ತು ಹಿಜ್ಬುಲ್‌ ಮುಜಾಹಿದ್ದೀನ್‌ ಉಗ್ರರ ಪ್ರಧಾನ ಕಚೇರಿಗಳು ಧ್ವಂಸವಾಗಿದೆ.

ಪಾಕಿಸ್ತಾನ ಮತ್ತು ಪಾಕ್ ಅಕ್ರಮಿತ ಕಾಶ್ಮೀರದಲ್ಲಿರುವ 9 ಅಡಗುತಾಣಗಳ ಮೇಲೆ ಭಾರತೀಯ ವಾಯು ಸೇನೆ (IAF) ದಾಳಿ ನಡೆಸಿದೆ. ಭಾರತ ಧ್ವಂಸ ಮಾಡಿರುವ ಈ ಉಗ್ರರ (Terrorist) ನೆಲೆಗಳು ಮೋಸ್ಟ್‌ ಡೇಂಜರಸ್‌ ತಾಣಗಳು ಎಂದೇ ಗುರುತಿಸಿಕೊಂಡಿದ್ದು, ಇಡೀ ವಿಶ್ವಕ್ಕೆ ಕಂಟಕವಾಗಿದ್ದವು. ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಇಲ್ಲಿ ಅಡಗಿಸಿಡಲಾಗಿತ್ತು. ಜೊತೆಗೆ ವಿಶ್ವಾದ್ಯಂತ ವಿವಿಧೆಡೆಗೆ ಕಳುಹಿಸಲು ಇಲ್ಲಿ ತರಬೇತಿ ನೀಡಲಾಗುತ್ತಿತ್ತು ಅನ್ನೋ ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿದೆ. ಅದಕ್ಕಾಗಿ ಭಾರತೀಯ ಸೇನೆಯು ನಾಗರಿಕರು ಮತ್ತು ಸೇನೆಯನ್ನ ಗುರಿಯಾಗಿಸದೇ ಕೇವಲ ಉಗ್ರರ ನೆಲೆಗಳನ್ನ ಗುರಿಯಾಗಿಸಿ ದಾಳಿ ನಡೆಸಿದೆ. ಇದನ್ನೂ ಓದಿ: Operation Sindoor | ಭಾರತದ ಪ್ರತೀಕಾರ ದಾಳಿಗೆ 15 ಎಕ್ರೆ ವಿಸ್ತೀರ್ಣದಲ್ಲಿದ್ದ ಮಸೂದ್‌ ತಾಣ ಢಮಾರ್‌

Operation Sindoor 1

ಕಾರ್ಯಾಚರಣೆಯಲ್ಲಿ ನಿಷೇಧಿತ ಜೈಶ್ -ಎ-ಮೊಹಮ್ಮದ್ ಭಯೋತ್ಪಾದಕ ಗುಂಪುಗಳ ನೆಲೆಯಿರುವ ಬಹವಾಲ್‌ಪುರದಲ್ಲಿ ಮರ್ಕಜ್ ಸುಭಾನ್ ಅಲ್ಲಾ ಮಸೀದಿ, ತೆಹ್ರಾ ಕಲಾನ್‌ನಲ್ಲಿನ ಸರ್ಜಾಲ್, ಕೋಟಿಯ ಮರ್ಕಜ್ ಅಬ್ಬಾಸ್ ಮತ್ತು ಮುಜಫರಾಬಾದ್‌ನ ಸೈಯನ್ನಾ ಬಿಲಾಲ್ ಕ್ಯಾಂಪ್‌ಗಳ ಮೇಲೆ ಭಾರತ ದಾಳಿ ನಡೆಸಿದೆ. ಲಷ್ಕ‌ರ್ ಎ ತೈಬಾ ಉಗ್ರ ಸಂಘಟನೆಯ ಶಿಬಿರಗಳಿರುವ ಮುರ್ಡಿಕೆಯ ಮರ್ಕಝ್ ತೈಬಾ, ಬರ್ನಾಲಾದಲ್ಲಿ ಮರ್ಕಝ್ ಅತ್ತೆ ಹದಿತ್ ಮತ್ತು ಮುಜಫರಾಬಾದ್‌ನ ಶ್ವವಾಯಿ ನಲ್ಲಾ ಮೇಲೆ ದಾಳಿ ನಡೆದಿದೆ.

ಮಕಾಜ್ ರಹೀಲ್ ಶಾಹಿದ್ ಮತ್ತು ಸಿಯಾಲ್‌ಕೋಟ್‌ನ ಮೆಹಮೂನಾ ಜೋಯಾ ಪ್ರದೇಶಗಳಲ್ಲಿ ನಿಷೇಧಿತ ಹಿಜ್ಜುಲ್ ಮುಜಾಹಿದ್ದೀನ್‌ನ ಶಿಬಿರಗಳು ಮತ್ತು ತರಬೇತಿ ಕೇಂದ್ರಗಳಿದ್ದು, ಅವುಗಳನ್ನು ಧ್ವಂಸಗೊಳಿಸಲಾಗಿದೆ. ಇದನ್ನೂ ಓದಿ: 9 ಉಗ್ರರ ನೆಲೆಗಳು ಉಡೀಸ್‌- ಗಡಿಯಿಂದ ಎಷ್ಟು ದೂರ ಇದೆ? ಎಲ್ಲೆಲ್ಲಿ ದಾಳಿ?

Hafiz Saeed Mosque

ಯುಎಸ್‌, ರಷ್ಯಾಗೆ ಮಾಹಿತಿ:
ಇನ್ನೂ ಭಾರತದ ಏರ್‌ಸ್ಟ್ರೈಕ್‌ ಕುರಿತು ಭಾರತೀಯ ವಿದೇಶಾಂಗ ಸಚಿವಾಲಯ ಅಮೆರಿಕ, ಇಂಗ್ಲೆಂಡ್, ಸೌದಿ ಅರೇಬಿಯಾ, ರಷ್ಯಾ ಸೇರಿದಂತೆ ಹಲವು ದೇಶಗಳಿಗೆ ಮಾಹಿತಿ ನೀಡಿದೆ. ಭಾರತದ ಈ ದಾಳಿಯನ್ನು ಇಸ್ರೇಲ್‌ ಸೇರಿದಂತೆ ಹಲವು ದೇಶಗಳು ಶ್ಲಾಘಿಸಿವೆ.

ತಡರಾತ್ರಿ 1:44 ಗಂಟೆ ವೇಳೆಗೆ ಪಾಕ್‌ ಉಗ್ರರ ಅಡಗುತಾಣಗಳ ಮೇಲೆ ರಫೇಲ್‌ ಇನ್ನಿತರ ಫೈಟರ್‌ಜೆಟ್‌ಗಳಿಂದ ದಾಳಿ ನಡೆಸಿದ ಭಾರತೀಯ ಸೇನೆ ರಾತ್ರಿ 2:07 ವೇಳೆಗೆ ಕಾರ್ಯಾಚರಣೆ ಮುಗಿಸಿತ್ತು. ದಾಳಿ ನಡೆಸಿದ ಬಳಿಕ ಭಾರತೀಯ ಸೇನೆ‌ಯ ಜೆಟ್‌ಗಳು ಸೇಫ್‌ ಆಗಿ ಮರಳಿವೆ. ಇನ್ನೂ ಈ ದಾಳಿಯಲ್ಲಿ 80ಕ್ಕೂ ಹೆಚ್ಚು ಉಗ್ರರು ಹತ್ಯೆಯಾಗಿದ್ದಾರೆ, ಜೊತೆಗೆ ಲಷ್ಕರ್‌ ಉಗ್ರರಿಗೆ ತರಬೇತಿ ನೀಡಿದ್ದ ಸುಬಾನಲ್ಲಾಹ್‌ ಮಸೀದಿ ಸೇರಿದಂತೆ ಪ್ರಮುಖ ತಾಣಗಳು ಧ್ವಂಸವಾಗಿದೆ. ಇದನ್ನೂ ಓದಿ: Operation Sindoor | ವಾಯುನೆಲೆ ಬಂದ್ – ಶ್ರಿನಗರದಿಂದ ವಿಮಾನ ಹಾರಾಟ ಸ್ಥಗಿತ

ಎಲ್ಲೆಲ್ಲಿ ದಾಳಿ ನಡೆದಿದೆ?
1) ಬಹವಾಲ್ಪುರ್: ಅಂತರರಾಷ್ಟ್ರೀಯ ಗಡಿಯಿಂದ ಸುಮಾರು 100 ಕಿ.ಮೀ ದೂರದಲ್ಲಿರುವ ಬಹವಾಲ್ಪುರ್ ಮೇಲೆ ದಾಳಿ ನಡೆದಿದೆ. ಇದು ಜೈಷ್‌ ಉಗ್ರ ಸಂಘಟನೆಯ ಪ್ರಧಾನ ಕಚೇರಿಯಾಗಿತ್ತು.

2) ಮುರಿಡ್ಕೆ: ಸಾಂಬಾ ಎದುರಿನ ಗಡಿಯಿಂದ 30 ಕಿ.ಮೀ ದೂರದಲ್ಲಿದ್ದು ಇದು ಲಷ್ಕರ್-ಎ-ತೈಬಾ ಸಂಘಟನೆ ಉಗ್ರರ ಶಿಬಿರ ನಡೆಸುತ್ತಿತ್ತು. ಮುಂಬೈ ದಾಳಿ ನಡೆಸಿದ ಉಗ್ರರಿಗೆ ಇಲ್ಲಿ ತರಬೇತಿ ನೀಡಲಾಗಿತ್ತು.

3) ಗುಲ್ಪುರ್ : ಗಡಿ ನಿಯಂತ್ರಣ ರೇಖೆ ಪೂಂಚ್-ರಾಜೌರಿಯಿಂದ 35 ಕಿ.ಮೀ ದೂರದಲ್ಲಿದೆ. ಪೂಂಚ್‌ನಲ್ಲಿ ಏಪ್ರಿಲ್ 20, 2023 ರಂದು ನಡೆದ ದಾಳಿ ಮತ್ತು ಜೂನ್ 24 ರಂದು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಅಮಾಯಕ ಯಾತ್ರಿಕರ ಮೇಲೆ ಇಲ್ಲಿ ತರಬೇತಿ ಪಡೆದ ಉಗ್ರರು ದಾಳಿ ನಡೆಸಿದ್ದರು.

4) ಸವಾಯಿ: ಲಷ್ಕರ್‌ ಉಗ್ರರ ಕ್ಯಾಂಪ್‌ ಇದಾಗಿದ್ದು ಗಡಿ ನಿಯಂತ್ರಣ ರೇಖೆಯಿಂದ 30 ಕಿ.ಮೀ ದೂರದಲ್ಲಿದೆ. ಕಳೆದ ವರ್ಷ ಅಕ್ಟೋಬರ್ 20, 24 ರಂದು ಸೋನ್‌ಮಾರ್ಗ್, ಅಕ್ಟೋಬರ್ 24 ರಂದು ಗುಲ್ಮಾರ್ಗ್ ಮತ್ತು ಏಪ್ರಿಲ್ 22 ರಂದು ಪಹಲ್ಗಾಮ್ ಮೇಲೆ ದಾಳಿ ನಡೆಸಿದ ಉಗ್ರರು ಇಲ್ಲಿ ತರಬೇತಿ ಪಡೆದಿದ್ದರು.

5) ಬಿಲಾಲ್: ಉಗ್ರ ಸಂಘಟನೆ ಜೈಷ್–ಎ–ಮೊಹಮದ್ ಲಾಂಚ್‌ ಪ್ಯಾಡ್‌ ಇದಾಗಿದ್ದು ಉಗ್ರರು ಇಲ್ಲಿ ಕೊನೆಯ ಹಂತದ ತರಬೇತಿ ಪಡೆದು ಭಾರತಕ್ಕೆ ನುಗ್ಗುತ್ತಿದ್ದರು.

6) ಕೋಟ್ಲಿ: ಗಡಿ ನಿಯಂತ್ರಣ ರೇಖೆಯಿಂದ 15 ಕಿ.ಮೀ ದೂರದಲ್ಲಿದೆ. ಲಷ್ಕರ್‌ ಉಗ್ರರ ಕ್ಯಾಂಪ್‌ ಇದಾಗಿದ್ದು 50 ಉಗ್ರರಿಗೆ ತರಬೇತಿ ನೀಡುವ ಸಾಮರ್ಥ್ಯ ಹೊಂದಿತ್ತು.

7) ಬರ್ನಾಲಾ: ಭಾರತ ಗಡಿಯಿಂದ 10 ಕಿ.ಮೀ ದೂರದಲ್ಲಿದೆ. ಇಲ್ಲೂ ಲಷ್ಕರ್‌ ಉಗ್ರರಿಗೆ ತರಬೇತಿ ನೀಡಲಾಗುತ್ತಿತ್ತು.

8) ಸರ್ಜಲ್: ಸಾಂಬಾ ಕಟುವಾ ಬಳಿ ಅಂತಾರಾಷ್ಟ್ರೀಯ ಗಡಿಯಿಂದ 8 ಕಿಲೋಮೀಟರ್ ದೂರದಲ್ಲಿ ಜೈಶ್ ಎ ಮೊಹಮದ್ ಕ್ಯಾಂಪ್.

9) ಮಹಮೂನಾ: ಸಿಯಾಲ್ ಕೋಟ್ ಬಳಿಯ ಅಂತಾರಾಷ್ಟ್ರೀಯ ಗಡಿಯಿಂದ 15 ಕಿಲೋಮೀಟರ್ ದೂರದಲ್ಲಿ ಹಿಜ್ಬುಲ್ಲಾ ಟ್ರೈನಿಂಗ್ ಸೆಂಟರ್.

Share This Article