ಬೆಂಗಳೂರು: ನಗರದ ಎಂ.ಜಿ. ರಸ್ತೆ ಹಾಗೂ ಬ್ರಿಗೇಡ್ ರಸ್ತೆಯಲ್ಲಿ ಹೊಸ ವರ್ಷ ಆಚರಣೆ ಮಾಡುವುದಕ್ಕೆ ಅವಕಾಶ ನೀಡಬಾರದು ಎಂದು ನಗರ ಪೊಲೀಸ್ ಆಯಕ್ತರಿಗೆ ಹಿಂದೂ ಜಾಗರಣ ವೇದಿಕೆ ದೂರು ಕೊಟ್ಟಿದ್ದಾರೆ.
ಎಂ.ಜಿ.ರಸ್ತೆ ಹಾಗೂ ಬ್ರಿಗೇಡ್ ರಸ್ತೆಯಲ್ಲಿ ಹೊಸ ವರ್ಷ ಆಚರಣೆ ವೇಳೆ ಅಹಿತಕರ ಘಟನೆಗಳು ನಡೆಯುವುದಕ್ಕೆ ಅವಕಾಶ ಮಾಡಿಕೊಟ್ಟಂತಾಗುತ್ತೆ. ಅಹಿತಕರ ಘಟನೆಗಳು ನಡೆದರೆ ರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರಿನ ಮಾನ ಹರಾಜ್ ಆಗುತ್ತದೆ. ಹಾಗಾಗಿ ಹೊಸ ವರ್ಷ ಆಚರಣೆಗೆ ಅವಕಾಶ ನೀಡದಂತೆ ಮನವಿ ಮಾಡಿಕೊಂಡಿದ್ದಾರೆ.
Advertisement
ಇದರ ಜೊತೆಗೆ ಹೊಸ ವರ್ಷದ ಆಚರಣೆ ಸಂದರ್ಭದಲ್ಲಿ ಎರಡು ರಸ್ತೆಯಲ್ಲಿ ಮದ್ಯ ಮಾರಾಟವನ್ನು ನಿಷೇಧ ಮಾಡುವಂತೆ ಒತ್ತಾಯಿಸಿದ್ದಾರೆ. ಹೊಸ ವರ್ಷ ಎಂದು ಯುವಕರು ಕುಡಿದ ಮತ್ತಿನಲ್ಲಿ ಯುವತಿಯರ ಜೊತೆ ಅಸಭ್ಯವಾಗಿ ವರ್ತಿಸಿದ್ದ ಘಟನೆ ಈ ಹಿಂದೆ ನಡೆದಿದೆ. ಹಾಗಾಗಿ ಮದ್ಯ ಮಾರಾಟ ನಿಷೇಧಿಸಬೇಕು ಹಾಗೂ ಹೊಸ ವರ್ಷ ಆಚರಣೆಗೆ ಅವಕಾಶ ನೀಡಬಾರದು ಎಂದು ಹಿಂದೂ ಜಾಗರಣ ವೇದಿಕೆ ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv