ಹೈದರಾಬಾದ್: ತೆಲಂಗಾಣದ ಹೈದರಾಬಾದ್‍ನಲ್ಲಿರುವ ಉಸ್ಮಾನಿಯಾ ವಿಶ್ವವಿದ್ಯಾನಿಲಯ ಕ್ಯಾಂಪಸ್‍ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರವೇಶಕ್ಕೆ ವಿಶ್ವವಿದ್ಯಾನಿಲಯ ಆಡಳಿತ ಅನುಮತಿ ನೀಡದ್ದಕ್ಕೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
ಮೇ 6 ಮತ್ತು 7 ರಂದು ತೆಲಂಗಾಣಕ್ಕೆ ಭೇಟಿ ನೀಡಲಿರುವ ರಾಹುಲ್ ಗಾಂಧಿ ಅವರು ಇದೇ ವೇಳೆ ಉಸ್ಮಾನಿಯಾ ವಿಶ್ವವಿದ್ಯಾನಿಲಯದ ಕ್ಯಾಂಪಸ್‍ನಲ್ಲಿ ‘ರಾಜಕೀಯೇತರ’ ಸಭೆಯನ್ನು ನಡೆಸಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು, ಆದರೆ ಅದನ್ನು ವಿವಿ ನಿರಾಕರಿಸಿದೆ. ಇದನ್ನೂ ಓದಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತ್ತೆ ಎಂಇಎಸ್ ಪುಂಡಾಟ
Advertisement
Advertisement
ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ನೇತೃತ್ವದ ರಾಜ್ಯ ಸರ್ಕಾರವು ರಾಹುಲ್ ಗಾಂಧಿ ಭೇಟಿ ನೀಡುವುದನ್ನು ತಡೆಯುವಂತೆ ಸಂಸ್ಥೆಗೆ ಒತ್ತಾಯಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಕೆಲವು ವಿದ್ಯಾರ್ಥಿಗಳು ಈ ಕುರಿತಂತೆ ತೆಲಂಗಾಣ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದಾರೆ. ರಾಹುಲ್ ಗಾಂಧಿ ಅವರ ಭೇಟಿಗೆ ಅವಕಾಶ ನೀಡುವಂತೆ ವಿಶ್ವವಿದ್ಯಾಲಯಕ್ಕೆ ನಿರ್ದೇಶನ ನೀಡಬೇಕೆಂದು ಒತ್ತಾಯಿಸಿದ್ದಾರೆ. ಮತ್ತೆ ಕೆಲವರು ಕ್ಯಾಂಪಸ್‍ನ ಹೊರಗೆ ಪ್ರತಿಭಟನೆ ನಡೆಸಿದ್ದಾರೆ. ಇದನ್ನೂ ಓದಿ: ಶಾಲೆಗಳಲ್ಲಿ ವೇದ, ರಾಮಾಯಣ, ಗೀತೆಗಳನ್ನು ಕಲಿಸಬೇಕು: ಧನ್ ಸಿಂಗ್ ರಾವತ್
Advertisement
ಈ ಕುರಿತಂತೆ ಮಾಧ್ಯಮದವರೊಂದಿಗೆ ಮಾತನಾಡಿದ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (ಎನ್‍ಎಸ್‍ಯುಐ) ಸದಸ್ಯರೊಬ್ಬರು, ಮೇ 7 ರಂದು ಉಸ್ಮಾನಿಯಾ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಮಾತನಾಡಲು ರಾಹುಲ್ ಗಾಂಧಿ ಅವರು ನಿರ್ಧರಿಸಿದ್ದರು. ಆದ್ದರಿಂದ ನಾವು (ಎನ್‍ಎಸ್‍ಯುಐ) ಉಸ್ಮಾನಿಯಾ ವಿಶ್ವವಿದ್ಯಾಲಯದ ಉಪಕುಲಪತಿಗಳಿಗೆ ರಾಹುಲ್ ಗಾಂಧಿ ಅವರಿಗೆ ನಮ್ಮನ್ನು ಭೇಟಿ ಮಾಡಲು ಅವಕಾಶ ನೀಡುವಂತೆ ಕೇಳಿಕೊಳ್ಳಲು ಬಂದಿದ್ದೇವೆ. ಆದರೆ ಆಡಳಿತ ಮಂಡಳಿಯೂ ಅನುಮತಿ ನೀಡುತ್ತಿಲ್ಲ. ಏಕೆಂದರೆ ತೆಲಂಗಾಣ ಸರ್ಕಾರವು ರಾಹುಲ್ ಭೇಟಿಯನ್ನು ತಡೆಯುವಂತೆ ಆದೇಶಿಸಿದೆ ಎಂದು ಆರೋಪಿಸಿದ್ದಾರೆ.
Advertisement
ಇದೀಗ ಪ್ರತಿಭಟನಾ ನಿರತ ಎನ್‍ಎಸ್‍ಯುಐ ಸದಸ್ಯರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಸಾರ್ವಜನಿಕ ನೌಕರನ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: ಶಾಲೆಗಳಲ್ಲಿ ವೇದ, ರಾಮಾಯಣ, ಗೀತೆಗಳನ್ನು ಕಲಿಸಬೇಕು: ಧನ್ ಸಿಂಗ್ ರಾವತ್