ನವದೆಹಲಿ: ಮತ ಕಳ್ಳತನ ಮತ್ತು ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ವಿಚಾರದಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ಪ್ರತಿಭಟನೆ ಮುಂದುವರಿದಿದೆ. ಇದರ ಭಾಗವಾಗಿ ಶುಕ್ರವಾರ (ಇಂದು) ಇಂಡಿ ಒಕ್ಕೂಟದ ಸಂಸದರು ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ಜಮಾಯಿಸಿದರು. ಬಳಿಕ ಅಲ್ಲಿಂದ ಮೆರವಣಿಗೆಯಲ್ಲಿ ವಿಜಯ್ ಚೌಕ್ಗೆ ತೆರಳಿ ಧರಣಿ ನಡೆಸಿದರು.
LIVE: Opposition MP’s | Media Byte | New Delhi https://t.co/n3CnAl2Uz7
— Congress (@INCIndia) October 9, 2026
ಇದರ ಮಧ್ಯೆ ನಿಗದಿಯಂತೆ ಇಂದು ರಾತ್ರಿ 8 ಗಂಟೆ ವೇಳೆಗ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ 10 ವಿಪಕ್ಷ ಸಂಸದರು ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾದರು. ಇದೇ ವೇಳೆ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಮನವಿ ಪತ್ರವನ್ನೂ ಸಲ್ಲಿಸಿದರು.
ರಾಷ್ಟ್ರಪತಿ ಭೇಟಿಗೆ 10 ನಾಯಕರ ನಿಯೋಗ
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಲು ರಾಹುಲ್ ಗಾಂಧಿ ಸೇರಿದಂತೆ ಎಲ್ಲಾ 10 ಸಂಸದರು ರಾಷ್ಟ್ರಪತಿ ಭವನಕ್ಕೆ ತೆರಳಿದರು. ನಿಯೋಗದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಶ್ಚಿಮ ಬಂಗಾಳ ಮಾಜಿ ಸಿಎಂ ಮಮತಾ ಬ್ಯಾನರ್ಜಿ, ಎಂ.ಎ ಬೇಬಿ, ಡಿ. ರಾಜಾ, ಸಮಾಜವಾದಿ ಪಕ್ಷದ ಸಂಸದ ರಾಜೀವ್ ರೈ, ಸುಪ್ರಿಯಾ ಸುಳೆ, ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಹಾಗೂ ಆರ್ಜೆಡಿ ಸಂಸದ ಮನೋಜ್ ಝಾ ಸೇರಿದಂತೆ ಪ್ರಮುಖ ನಾಯಕರು ಇದ್ದರು.
गद्दार ज्ञानू को इस्तीफा देना होगा
जेल की रोटी खानी होगी https://t.co/qnbOoaupGH— Congress (@INCIndia) October 9, 2026
ಮತದಾರರ ಪಟ್ಟಿ ಪರಿಷ್ಕರಣೆ ವಿರುದ್ಧ ವಿಪಕ್ಷಗಳ ಆಕ್ರೋಶ
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಸಂದರ್ಭದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲಾಗಿಲ್ಲ ಎಂದು ವಿಪಕ್ಷಗಳು ಆರೋಪಿಸಿವೆ. ಹಲವು ಮತದಾರರ ಹೆಸರುಗಳನ್ನು ಬಲವಂತವಾಗಿ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂಬುದು ವಿಪಕ್ಷಗಳ ಆರೋಪವಾಗಿದೆ.
ಈ ವಿಚಾರವನ್ನು ಮುಂದಿಟ್ಟುಕೊಂಡು ವಿಪಕ್ಷಗಳು ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆ ಹಾಗೂ ಇಡೀ ಪ್ರಕರಣದ ತನಿಖೆಗೆ ನಿರಂತರವಾಗಿ ಒತ್ತಾಯಿಸುತ್ತಿವೆ. ಆದರೆ ವಿಪಕ್ಷಗಳ ಆರೋಪಗಳನ್ನು ಚುನಾವಣಾ ಆಯೋಗ ಹಾಗೂ ಬಿಜೆಪಿ ತಳ್ಳಿಹಾಕಿವೆ.

ರಾಷ್ಟ್ರಪತಿ ಭವನದತ್ತ ತೆರಳಿದ ರಾಹುಲ್; ವಿಜಯ್ ಚೌಕ್ನಲ್ಲಿ ಧರಣಿ
ರಾಷ್ಟ್ರಪತಿ ಭವನದತ್ತ ಸಾಗುವ ರೈಸಿನಾ ಹಿಲ್ಸ್ ಪ್ರದೇಶದಲ್ಲಿ ಭಾರೀ ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನ ನಿಯೋಜಿಸಲಾಗಿತ್ತು. ರಾಹುಲ್ ಗಾಂಧಿ ನೇತೃತ್ವದ 10 ಸಂಸದರು ರಾಷ್ಟ್ರಪತಿಯನ್ನು ಭೇಟಿಯಾಗಲು ರಾಷ್ಟ್ರಪತಿ ಭವನದತ್ತ ತೆರಳಿದರೆ, ಇತರ ವಿಪಕ್ಷ ನಾಯಕರು ಹಾಗೂ ಸಂಸದರು ವಿಜಯ್ ಚೌಕ್ನಲ್ಲಿ ಧರಣಿ ನಡೆಸಿದರು.

