ಧಾರವಾಡ: ಚುನಾವಣಾ ಸಮಯದಲ್ಲಿ ನಾವು ಏನು ಭರವಸೆಗಳನ್ನು ಕೊಟ್ಟಿದ್ದೆವೋ ಅವುಗಳನ್ನು ಈಡೇರಿಸುವುದೇ ನಮ್ಮ ಗುರಿ. ಕೊಟ್ಟ ಮಾತುಗಳನ್ನು ನಾವು ಕಾರ್ಯರೂಪಕ್ಕೆ ತರುತ್ತೇವೆ ಎಂದು ಸಚಿವ ಸಂತೋಷ ಲಾಡ್ (Santhosh Lad) ಹೇಳಿಕೆ ನೀಡಿದ್ದಾರೆ.
ಧಾರವಾಡದ ಮುರುಘಾಮಠಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಕಾಂಗ್ರೆಸ್‌ಗೆ (Congress) ಅಧಿಕಾರದ ಅಮಲು ಏರಿದೆ ಎಂಬ ಬಿಜೆಪಿ (BJP) ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು. ಮೊನ್ನೆಯಷ್ಟೇ ನಾವು ಅಧಿಕಾರಕ್ಕೆ ಬಂದಿದ್ದೇವೆ. ಒಟ್ಟಾರೆ ನಮ್ಮ ಉದ್ದೇಶ ಸರ್ಕಾರದ ಯೋಜನೆಗಳನ್ನು ಜಾರಿಗೆ ತರುವುದಾಗಿದೆ. ವಿಶೇಷವಾಗಿ ನಮ್ಮ ಗಮನ ಆ ಕಡೆ ಇರುತ್ತದೆ ಎಂದರು. ಇದನ್ನೂ ಓದಿ: ಕಂಡೀಷನ್‌ಗಳ ಮೂಲಕ ಗ್ಯಾರಂಟಿಗಳು ಜನರಿಗೆ ತಲುಪದಂತೆ ಕಾಂಗ್ರೆಸ್ ಷಡ್ಯಂತ್ರ ಮಾಡಿದೆ: ಪ್ರಹ್ಲಾದ್ ಜೋಶಿ
Advertisement
Advertisement
ಕರ್ನಾಟಕದಲ್ಲಿ ಅತೀ ಶೀಘ್ರದಲ್ಲೇ ತುರ್ತು ಪರಿಸ್ಥಿತಿ ಬರುತ್ತದೆ ಬರುತ್ತದೆ ಎಂಬ ಮಾಜಿ ಸಿಎಂ ಬೊಮ್ಮಾಯಿ (Basavaraj Bommai) ಹೇಳಿಕೆಗೆ ಪ್ರತಿಕ್ರಿಯಿಸಿ, ಅವರು ಯಾವ ದೃಷ್ಟಿಯಿಂದ ಹಾಗೆ ಹೇಳಿದ್ದಾರೋ ಗೊತ್ತಿಲ್ಲ. ಮುಂಬರುವ ದಿನಗಳಲ್ಲಿ ಅದಕ್ಕೆ ಉತ್ತರ ಸಿಗುತ್ತದೆ. ಸುಮ್ಮನೆ ಅವರೊಂದು ಹೇಳುವುದು ನಾವೊಂದು ಹೇಳುವುದು ಬೇಡ. ಬೊಮ್ಮಾಯಿ ಅವರು ಬಡತನ ಹಾಗೂ ಅಭಿವೃದ್ಧಿ ಬಗ್ಗೆ ಮಾತನಾಡುವುದು ಒಳ್ಳೆಯದು ಎಂದು ಹೇಳಿದರು. ಇದನ್ನೂ ಓದಿ: ಅಖಂಡ ಬೆಳಗಾವಿ ಜಿಲ್ಲಾ ವಿಭಜನೆ ಆಗಬೇಕು: ಲಕ್ಷ್ಮಿ ಹೆಬ್ಬಾಳ್ಕರ್
Advertisement
ರಾಜ್ಯದಲ್ಲಿ ನಕಲಿ ಜಾಬ್ ಕಾರ್ಡ್‌ಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಕಲಿ ಜಾಬ್ ಕಾರ್ಡ್ ಇರುವ ಬಗ್ಗೆ ಮಾಹಿತಿ ಬೇಕು. ನಕಲಿ ಜಾಬ್ ಕಾರ್ಡ್‌ಗೆ ಕೆಲವು ಮಾನದಂಡ ಹಾಕಿದ್ದೇವೆ. ನಕಲಿ ಎಂದು ಗೊತ್ತಾದರೆ ಅದನ್ನು ತೆಗೆಯುತ್ತೇವೆ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: IAS ವರ್ಸಸ್ IPS: ರೂಪಾ ಮೌದ್ಗಿಲ್‌ಗೆ ಜಾಮೀನು
Advertisement
ಒಡಿಶಾ ರೈಲು ದುರಂತ (Odisha Train Tragedy) ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ದುರಂತದಲ್ಲಿ 150ರಿಂದ 160 ಜನ ಕರ್ನಾಟಕದವರು ಇದ್ದರು. ಪುರಿ ಜಗನ್ನಾಥದಲ್ಲಿ ಇದ್ದವರು 17 ಜನ ವಾಪಸ್ ಬಂದಿದ್ದಾರೆ. 30ಕ್ಕೂ ಹೆಚ್ಚು ವಾಲಿಬಾಲ್ ಆಟಗಾರರನ್ನು ವಾಪಸ್ ಕರೆತರಲಾಗಿದೆ. ಯಾರಿಗೂ ತೊಂದರೆ ಆಗದಂತೆ 150-160 ಜನರನ್ನು ರಕ್ಷಣೆ ಮಾಡಲಾಗಿದೆ. ನನ್ನ ಮಾಹಿತಿ ಪ್ರಕಾರ ಯಾರಿಗೂ ತೊಂದರೆಯಾಗಿಲ್ಲ ಎಂದರು. ಇದನ್ನೂ ಓದಿ: ಪಶು ಸಂಗೋಪನಾ ಸಚಿವರನ್ನು ಮೆಂಟಲ್ ಆಸ್ಪತ್ರೆ ದಾಖಲಿಸಿ ಚೆಕ್ ಮಾಡಿಸ್ಬೇಕು: ಪ್ರಭು ಚವ್ಹಾಣ್ ಕಿಡಿ