ಇಸ್ಲಾಮಾಬಾದ್: 2022ರ ಟಿ20 ವಿಶ್ವಕಪ್‍ನಲ್ಲಿ ಈಗಾಗಲೇ ಮೊದಲ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ಎದುರುಬದುರಾಗಲಿದೆ. ಇದೀಗ ಈ ಬಗ್ಗೆ ಮಾಜಿ ಕ್ರಿಕೆಟಿಗರು ಮಾತನಾಡಲಾರಂಭಿಸಿದ್ದಾರೆ. ಪಾಕಿಸ್ತಾನ ತಂಡ ಭಾರತದ ಆ ಇಬ್ಬರು ಆಟಗಾರರನ್ನು ಹೊರತು ಪಡಿಸಿದರೆ ಇತರ ಆಟಗಾರರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ ಎಂದು ಪಾಕಿಸ್ತಾನದ ಮಾಜಿ ಆಟಗಾರ ಮೊಹಮ್ಮದ್ ಹಫೀಜ್ ಹೇಳಿಕೆ ನೀಡಿದ್ದಾರೆ.
Advertisement
ಆಸ್ಟ್ರೇಲಿಯಾದಲ್ಲಿ ನಡೆಯಲಿರುವ 2022ರ ಟಿ20 ವಿಶ್ವಕಪ್‍ನಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಿನ ಪಂದ್ಯಾಟದ ವೇಳಾ ಪಟ್ಟಿಬಿಡುಗಡೆಯಾಗಿದೆ. ಈ ಬಗ್ಗೆ ಮಾಧ್ಯಮವೊಂದರ ಪ್ರಶ್ನೆಗೆ ಉತ್ತರಿಸಿದ ಹಫೀಜ್, ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯಾಟದಲ್ಲಿ ಭಾರತದ ತಂಡದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾರನ್ನು ಹೊರತು ಪಡಿಸಿದರೆ ಭಾರತ ತಂಡದಲ್ಲಿರುವ ಇತರ ಆಟಗಾರರು ಆ ಒತ್ತಡವನ್ನು ನಿಭಾಯಿಸುತ್ತಾರೆ ಎಂಬ ನಂಬಿಕೆ ಇಲ್ಲ. ಆದರೆ ಇವರಿಬ್ಬರು ಮಾತ್ರ ಅಪಾಯಕಾರಿ ಆಟಗಾರರು ಹಾಗಾಗಿ ಪಾಕಿಸ್ತಾನ ಈ ಇಬ್ಬರ ಬಗ್ಗೆ ಎಚ್ಚರಿಕೆಯ ನಡೆ ಇಡಬೇಕು ಎಂದಿದ್ದಾರೆ. ಇದನ್ನೂ ಓದಿ: 2022ರ ಟಿ20 ವಿಶ್ವಕಪ್ ವೇಳಾಪಟ್ಟಿ ಬಿಡುಗಡೆ – ಭಾರತಕ್ಕೆ ಮೊದಲ ಎದುರಾಳಿ ಪಾಕ್
Advertisement
Advertisement
ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಪಂದ್ಯ ನಡೆದಾಗ ಹೆಚ್ಚಿನ ಒತ್ತಡ ಇರುತ್ತದೆ. ನಾನು ಸಾಕಷ್ಟು ಬಾರಿ ಆಡಿದ್ದೇನೆ ದುಬೈನಲ್ಲಿ 2021ರ ಟಿ20 ವಿಶ್ವಕಪ್‍ನಲ್ಲಿ ನಮ್ಮ ತಂಡ 10 ವಿಕೆಟ್‍ಗಳಿಂದ ಗೆದ್ದಿರುವುದು ಅವಿಸ್ಮರಣೀಯ. ಭಾರತ ಸೂಪರ್-12 ಹಂತದಲ್ಲಿ ಸೋತರ, ನಾವು ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತೆವು ಎಂದರು. ಇದನ್ನೂ ಓದಿ: ಅಮೆರಿಕದ ನ್ಯಾಷನಲ್ ಕ್ರಿಕೆಟ್ ಟೀಂನಲ್ಲಿ ಕಾಫಿನಾಡ ಪ್ರತಿಭೆ ನಾಸ್ತೋಶ್ ಕೆಂಜಿಗೆ
Advertisement