ಬೆಂಗಳೂರು: ಕರ್ನಾಟಕದ (Karnataka) ಅರ್ಧ ಭಾಗದಲ್ಲಿ ಮುಂಗಾರು (Mansoon) ಮಳೆ ಸಕ್ರಿಯಗೊಂಡಿದೆ. ಕರ್ನಾಟಕದ ಕರಾವಳಿ (Karavali) ಭಾಗದಲ್ಲಿ ಮಳೆ ಇನ್ನಷ್ಟು ತೀವ್ರಗೊಂಡಿದ್ದು, ದಕ್ಷಿಣ ಒಳನಾಡಿನ ಕೆಲವೆಡೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (Meteorological Department) ಮಾಹಿತಿ ನೀಡಿದೆ.
ಅರಬ್ಬಿ ಸಮುದ್ರದಲ್ಲಿನ (Arabian Sea) ಹವಾಮಾನ ಬದಲಾವಣೆಗಳಿಂದಾಗಿ ಕರಾವಳಿ ಭಾಗದಲ್ಲಿ ಮುಂಗಾರು ಸುರಿಸುವ ಮೋಡಗಳು ಸಕ್ರಿಯಗೊಂಡಿವೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ. ಹೀಗಾಗಿ ಈ ಮೂರು ಜಿಲ್ಲೆಗಳಿಗೆ ಮುಂದಿನ ಐದು ದಿನ ಆರೆಂಜ್ ಅಲರ್ಟ್ (Orange Alert) ನೀಡಲಾಗಿದೆ. ಕರಾವಳಿ ತೀರದಲ್ಲಿ ಗಾಳಿಯ ವೇಗವು ಪ್ರತಿ ಗಂಟೆಗೆ ಸುಮಾರು 50 ಕಿಲೋ ಮೀಟರ್ ವೇಗದಲ್ಲಿ ಬೀಸಲಿದೆ. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ. ಇದನ್ನೂ ಓದಿ: ವಿದ್ಯುತ್ ಬಿಲ್ ಹಿಂಬಾಕಿ ಇದ್ದರೂ ಸಿಗಲಿದೆ ಗೃಹಜ್ಯೋತಿ ಪ್ರಯೋಜನ
Advertisement
Advertisement
ದಕ್ಷಿಣ ಒಳನಾಡಿನ ಭಾಗದ ಜಿಲ್ಲೆಗಳಲ್ಲೂ ಸಹ ಧಾರಾಕಾರ ಮಳೆ ಮುನ್ಸೂಚನೆ ನೀಡಲಾಗಿದೆ. ಮಲೆನಾಡು ಭಾಗದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಸೇರಿದಂತೆ ತುಮಕೂರು ಜಿಲ್ಲೆಗಳ ಹಲವೆಡೆ ಭಾರೀ ಮಳೆ ಸಂಭವವಿದೆ. ಈ ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡು ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಹಾವೇರಿ, ರಾಯಚೂರು, ಯಾದಗಿರಿ, ವಿಜಯಪುರ, ಬೀದರ್, ಕಲಬುರಗಿ ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಸಾಧಾರಣವಾಗಿ ಮಳೆ ಬರುವ ಮುನ್ಸೂಚನೆ ಇದೆ. ಮೂರು ದಿನಗಳ ನಂತರ ಅಂದರೆ ಜುಲೈ 5 ಮತ್ತು 6ರಂದು ಬೆಳಗಾವಿ, ಧಾರವಾಢ, ಹಾವೇರಿ, ಗದಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ವಿಪಕ್ಷಗಳ ವಿರುದ್ಧ ಸುಳ್ಳು ಪ್ರಚಾರಕ್ಕೆ ಮೋದಿ ಸರ್ಕಾರದ ಆಡಳಿತ ಯಂತ್ರ ಬಳಸಿಕೊಳ್ತಿದ್ದಾರೆ: ರಾಷ್ಟ್ರಪತಿಗೆ ದಿನೇಶ್ ಗುಂಡೂರಾವ್ ಪತ್ರ
Advertisement
Advertisement
ಬೆಂಗಳೂರಿಗೆ (Bengaluru) ಯಾವುದೇ ಅಲರ್ಟ್ ನೀಡಿಲ್ಲ. ಆದರೆ ಕೆಲವೊಮ್ಮೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ಇಂದು ಬಾಂಬ್ ಹಾಕಿದವರ ದೇಶಕ್ಕೆ ನುಗ್ಗಿ ಹೊಡೆಯೋ ಸಾಮರ್ಥ್ಯ ನಮ್ಮಲ್ಲಿದೆ: ಜೋಶಿ
Web Stories