ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳ (Medical Course) ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆಯಲ್ಲಿ ಪಾಲ್ಗೊಳ್ಳ ಬಯಸುವ ಅಭ್ಯರ್ಥಿಗಳು ಫೆ.18 ಮತ್ತು 19ರಂದು ಇಲ್ಲಿನ ಕೆಇಎ ಕಚೇರಿಗೆ ಮೂಲ ದಾಖಲೆಗಳನ್ನು ಸಲ್ಲಿಸಬೇಕು ಎಂದು ಕೆಇಎ ಸೋಮವಾರ ಪ್ರಕಟಣೆಯಲ್ಲಿ ತಿಳಿಸಿದೆ.
ಈಗಾಗಲೇ ದಾಖಲೆಗಳನ್ನು ಪರಿಶೀಲನೆಗೆ ಒಳಪಡಿಸಿ ವೆರಿಫಿಕೇಷನ್ ಸ್ಲಿಪ್ ಹೊಂದಿರುವ ಅಭ್ಯರ್ಥಿಗಳು ಈ ಅವಕಾಶ ಬಳಸಿಕೊಳ್ಳಬಹುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಅವರು ಹೇಳಿದ್ದಾರೆ. ಇದನ್ನೂ ಓದಿ: ಗ್ಯಾರಂಟಿ ಕೊಡಕ್ಕಾಗ್ತಿಲ್ಲ – ರಾಜ್ಯ ಸರ್ಕಾರದ ಖಜಾನೆ ಸಂಪೂರ್ಣ ಖಾಲಿ: ಎನ್.ರವಿಕುಮಾರ್ ಆರೋಪ
ಈ ಸುತ್ತಿನ ಸೀಟು ಹಂಚಿಕೆಯ ವೇಳಾಪಟ್ಟಿ ಹಾಗೂ ಮಾರ್ಗಸೂಚಿಯನ್ನು ಶೀಘ್ರವೇ ಪ್ರಕಟಿಸಲಾಗುವುದು ಎಂದೂ ಹೇಳಲಾಗಿದೆ. ಇದನ್ನೂ ಓದಿ: ಬೆಮುಲ್‌ನಿಂದ ಬೆಳಗಾವಿ ರೈತರಿಗೆ ಗುಡ್‌ನ್ಯೂಸ್ – ಹಸು, ಎಮ್ಮೆ ಹಾಲಿನ ಪ್ರೋತ್ಸಾಹ ಧನ ಹೆಚ್ಚಳ