ಮಂಗಳೂರು: ರಾಜ್ಯ ಹವಾಮಾನ ಇಲಾಖೆ ಕರಾವಳಿಯಲ್ಲಿ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದ್ದು, ಕರಾವಳಿಯ 3 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಆಗಸ್ಟ್ 29ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಈ ಮೂರು ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
Advertisement
ಸದ್ಯ ಕೆಲವು ಗಂಟೆಗಳಿಂದ ನಿರಂತರವಾಗಿ ಮಂಗಳೂರಿನಲ್ಲಿ ಮಳೆಯಾಗುತ್ತಿದೆ. ಕಳೆದ ಮೂರು ದಿನಗಳು ಕೊಂಚ ಬಿಡುವ ಕೊಟ್ಟಿದ್ದ ಮಳೆರಾಯ ಮತ್ತೆ ಆರ್ಭಟ ಶುರು ಮಾಡಿಕೊಂಡಿದ್ದಾನೆ. ಕಳೆದ ಕೆಲವು ದಿನಗಳ ಹಿಂದೆ ಸುರಿದ ಭಾರೀ ಮಳೆಗೆ ರಾಜ್ಯದ ಹಲವು ಜಿಲ್ಲೆಗಳು ಪ್ರವಾಹ ಪ್ರತಿಸ್ಥಿತಿ ಎದುರಿಸಿತ್ತು. ಈಗ ಮತ್ತೆ ಭಾರೀ ಮಳೆಯಾಗುವ ಮುನ್ಸುಚನೆ ಜನರಲ್ಲಿ ಆತಂಕ ಸೃಷ್ಟಿಸಿದೆ.