ರಾಮನಗರ: ಗ್ರೇಟರ್ ಬೆಂಗಳೂರು (Greater Bengaluru) ಯೋಜನೆ ವಿರೋಧಿಸಿ ರಾಮನಗರದಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ (Vatal Nagaraj) ವಿನೂತನ ಪ್ರತಿಭಟನೆ ನಡೆಸಿದ್ದಾರೆ.
ನಗರದ ಐಜೂರು ವೃತ್ತದಲ್ಲಿ ಈಡುಗಾಯಿ ಚಳುವಳಿ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 101 ಈಡುಗಾಯಿ ಒಡೆದು, ಕೂಡಲೇ ಗ್ರೇಟರ್ ಬೆಂಗಳೂರು ಯೋಜನೆ ಕೈಬಿಡುವಂತೆ ಒತ್ತಾಯ ಮಾಡಿದ್ದಾರೆ. ಬಿಬಿಎಂಪಿಯನ್ನು ವಿಭಜನೆ ಮಾಡುವುದು ಸರಿಯಲ್ಲ. ಬೆಂಗಳೂರು ವಿಭಜನೆ ಆದರೆ ಕೆಂಪೇಗೌಡರು ಕಟ್ಟಿದ ಬೆಂಗಳೂರು ಕನ್ನಡಿಗರ ಕೈತಪ್ಪಿ ಹೋಗಲಿದೆ. ಗ್ರೇಟರ್ ಬೆಂಗಳೂರು ಬೇಡವೇ ಬೇಡ ಎಂದು ವಿರೋಧ ವ್ಯಕ್ತಪಡಿಸಿದರು. ಇದನ್ನೂ ಓದಿ: ವಕ್ಫ್ ತಿದ್ದುಪಡಿ ಮಸೂದೆಗೆ ಮುಸ್ಲಿಂ ಮಹಿಳೆಯರ ಬೆಂಬಲ – ‘ಥ್ಯಾಂಕ್ಯು ಮೋದಿ ಜೀ’ ಎಂದು ಕೃತಜ್ಞತೆ
ಮಹಾದಾಯಿ, ಕಳಸ ಬಂಡೂರಿ, ಮೇಕೇದಾಟು ಯೋಜನೆ ಜಾರಿ ಮತ್ತು ಕನ್ನಡಗಿರ ಮೇಲಿನ ದಬ್ಬಾಳಿಕೆ ಬಗ್ಗೆ ಈಗಾಗಲೇ ಕರ್ನಾಟಕ ಬಂದ್ ಮಾಡಲಾಗಿದೆ. ಇನ್ನೂ ಏ.26ರಂದು ಕನ್ನಡಿಗರ ಎಲ್ಲಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯಾದ್ಯಂತ ಈಡುಗಾಯಿ ಒಡೆಯುವ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಬೆಲೆ ಏರಿಕೆ ವಿರುದ್ಧ ಬಿಜೆಪಿ ಏಕಾಂಗಿ ಹೋರಾಟ ಮಾಡೋದು ಸರಿಯಲ್ಲ: ಸುರೇಶ್ ಬಾಬು