ಭುವನೇಶ್ವರ: ಒಡಿಶಾ ರಾಜ್ಯದ ಸರ್ಕಾರಿ ನೌಕರಿಗೆ ಸೇರುವ ವಿವಿಧ ವರ್ಗಗಳ ಗರಿಷ್ಠ ವಯೋಮಿತಿಯನ್ನು ಹೆಚ್ಚಿಸಿದೆ. ಇದರಲ್ಲಿ ಎಸ್‌ಸಿಬಿಸಿ, ಪರಿಶಿಷ್ಟ ಜಾತಿ ಹಾಗೂ ಪಂಗಡಕ್ಕೆ ಸೇರಿದ ಅಂಗವಿಕಲ ಅಭ್ಯರ್ಥಿಗಳು 53 ವರ್ಷಗಳ ವರೆಗೂ ಅರ್ಜಿ ಸಲ್ಲಿಸಬಹುದು ಎಂಬುದು ಗಮನಾರ್ಹ ವಿಚಾರ.
ಒಡಿಶಾ ರಾಜ್ಯ ಸರ್ಕಾರ, ಸರ್ಕಾರಿ ನೌಕರಿಗೆ ಸೇರುವ ಅಭ್ಯರ್ಥಿಗಳ ವಯೋಮಿತಿಯನ್ನು ಏರಿಸುವ ಮೂಲಕ ಮಧ್ಯ ವಯಸ್ಕರಿಗೂ ಉತ್ತಮ ಅವಕಾಶ ದೊರಕುವಂತೆ ಮಾಡಿದೆ. ಇದರಲ್ಲಿ ಸಾಮಾನ್ಯ ವರ್ಗದ ಮಿತಿಯನ್ನು 32 ವರ್ಷದಿಂದ 38 ವರ್ಷಗಳಿಗೆ ಹೆಚ್ಚಿಸಿದೆ. ಇದನ್ನೂ ಓದಿ: ಮುಗಿಯದ ಕೇಸರಿ ಶಲ್ಯ ವಿವಾದ – ಠಾಣೆ ಮೆಟ್ಟಿಲೇರಿದ ವಿದ್ಯಾರ್ಥಿಗಳ ಗಲಾಟೆ
Advertisement
Advertisement
ಎಸ್‌ಸಿಬಿಸಿ, ಪರಿಶಿಷ್ಟ ಜಾತಿ ಹಾಗೂ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳ ಗರಿಷ್ಠ ವಯೋಮಿತಿಯನ್ನು 43 ವರ್ಷಗಳಿಗೆ ಹೆಚ್ಚಿಸಲಾಗಿದೆ ಹಾಗೂ ಈ ಪ್ರವರ್ಗದ ಮಹಿಳಾ ಅಭ್ಯರ್ಥಿಗಳ ವಯೋಮಿತಿಯನ್ನೂ 43 ವರ್ಷಗಳಿಗೆ ಏರಿಸಲಾಗಿದೆ. ಉಳಿದೆಲ್ಲಾ ವರ್ಗಗಳ ಅಂಗವಿಕಲ ಅಭ್ಯರ್ಥಿಗಳ ವಯೋಮಿತಿಯನ್ನು 48 ವರ್ಷಗಳಿಗೆ ಹೆಚ್ಚಿಸಲಾಗಿದೆ. ಇದನ್ನೂ ಓದಿ: ಬಿಜೆಪಿ ಶಾಸಕರು, ಸಚಿವರು, ನಾಯಕರಿಗೆ ಹೈಕಮಾಂಡ್ ಕ್ಲಾಸ್
Advertisement
ಈ ವಯೋಮಿತಿ 2021ರಲ್ಲಿ ಹೊರಡಿಸಲಾದ ಅಧಿಸೂಚನೆಗಳಿಗೆ ಹಾಗೂ 2022-23ರ ಅಧಿಸೂಚನೆಗಳಿಗೆ ಅನ್ವಯವಾಗುತ್ತದೆ ಎಂದು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ತಿಳಿಸಿದ್ದಾರೆ. ಇಷ್ಟು ಮಾತ್ರವಲ್ಲದೇ ಒಡಿಶಾ ಉನ್ನತ ಶಿಕ್ಷಣ ಇಲಾಖೆ ತಾಯ್ತನದ ರಜೆಯನ್ನು ಗರಿಷ್ಠ 180 ದಿನಗಳ ವರೆಗೆ ಹೆಚ್ಚಿಸುವುದಾಗಿ ತಿಳಿಸಿದೆ.