ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ಮಳೆ (Rain) ಮುಂದುವರಿದ ಹಿನ್ನೆಲೆ ಶುಕ್ರವಾರ (ಜು.3) ಕರಾವಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ (School Holiday) ಘೋಷಣೆ ಮಾಡಲಾಗಿದೆ.
ಅಂಗನವಾಡಿಯಿಂದ ದ್ವಿತೀಯ ಪಿಯುಸಿವರೆಗಿನ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲಾ ಸರ್ಕಾರಿ, ಖಾಸಗಿ ಅನುದಾನಿತ ಶಾಲಾ ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಿಸಿ ದ.ಕ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ರಾಮಮಂದಿರ ದೇಣಿಗೆ ಲೂಟಿಕೋರರ ಮೇಲೆ ಬುಲ್ಡೋಜರ್ ಅಸ್ತ್ರ ಪ್ರಯೋಗಕ್ಕೆ ಯೋಗಿ ಸರ್ಕಾರದ ಸಿದ್ಧತೆ
ಜಿಲ್ಲಾಡಳಿತದ ಆದೇಶದ ವಿರುದ್ಧವಾಗಿ ತರಗತಿಗಳನ್ನು ನಡೆಸಿದರೆ ಕ್ರಮದ ಎಚ್ಚರಿಕೆಯನ್ನೂ ಜಿಲ್ಲಾಧಿಕಾರಿ ನೀಡಿದ್ದಾರೆ. ತರಗತಿ ನಡೆಸುವುದು ಕಂಡುಬಂದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005ರಡಿ ಕಾನೂನು ಕ್ರಮದ ಎಚ್ಚರಿಕೆ ನೀಡಲಾಗಿದೆ. ಇದನ್ನೂ ಓದಿ: ಶೀಲ ಶಂಕಿಸಿ ಪತಿಯಿಂದ ಪತ್ನಿಯ ಭೀಕರ ಹತ್ಯೆ
