Advertisements

ಗೋವಾ ಸರ್ಕಾರದ ಬಗ್ಗೆ ಪ್ರತಿಪಕ್ಷಗಳಿಂದ ವಿವಾದ ಸೃಷ್ಟಿ ಸಲ್ಲದು- ಸಿ.ಟಿ.ರವಿ

ನವದೆಹಲಿ: ಕೋವಿಡ್ ಸಂದರ್ಭದಲ್ಲಿ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ನೇತೃತ್ವದಲ್ಲಿ ಸರ್ಕಾರ ಗೋವಾದಲ್ಲಿ ಉತ್ತಮ ಆಡಳಿತ ನೀಡುತ್ತಿದೆ. ಪ್ರತಿಪಕ್ಷಗಳು ಈ ಬಗ್ಗೆ ವಿವಾದ ಸೃಷ್ಟಿಸುವುದು ಸರಿಯಲ್ಲ ಎಂದು ಬಿಜೆಪಿ ರಾಷ್ಟ್ರೀಯ ಘಟಕದ ಅಧ್ಯಕ್ಷ ಹಾಗೂ ಗೋವಾ ರಾಜ್ಯ ಉಸ್ತುವಾರಿ ಸಿ.ಟಿ.ರವಿ ಹೇಳಿದ್ದಾರೆ.

Advertisements

ಗೋವಾ ಮುಖ್ಯಮಂತ್ರಿ ಆಡಳಿತ ಕುರಿತು ತಾವು ಯಾವುದೇ ಹೇಳಿಕೆ ನೀಡಿಲ್ಲ ಎಂದು ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಸ್ಪಷ್ಟಪಡಿಸಿದ್ದಾರೆ. ಆದರೂ ಪ್ರತಿಪಕ್ಷಗಳು ವಿವಾದ ಸೃಷ್ಟಿಸುತ್ತಿರುವುದು ಸಲ್ಲ ಎಂದು ಸಿ.ಟಿ.ರವಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಟೊಪ್ಪಿ ಹಾಕಲು ಯಾರಿಗೆ ಹುಟ್ಟಿರಬೇಕು- ಸಿದ್ದುಗೆ ಸಿ.ಟಿ.ರವಿ ಪ್ರಶ್ನೆ

Advertisements

ಆಡಳಿತಾರೂಢ ಬಿಜೆಪಿ ನೇತೃತ್ವದ ಮೈತ್ರಿ ಸರ್ಕಾರದ ವಿರುದ್ಧ ಗೋವಾದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರು ಭ್ರಷ್ಟಾಚಾರದ ಗಂಭೀರ ಆರೋಪ ಹೊರಿಸಿದ್ದಾರೆ ಎನ್ನಲಾಗಿತ್ತು. ಈ ಹಿನ್ನೆಲೆಯಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮತ್ತು ಅವರ ಸಂಪುಟ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷಗಳು ಆಗ್ರಹಿಸಿದ್ದವು.

Advertisements
Advertisements
Exit mobile version