ಬೆಂಗಳೂರು: ಅನಧಿಕೃತ ರ‍್ಯಾಪಿಡೋ ಬೈಕ್ ಟ್ಯಾಕ್ಸಿ (Rapido bike taxi) ನಿಷೇಧಕ್ಕೆ ಆಗ್ರಹಿಸಿ ಸೋಮವಾರ ಸಂಪೂರ್ಣ ಆಟೋ ಸಂಚಾರ ಬಂದ್ ಮಾಡಲು ಆಟೋ ಚಾಲಕರು ನಿರ್ಧರಿಸಿದ್ದಾರೆ. ಭಾನುವಾರ ಮಧ್ಯರಾತ್ರಿ 12 ರಿಂದ 24 ಗಂಟೆಗಳ ಕಾಲ ನಗರದಲ್ಲಿ ಆಟೋ ಸಂಚಾರ ಸ್ಥಗಿತಗೊಳ್ಳಲಿದೆ.
ಸೋಮವಾರ ಬೆಳಗ್ಗೆ 11 ಗಂಟೆಗೆ ಕಪ್ಪುಪಟ್ಟಿ ಧರಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ (Basavaraj Bommai) ರೇಸ್ ಕೋರ್ಸ್ ನಿವಾಸಕ್ಕೆ ಮುತ್ತಿಗೆ ಹಾಕಲು ಆಟೋ ಚಾಲಕರು ತೀರ್ಮಾನಿಸಿದ್ದಾರೆ. ರಾಜ್ಯ ಸರ್ಕಾರಕ್ಕೆ ಮೂರು ದಿನಗಳ ಡೆಡ್‍ಲೈನ್ ನೀಡಿ, ಆಟೋ ಚಾಲಕರು ಕಪ್ಪು ಪಟ್ಟಿ ಧರಿಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡದ ಹಿನ್ನೆಲೆಯಲ್ಲಿ ಮುಷ್ಕರಕ್ಕೆ ಮುಂದಾಗಿದ್ದಾರೆ. ಇದನ್ನೂ ಓದಿ: ಶಿವಮೊಗ್ಗ ಡಿಸಿ ಕಚೇರಿ ಮೇಲೆ ನಿಂತು ಆಜಾನ್ ಕೂಗಿದ ಯುವಕ
Advertisement
Advertisement
Advertisement
Advertisement
ಬೈಕ್ ಟ್ಯಾಕ್ಸಿಯಿಂದ ನಮಗೆ ಬಾಡಿಗೆ ಸಿಗುತ್ತಿಲ್ಲ. ನಮ್ಮ ಜೀವನಕ್ಕೆ ತೊಂದರೆಯಾಗಿದೆ. ಯೆಲ್ಲೋ ಬೋರ್ಡ್ ಹಾಕಿಕೊಂಡು ಬೈಕ್ ಟ್ಯಾಕ್ಸಿ ಸೇವೆ ಸೇವೆ ನೀಡಲಿ ಎಂದು ಆಟೋ ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದ 21 ಆಟೋ ಚಾಲಕರ ಸಂಘಟನೆಗಳು (Auto Rickshaw Drivers Union) ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದು, 2 ಲಕ್ಷದ 10 ಸಾವಿರ ಆಟೋಗಳ ಸಂಚಾರ ಬಂದ್ ಆಗುವ ಸಾಧ್ಯತೆಯಿದೆ. ಓಲಾ (Ola), ಊಬರ್‌ನಲ್ಲೂ (Ubar) ಆಟೋ ಸೇವೆ ಲಭ್ಯವಿರುವುದಿಲ್ಲ.
ಆರ್‌ಟಿಓದಿಂದ ರ‍್ಯಾಪಿಡೋ ಬ್ಯಾನ್ ಮಾಡಲು ಸಾರಿಗೆ ಸಚಿವ ಶ್ರೀರಾಮುಲು (Sriramulu) ವರದಿ ಕೇಳಿದ್ದಾರೆ. ವರದಿ ಕೈ ಸೇರಿದ ತಕ್ಷಣ, ಚುನಾವಣೆಯೊಳಗೆ ಚಾಲಕರಿಗೆ ಸಿಹಿ ಸುದ್ದಿ ಕೊಡುವುದಾಗಿ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಎಕ್ಸ್‌ಪ್ರೆಸ್‌ವೇಯಲ್ಲಿ ಕೆಎಸ್‌ಆರ್‌ಟಿಸಿ ಚಾಲಕನ ಹುಚ್ಚಾಟಕ್ಕೆ ಬೈಕ್ ಸವಾರ ಬಲಿ