ಬೆಂಗಳೂರು: ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಶಿಫಾರಸಿನಂತೆ ನಿತ್ಯ 5,000 ಕ್ಯೂಸೆಕ್ ಕಾವೇರಿ ನೀರು ಬಿಡಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ಆದೇಶ ಪಾಲಿಸಲು ಸಾಧ್ಯವಾಗದ ಆಜ್ಞೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅಭಿಪ್ರಾಯ ಪಟ್ಟಿದ್ದಾರೆ.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸಿಡಬ್ಲುಆರ್ ಸಿ ಆದೇಶದಂತೆ ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ಮಾಡಿರುವುದು ಇದೊಂದು ಪಾಲನೆ ಮಾಡಲು ಸಾಧ್ಯವಿಲ್ಲದ ಒಂದು ಆಜ್ಞೆ.
ರಾಜ್ಯ ಸರ್ಕಾರ ಕೂಡಲೇ ಸುಪ್ರೀಂ ಕೋರ್ಟ್ ಗೆ ಹೋಗಿ ನೀರನ್ನು ಬಿಡಲು ಸಾಧ್ಯವಿಲ್ಲದ ಕಾರಣವನ್ನು ಮನವರಿಕೆ…
— Basavaraj S Bommai (@BSBommai) September 18, 2023
ಈ ಸಂಬಂಧ ಟ್ವೀಟ್ (Tweet) ಮಾಡಿರುವ ಬೊಮ್ಮಾಯಿ, ಕಾನೂನು ಹೋರಾಟ ಮಾಡುವಂತೆ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಆದೇಶದಂತೆ ತಮಿಳುನಾಡಿಗೆ (Tamil Nadu) ಪ್ರತಿದಿನ 5,000 ಕ್ಯೂಸೆಕ್ ನೀರು ಬಿಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ಮಾಡಿರುವುದು ಪಾಲನೆ ಮಾಡಲು ಸಾಧ್ಯವಿಲ್ಲದ ಒಂದು ಆಜ್ಞೆ ಎಂದಿದ್ದಾರೆ. ಇದನ್ನೂ ಓದಿ: ಕರ್ನಾಟಕ ಸರ್ಕಾರಕ್ಕೆ ಮತ್ತೆ ಕಾವೇರಿ ಶಾಕ್ – ತ.ನಾಡಿಗೆ ಪ್ರತಿದಿನ 5,000 ಕ್ಯೂಸೆಕ್ ನೀರು ಹರಿಸಲು ಆದೇಶ
ರಾಜ್ಯ ಸರ್ಕಾರ ಕೂಡಲೇ ಸುಪ್ರೀಂ ಕೋರ್ಟ್‌ಗೆ ಹೋಗಿ ನೀರನ್ನು ಬಿಡಲು ಸಾಧ್ಯವಿಲ್ಲದ ಕಾರಣವನ್ನು ಮನವರಿಕೆ ಮಾಡಿಕೊಡಬೇಕು. ಈ ಆಜ್ಞೆ ಬರುವ ಮುಂಚೆ ನೀರು ಬಿಡಲು ಪ್ರಾರಂಭ ಮಾಡಿರುವ ರಾಜ್ಯ ಸರ್ಕಾರ ತನ್ನ ಕೈಯನ್ನು ತಾನೇ ಕಟ್ಟಿಕೊಂಡಿದೆ. ಕೂಡಲೇ ನೀರು ನಿಲ್ಲಿಸಿ ಸುಪ್ರೀಂ ಕೋರ್ಟ್‌ನಲ್ಲಿ (Supreme Court) ರಾಜ್ಯದ ಜನತೆಗೆ ನ್ಯಾಯ ಒದಗಿಸಲು ಕಾನೂನಾತ್ಮಕ ಹೋರಾಟ ಮಾಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು. ಇದನ್ನೂ ಓದಿ: ಪ್ರಜ್ವಲ್ ರೇವಣ್ಣಗೆ ರಿಲೀಫ್ – ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಮಧ್ಯಂತರ ತಡೆ
Web Stories