ರಾಮನಗರ: ಬೆಂಗಳೂರು ದಕ್ಷಿಣ (Bengaluru South) ಜಿಲ್ಲೆಯಾಗಿ ರಾಮನಗರ (Ramanagara) ಜಿಲ್ಲೆಗೆ ಮರುನಾಮಕರಣ ಮಾಡಿದ ವಿಚಾರಕ್ಕೆ ಕನ್ನಡಪರ (Pro Kannada Organizations) ಹಾಗೂ ರೈತಸಂಘಟನೆಗಳು (Farmer’s Association ವಿರೋಧ ವ್ಯಕ್ತಪಡಿಸಿವೆ.
ಸೋಮವಾರ ಹಲವು ಸಂಘಟನೆಗಳ ಮುಖಂಡರು ಸಭೆ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲು ನಿರ್ಧಾರ ಮಾಡಿದ್ದಾರೆ. ಮರುನಾಮಕರಣ ಅಂಗೀಕಾರ ಮಾಡದಂತೆ ಮನವಿ ಸಲ್ಲಿಸಿ ಬಳಿಕ ಬೃಹತ್ ಹೋರಾಟ ನಡೆಸಲು ತೀರ್ಮಾನ ಮಾಡಲಾಗಿದೆ ಎಂದು ಮುಖಂಡರು ತಿಳಿಸಿದ್ದಾರೆ. ಇದನ್ನೂ ಓದಿ: Delhi Coaching Centre Flooded: ಐಎಎಸ್ ಆಕಾಂಕ್ಷಿಗಳ ಸಾವು ಪ್ರಕರಣ – ಲೋಕಸಭೆಯಲ್ಲಿ ಚರ್ಚೆ
Advertisement
Advertisement
ಚನ್ನಪಟ್ಟಣ ಉಪಚುನಾವಣೆ ದೃಷ್ಟಿಯಿಂದ ಹೆಸರು ಬದಲಾವಣೆ ಮಾಡಲಾಗುತ್ತಿದೆ. ರಾಜಕೀಯ ದುರುದ್ದೇಶಕ್ಕೆ ಡಿಸಿಎಂ ಡಿಕೆಶಿ ಮರುನಾಮಕರಣ ಮಾಡುತ್ತಿದ್ದಾರೆ. ಹೆಸರು ಬದಲಾವಣೆ ಬಗ್ಗೆ ಯಾವುದೇ ಸಂಘಟನೆಗಳ ಅಭಿಪ್ರಾಯ ಪಡೆದಿಲ್ಲ. ಕೇವಲ ಡಿಸಿಎಂ ಹಾಗೂ ಹಿಂಬಾಲಕರ ಆಸ್ತಿ ಮೌಲ್ಯ ಹೆಚ್ಚಿಸಲು ಈ ನಾಟಕ ಆಡುತ್ತಿದ್ದಾರೆ ಎಂದು ಸಂಘಟನೆಯ ಪ್ರಮುಖರು ಕಿಡಿಕಾರಿದ್ದಾರೆ. ಇದನ್ನೂ ಓದಿ: Valmiki Corporation Scam | ಹೈದರಾಬಾದ್‌ನಲ್ಲೇ ಬೀಡುಬಿಟ್ಟ ಎಸ್‌ಐಟಿ – ಒಟ್ಟು 16 ಕೆಜಿ ಚಿನ್ನ ಜಪ್ತಿ
Advertisement
Advertisement
ಹೆಸರು ಬದಲಾವಣೆಯಿಂದ ರೈತರಿಗೆ ಯಾವುದೇ ಅನುಕೂಲ ಆಗಲ್ಲ. ರೈತರ ಜಮೀನುಗಳನ್ನು ಕಾರ್ಪೋರೆಟ್ ಸಂಸ್ಥೆಗಳಿಗೆ ಮಾರಾಟ ಮಾಡಲು ಈ ರೀತಿ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ರಾಮನಗರ ಹೆಸರು ಬದಲಾವಣೆ ಮಾಡಲು ಬಿಡಲ್ಲ. ಮುಂದಿನ ದಿನಗಳಲ್ಲಿ ಬೃಹತ್ ಹೋರಾಟ ಮಾಡುತ್ತೇವೆ ಎಂದು ಸರ್ಕಾರಕ್ಕೆ ಕನ್ನಡಪರ ಹಾಗೂ ರೈತ ಸಂಘಟನೆಗಳು ಎಚ್ಚರಿಕೆ ನೀಡಿವೆ. ಇದನ್ನೂ ಓದಿ: ನಮ್ಮದು ಯಾರಿಗೂ ಕೆಟ್ಟದ್ದು ಬಯಸುವ ವಂಶವಲ್ಲ: ಡಿ.ಕೆ ಸುರೇಶ್