– ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾನ ಚರ್ಚೆ ಬಹಿಷ್ಕಾರಕ್ಕೂ ನಿರ್ಧಾರ
ನವದೆಹಲಿ: ಮತ ಕಳ್ಳತನ ಆರೋಪದ ಮೇಲೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ (Gyanesh Kumar) ವಿರುದ್ಧ ಸಂಸತ್ತಿನಲ್ಲಿ ಮಹಾಭಿಯೋಗ (Impeachment) ಪ್ರಸ್ತಾವನೆ ಮಂಡಿಸಲು ವಿರೋಧ ಪಕ್ಷಗಳ ಇಂಡಿಯಾ (INDIA) ಮೈತ್ರಿಕೂಟ ಸಿದ್ಧತೆ ಮಾಡಿಕೊಳ್ಳುತ್ತಿವೆ.
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಮತ್ತು ಮತ ಕಳ್ಳತನದ (Vote Theft) ವಿರುದ್ಧ ವಿರೋಧ ಪಕ್ಷಗಳು ಪ್ರತಿಭಟನೆಯನ್ನು ತೀವ್ರಗೊಳಿಸುತ್ತಿದೆ. ಈ ಮಧ್ಯೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ ದೋಷಾರೋಪಣೆ ಮಾಡಲು ಇಂಡಿಯಾ ಮೈತ್ರಿಕೂಟ ನಿರ್ಧರಿಸಿದೆ. ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ನಡೆದ ಇಂಡಿಯಾ ಮೈತ್ರಿಕೂಟದ ನಾಯಕರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಸಿಎಂ ವಿರುದ್ಧ 24 ಕೊಲೆಗಳ ಆರೋಪ – ಯಾವುದೇ ಕ್ಷಣದಲ್ಲಿ ತಿಮರೋಡಿ ಬಂಧನ ಸಾಧ್ಯತೆ
ಈ ಕುರಿತು ಪ್ರತಿಕ್ರಿಯೆ ನೀಡಿರುವ ವಿರೋಧ ಪಕ್ಷದ ನಾಯಕರೊಬ್ಬರು, ಇಂಡಿಯಾ ಮೈತ್ರಿಕೂಟದ ಎಲ್ಲಾ ಸದಸ್ಯರು ಈ ಪ್ರಸ್ತಾಪವನೆಗೆ ಒಪ್ಪಿಗೆ ಸೂಚಿಸಿದ್ದಾರೆ. ಕಾನೂನು ವಿಧಾನಗಳ ಕುರಿತು ಶೀಘ್ರದಲ್ಲೇ ಚರ್ಚೆ ನಡೆಯಲಿದೆ. ಈ ಪ್ರಕ್ರಿಯೆಯು ನ್ಯಾಯಾಧೀಶರ ಮಹಾಭಿಯೋಗದಂತೆಯೇ ಇರಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ರೈಲು ಪ್ರಯಾಣಿಕರ ಗಮನಕ್ಕೆ; ಆ.24ರಂದು ಈ ರೈಲುಗಳ ಸಂಚಾರ ರದ್ದು
ಈ ನಡುವೆ ಗಗನಯಾತ್ರಿ ಶುಭಾಂಶು ಶುಕ್ಲಾ ಅವರ ಬಾಹ್ಯಾಕಾಶ ಯಾನ, ಪರಿಣಾಮದ ಕುರಿತು ಲೋಕಸಭೆಯಲ್ಲಿ 2 ದಿನಗಳ ಕಾಲ ವಿಶೇಷ ಚರ್ಚೆ ನಡೆಯಲಿದ್ದು, ಈ ವಿಶೇಷ ಚರ್ಚೆಯಲ್ಲಿ ಸರ್ಕಾರದೊಂದಿಗೆ ಸಹಕರಿಸದಿರಲು ವಿರೋಧ ಪಕ್ಷಗಳು ನಿರ್ಧರಿಸಿವೆ. ವಿಶೇಷ ಚರ್ಚೆಯಲ್ಲಿ ಭಾಗವಹಿಸದಿರಲು ಮತ್ತು ಪ್ರತಿಭಟನೆಗಳನ್ನು ಮುಂದುವರಿಸಲು ನಿರ್ಧರಿಸಿದ್ದೇವೆಂದು ವಿಪಕ್ಷಗಳ ನಾಯಕರು ತಿಳಿಸಿದ್ದಾರೆ. ಇದನ್ನೂ ಓದಿ: ಯೆಲ್ಲೋ ಮೆಟ್ರೋ ಸವಾರರಿಗೆ ಗುಡ್‌ನ್ಯೂಸ್ – ಶೀಘ್ರವೇ 15 ನಿಮಿಷಕ್ಕೊಂದು ರೈಲು ಸಂಚಾರ