ಧಾರ್ಮಿಕ ಕಟ್ಟುಪಾಡು ಮೀರಿ ಅಂಗಾಂಗ ದಾನ ಮಾಡಿದ ಮುಸ್ಲಿಂ ಕುಟುಂಬ- ದಿನೇಶ್ ಗುಂಡೂರಾವ್ ಮೆಚ್ಚುಗೆ

Public TV
1 Min Read
Dinesh Gundu Rao 2

ಬೆಂಗಳೂರು: ಧಾರ್ಮಿಕ ಕಟ್ಟುಪಾಡುಗಳನ್ನು ಮೀರಿ ಅಂಗಾಂಗ ದಾನ ಮಾಡಿದ ಮುಸ್ಲಿಂ ಕುಟುಂಬದ ಕಾರ್ಯವನ್ನ ಆರೋಗ್ಯ ಸಚಿವ (Health Minister) ದಿನೇಶ್ ಗುಂಡೂರಾವ್ (Dinesh Gundu Rao) ಶ್ಲಾಘಿಸಿದ್ದಾರೆ. ಅಲ್ಲದೇ ಅಂಗಾಂಗ ದಾನ (Organ Donation) ಮಾಡಿದ್ದ ಫಾರ್ದಿನ್ ಖಾನ್ ಅವರ ನಿವಾಸಕ್ಕೆ ತೆರಳಿ ಕುಟುಂಬಕ್ಕೆ ಸಾಂತ್ವನ ಹೇಳಿ ಸನ್ಮಾನಿಸಿದ್ದಾರೆ.

Dinesh Gundu Rao 1

ಅಂಗಾಂಗ ದಾನ ನಿಜವಾಗಿಯೂ ಆತ್ಮಚೈತನ್ಯ ನೀಡುವ ಕಾರ್ಯವಾಗಿದೆ. ಮುಸ್ಲಿಂ ಸಮುದಾಯದಲ್ಲಿ ಅಂಗಾಂಗ ದಾನಕ್ಕೆ ಧಾರ್ಮಿಕ ಕಟ್ಟುಪಾಡುಗಳಿವೆ. ಆದರೆ ಫಾರ್ದಿನ್ ಕುಟುಂಬ ಧಾರ್ಮಿಕ ಕಟ್ಟುಪಾಡುಗಳನ್ನು ಮೀರಿ ಅಂಗಾಂಗಳನ್ನು ದಾನ ಮಾಡುವ ಮೂಲಕ 6 ಜನರಿಗೆ ಮರುಜೀವ ನೀಡಿದ್ದಾರೆ ಎಂದು ಅವರು ಪ್ರಶಂಶಿಸಿದ್ದಾರೆ. ಇದನ್ನೂ ಓದಿ: ಹೆಲ್ಪ್‌ಲೈನ್ ಹೆಸರಲ್ಲಿ ಒಬ್ಬರಿಗೆ 4 ಲಕ್ಷ ರೂ. ವೇತನ- ತನಿಖೆಗೆ ಆದೇಶಿಸಿದ ಸಚಿವ ಜಮೀರ್

22 ವರ್ಷದ ಫಾರ್ದಿನ್ ಖಾನ್ ಜೂ.4 ರಂದು ಮದುವೆ ಸಮಾರಂಭ ಮುಗಿಸಿ ವಾಪಸ್ ಬರುತ್ತಿದ್ದಾಗ ತುಮಕೂರಿನ (Tumkur) ಶಿರಾ ಬಳಿ ಅಪಘಾತಕ್ಕೀಡಾಗಿದ್ದರು. ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗಿರಲಿಲ್ಲ. ಬಳಿಕ ಜೂ.7ರ ಬೆಳಗ್ಗೆ ಫಾರ್ದಿನ್ ಖಾನ್ ಮೆದುಳು ನಿಷ್ಕ್ರೀಯಗೊಂಡಿರುವುದಾಗಿ ಬೆಂಗಳೂರಿನ ಸ್ಪರ್ಶ್ ಆಸ್ಪತ್ರೆಯ (SPARSH Hospital) ವೈದ್ಯರು ಘೋಷಿಸಿದ್ದರು. ಆದರೆ ಉಳಿದೆಲ್ಲಾ ಅಂಗಾಂಗಗಳು ವೆಂಟಿಲೇಟರ್ ಸಹಾಯದಿಂದ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದ್ದವು.

ಈ ದುಃಖದ ಸ್ಥಿತಿಯಲ್ಲೂ ಫಾರ್ದಿನ್ ಕುಟುಂಬದವರು ಆತನ ಅಂಗಾಂಗಳನ್ನು ದಾನ ಮಾಡಲು ನಿರ್ಧರಿಸಿದರು. ಹೃದಯವನ್ನು ನಾರಾಯಣ ಹೃದಯಾಲಯದಲ್ಲಿ ದಾಖಲಾಗಿದ್ದ 57 ವರ್ಷದ ವ್ಯಕ್ತಿಗೆ ಕಸಿ ಮಾಡಲಾಗಿದೆ. ಪಿತ್ತಜನಕಾಂಗವನ್ನು ಯಶವಂತಪುರ ಸ್ಪರ್ಶ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ 42 ವರ್ಷದ ರೋಗಿಗೆ ಕಸಿ ಮಾಡಲಾಗಿದೆ. ಎಡ ಮೂತ್ರಪಿಂಡ ಮತ್ತು ಫ್ಯಾಂಕ್ರಿಯಾಸ್‍ನ್ನು ಅಪೆÇೀಲೋ ಆಸ್ಪತ್ರೆಯಲ್ಲಿ ದಾಖಲಾಗಿದ್ದ ರೋಗಿಗೆ ಬಹು ಅಂಗಾಂಗ ಕಸಿ ಮಾಡಲಾಗಿದೆ. ಬಲ ಮೂತ್ರಪಿಂಡವನ್ನು ಸ್ಪರ್ಶ್ ಆಸ್ಪತ್ರೆಯ ರೋಗಿಗೆ ಕಸಿ ಮಾಡಲಾಗಿದೆ. ಕಣ್ಣಿನ ಕಾರ್ನಿಯಾವನ್ನು ನಾರಾಯಣ ನೇತ್ರಾಲಯಕ್ಕೆ ನೀಡಲಾಗಿದೆ. ಇದನ್ನೂ ಓದಿ: ದೆಹಲಿಯಲ್ಲಿ ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಸುಪ್ರೀಂ ತಡೆ

Share This Article