ಉಡುಪಿ: ಕೇಂದ್ರ ಸರ್ಕಾರದ ಮಾಜಿ ಸಚಿವ ರಾಜ್ಯಸಭಾ ಸದಸ್ಯ ಆಸ್ಕರ್ ಫರ್ನಾಂಡಿಸ್ ವಿಧಿವಶರಾಗಿದ್ದಾರೆ. ಆಸ್ಕರ್ ಫರ್ನಾಂಡಿಸ್ ಅವರ ಮೃತದೇಹವನ್ನು ಉಡುಪಿ ನಗರದ ಮದರ್ ಆಫ್ ಸಾರೋಸ್ ಚರ್ಚ್‍ನಲ್ಲಿ ಇರಿಸಿ ಪ್ರಾರ್ಥನೆ ಸಲ್ಲಿಸಲಾಗುತ್ತದೆ.
Advertisement
ಮಂಗಳವಾರ ಮುಂಜಾನೆ 9 ಗಂಟೆ ಸುಮಾರಿಗೆ ಕರೆತರಲಾಗುತ್ತದೆ. ಚರ್ಚ್‍ನಲ್ಲಿ ಧಾರ್ಮಿಕ ವಿಧಿ-ವಿಧಾನಗಳನ್ನು ಧರ್ಮಗುರುಗಳು ನೆರವೇರಿಸಲಿದ್ದಾರೆ. ಸುಮಾರು ಒಂದು ಗಂಟೆಗಳ ಕಾಲ ಪ್ರಾರ್ಥನೆ ನೆರವೇರಲಿದೆ.
Advertisement
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವರಾದ ಆಸ್ಕರ್ ಫರ್ನಾಂಡೀಸ್ ಅವರು ವಿಧಿವಶರಾಗಿದ್ದು, ಅವರ ಅಗಲುವಿಕೆ ಅತೀವ ದುಃಖ ತಂದಿದೆ.
ಅವರ ಕುಟುಂಬಕ್ಕೆ ಅಗಲುವಿಕೆಯ ನೋವು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/upwssehelS
— Nalinkumar Kateel (@nalinkateel) September 13, 2021
Advertisement
ಉಡುಪಿ ಧರ್ಮಪ್ರಾಂತ್ಯದ ಬಿಷಪ್ ಜೆರಾಲ್ಡ್ ಐಸಾಕ್ ಲೋಬೋ ಈ ಸಂದರ್ಭದಲ್ಲಿ ಉಪಸ್ಥಿತರಿರುತ್ತಾರೆ. ಚರ್ಚ್ ಫಾದರ್ ಚಾಲ್ರ್ಸ್ ಮಿನೇಜಸ್ ಧಾರ್ಮಿಕ ವಿಧಿ-ವಿಧಾನಗಳನ್ನು ನಡೆಸಿಕೊಡುತ್ತಾರೆ. ಜಿಲ್ಲೆಯ ಕೆಲ ಗಣ್ಯರು ಇದೇ ಸಂದರ್ಭದಲ್ಲಿ ಆಸ್ಕರ್ ಫರ್ನಾಂಡಿಸ್ ಅವರ ಅಂತಿಮ ದರ್ಶನ ಮಾಡಲಿದ್ದಾರೆ. ಇದನ್ನೂ ಓದಿ: ಆಸ್ಕರ್ ಫರ್ನಾಂಡಿಸ್ ಅವರ ನಿಧನಕ್ಕೆ ಗಣ್ಯರ ಸಂತಾಪ
Advertisement
ಬೆಳಗ್ಗೆ 11 ಗಂಟೆ ಸುಮಾರಿಗೆ ನಗರದ ಬ್ರಹ್ಮಗಿರಿಯಲ್ಲಿರುವ ಕಾಂಗ್ರೆಸ್ ಭವನಕ್ಕೆ ಆಸ್ಕರ್ ಫರ್ನಾಂಡಿಸ್ ಮೃತದೇಹವನ್ನು ರವಾನೆ ಮಾಡಲಾಗುತ್ತದೆ. ಜಿಲ್ಲೆಯ ಹಿರಿಯ ನಾಯಕರು ಕಾರ್ಯಕರ್ತರು ಆಸ್ಕರ್ ಫರ್ನಾಂಡಿಸ್ ಹಿತೈಷಿಗಳು ಆಪ್ತರು ಬಂದು ದರ್ಶನ ಮಾಡುವ ವ್ಯವಸ್ಥೆಯನ್ನು. ಮಧ್ಯಾಹ್ನ 1.30ರವರೆಗೆ ಅಂತಿಮ ದರ್ಶನ ವ್ಯವಸ್ಥೆ ಇದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿ ಮಾಹಿತಿ ನೀಡಿದೆ.