ಬೆಂಗಳೂರು: ಯಾರು ಕೂಡ ಸಭೆ ಬಹಿಷ್ಕರಿಸಿಲ್ಲ. ಯಾರಿಗೂ ಬೇಸರವಿಲ್ಲ ಎಂದು ಶಾಸಕ ಅರವಿಂದ್ ಬೆಲ್ಲದ್ (Aravind Bellad) ಹೇಳಿದ್ದಾರೆ.
ಬಿಜೆಪಿ ಶಾಸಕಾಂಗ ಸಭೆಗೂ ಮುನ್ನ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಯಾರು ಸಭೆ ಬಹಿಷ್ಕರಿಸಿಲ್ಲ. ವೀಕ್ಷಕರು ಎಲ್ಲರ ಅಭಿಪ್ರಾಯ ಪಡೆಯುತ್ತಿದ್ದಾರೆ. ಬೇಸರ ಆಗಿಲ್ಲ ಎಂದರು.
ವೀಕ್ಷಕರು ಒನ್ ಟು ಒನ್ ಅಭಿಪ್ರಾಯ ಪಡೆದುಕೊಂಡಿದ್ದಾರೆ. ಯಾರಿಗೂ ಬೇಸರ ಆಗಿಲ್ಲ, ಬಹಿಷ್ಕಾರ ಮಾಡಿಲ್ಲ. ಉತ್ತರ ಕರ್ನಾಟಕ ಭಾಗದ ಕಡೆ ಹೆಚ್ಚು ಶಾಸಕರಿದ್ದಾರೆ. ಇನ್ನೂ ಏನೂ ನಿರ್ಧಾರ ಆಗಿಲ್ವಲ್ಲ. ಉ.ಕ ಭಾಗಕ್ಕೆ ಪರಿಗಣಿಸಿ ಅಂದಿದ್ದೇವೆ ಎಂದು ಅವರು ತಿಳಿಸಿದರು. ಇದನ್ನೂ ಓದಿ: ಶಾಸಕಾಂಗ ಸಭೆಗೂ ಮುನ್ನ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ- ಸಭೆ ಬಹಿಷ್ಕರಿಸಿದ ಇಬ್ಬರು ಶಾಸಕರು
ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೂ ಮುನ್ನ ರಾಜ್ಯ ಬಿಜೆಪಿಯ ಪ್ರಮುಖ ನಾಯಕರ ಜೊತೆ ಹೈಕಮಾಂಡ್ ವೀಕ್ಷಕರ ಸಭೆ ಕರೆದಿತ್ತು. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಪ್ರಮುಖ ನಾಯಕರ ಜೊತೆ ಚರ್ಚೆ ನಡೆಯುತ್ತಿದೆ. ನಿರ್ಮಲಾ ಸೀತಾರಾಮನ್, ಅಶ್ವತ್ಥ ನಾರಾಯಣ, ಮುನಿರತ್ನ, ಗೋಪಾಲಯ್ಯ, ವಿಜಯೇಂದ್ರ, ಅಶೋಕ್, ಎಸ್ ಆರ್ ವಿಶ್ವನಾಥ್ ಮತ್ತಿತರರು ಸಭೆಯಲ್ಲಿ ಭಾಗಿಯಾಗಿದ್ದಾರೆ.