– ಕಾಂಗ್ರೆಸ್‌ನಲ್ಲಿ ಎಸ್ಸಿ/ಎಸ್ಟಿಯ 16 ಶಾಸಕರು ವಿಪಕ್ಷಗಳ ಮತ್ಸರಕ್ಕೆ ಕಾರಣ
– ದೇಶದಲ್ಲಿ ಎಷ್ಟು ಸಚಿವರ ವಿರುದ್ಧ ಮೊಕದ್ದಮೆಗಳಿವೆ ಎಂದು ತಿಳಿಸಲಿ: ಸಿಎಂ ಸವಾಲು
ಬೆಂಗಳೂರು: ಪ್ರತಿಪಕ್ಷಗಳಿಗೆ ವಿಧಾನಸಭೆಯಲ್ಲಿ ಕಾಂಗ್ರೆಸ್ (Congress) ಪಕ್ಷವನ್ನು ಎದುರಿಸಲು ಶಕ್ತಿಯಿಲ್ಲದ ಕಾರಣ, ಅಧಿವೇಶನದ ಕಾರ್ಯಕಲಾಪಗಳಿಗೆ ಅಡ್ಡಿಯುಂಟು ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ಅವರು ಇಂದು ಸ್ವಾತಂತ್ರ‍್ಯ ಉದ್ಯಾನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸಚಿವ ನಾಗೇಂದ್ರ ಅವರ ರಾಜಿನಾಮೆ ಒತ್ತಾಯಿಸಿ ಪ್ರತಿಪಕ್ಷಗಳು ನಾಳೆ ವಿಧಾನಸೌಧದಲ್ಲಿ ಧರಣಿ ನಡೆಸಲು ಸಿದ್ಧತೆ ನಡೆಸಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಇಲ್ಲಿ ನೆಲದ ಕಾನೂನಿದೆ. ಕಾನೂನಿನ ಚೌಕಟ್ಟಿನಲ್ಲಿ ಪ್ರತಿಭಟಿಸಲು ಅವಕಾಶವಿದೆ. ಇಂದು ಅವರು ಗೂಂಡಾಗಿರಿ ಮಾಡುತ್ತಿದ್ದಾರೆ. ಒಂದು ನೋಟಿಸ್ ಕೂಡ ಕೊಡದೇ ಅಧಿವೇಶನದ ಕಾರ್ಯಕಲಾಪಗಳನ್ನು ಹಾಳು ಮಾಡುತ್ತಿದ್ದಾರೆ. ಪ್ರತಿಪಕ್ಷಗಳು ಧರಣಿ ಮಾಡುವುದು ತಪ್ಪಲ್ಲ. ಆದರೆ ನೋಟಿಸ್ ನೀಡಿ ಚರ್ಚೆ ನಡೆಸಲಿ. ಸಚಿವರು ರಾಜೀನಾಮೆ ಏಕೆ ನೀಡಬೇಕು ಎಂಬುದನ್ನು ಚರ್ಚೆ ಮಾಡಲು ಪ್ರತಿಪಕ್ಷಗಳಿಗೆ ತಾಳ್ಮೆ ಇಲ್ಲ ಎಂದರು. ಇದನ್ನೂ ಓದಿ: ಪಂಜಾಬ್ ಮೂಲದ ಡೆಲಿವರಿ ಬಾಯ್ ನ್ಯೂಯಾರ್ಕ್‌ನಲ್ಲಿ ಗುಂಡಿನ ದಾಳಿಗೆ ಬಲಿ!
ದೇಶದ ಎಷ್ಟು ಸಚಿವರ ಮೇಲೆ ಮೊಕದ್ದಮೆಗಳಿವೆ ಎಂದು ತಿಳಿಸಲಿ:
ಪ್ರತಿಪಕ್ಷಗಳಿಗೆ ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರವನ್ನು ಎದುರಿಸಲು ಶಕ್ತಿಯಿಲ್ಲ. ಇದುವರೆಗೆ ಯಾವ ಸಚಿವರ ಮೇಲೆ ಹಾಗೂ ಕೇಂದ್ರದ ಎಷ್ಟು ಸಚಿವರ ಮೇಲೆ ಮೊಕದ್ದಮೆಗಳಿವೆ ಎಂದು ಅವರೇ ತಿಳಿಸಲಿ. ಕಾಂಗ್ರೆಸ್ ಪಕ್ಷದಲ್ಲಿ ಸುಮಾರು 16 ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಶಾಸಕರು ಆಯ್ಕೆಯಾಗಿದ್ದು, ಈ ಬಗ್ಗೆ ಅವರಿಗೆ ಮತ್ಸರವಿದೆ. ಅವರ ಪಕ್ಷದಲ್ಲಿ ಯಾವುದೇ ಪರಿಶಿಷ್ಟ ವರ್ಗದ ನಾಯಕರು ಹೊರಹೊಮ್ಮಲಿಲ್ಲ ಎಂಬ ಅಸಮಾಧಾನವಿರುವ ಕಾರಣ, ಈ ರೀತಿಯ ಪ್ರತಿಭಟನೆಗೆ ಮುಂದಾಗಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ʻಆಪರೇಷನ್ ಸಿಂಧೂರʼ ವೇಳೆ ಧ್ವಂಸಗೊಂಡಿದ್ದ ಜೈಶ್ ಉಗ್ರ ಸಂಘಟನೆಯ ಪ್ರಧಾನ ಕಚೇರಿ ಮತ್ತೆ ನಿರ್ಮಾಣ
ಉದ್ಯಮಿ ಅದಾನಿ ಸೌಜನ್ಯದ ಭೇಟಿ:
ಇಂದು ಉದ್ಯಮಿ ಗೌತಮ್ ಅದಾನಿಯವರು ಮುಖ್ಯಮಂತ್ರಿಗಳನ್ನು ಭೇಟಿಯಾದ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, ನಾನು ಮುಖ್ಯಮಂತ್ರಿಯಾದ ನಂತರ ಉದ್ಯಮಿ ಗೌತಮ್ ಅದಾನಿಯವರು ಸೌಜನ್ಯದ ಭೇಟಿ ನೀಡಿ ಮಾತುಕತೆ ನಡೆಸಿದರು ಎಂದು ಹೇಳಿದರು. ಇದನ್ನೂ ಓದಿ: ಎಸ್‌ಐಆರ್‌ನಲ್ಲಿ ಮ್ಯಾಪಿಂಗ್ ಆಗದೇ ಇರುವವರಿಗೆ ಜಾರಿಯಾಗಲಿದೆ ನೋಟಿಸ್

