ನವದೆಹಲಿ: ಸುಪ್ರೀಂ ಕೋರ್ಟ್‌ನ (Supreme Court) ಇತ್ತೀಚಿನ ಆದೇಶದ ವಿರುದ್ಧ ವಿವಾದಾತ್ಮಾಕ ಹೇಳಿಕೆ ನೀಡಿದ್ದ ಬಿಜೆಪಿ ಸಂಸದ ನಿಶಿಕಾಂತ್ ದುಬೆ (Nishikant Dubey) ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲು ಸಿದ್ಧತೆಗಳು ನಡೆಯುತ್ತಿವೆ. ನಿಶಿಕಾಂತ್ ದುಬೆ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲು ಸುಪ್ರೀಂ ಕೋರ್ಟ್‌ನ ಅನುಮೋದನೆ ಕೋರಿ ಅರ್ಜಿ ಸಲ್ಲಿಕೆಯಾಗಿದ್ದು, ಇದಕ್ಕಾಗಿ ನಮ್ಮ ಅನುಮೋದನೆ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.
ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಆಗಸ್ಟೀನ್ ಜಾರ್ಜ್ ಮಸಿಹ್ ಅವರ ಪೀಠದ ಮುಂದೆ ವಕೀಲ ಅನಸ್ ತನ್ವೀರ್ ಈ ಅರ್ಜಿಯ ಬಗ್ಗೆ ಪ್ರಸ್ತಾಪಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಪೀಠವು, ನೀವು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿ, ಈ ಅರ್ಜಿ ಸಲ್ಲಿಸಲು ನಮ್ಮ ಅನುಮೋದನೆ ಅಗತ್ಯವಿಲ್ಲ ಎಂದು ಹೇಳಿತು. ಆದರೆ ಈ ವಿಷಯದಲ್ಲಿ ಅರ್ಜಿದಾರರು ಅಟಾರ್ನಿ ಜನರಲ್ ಅವರಿಂದ ಅನುಮೋದನೆ ಪಡೆಯಬೇಕಾಗಿದೆ ಎಂದು ತಿಳಿಸಿದೆ.ಇದನ್ನೂ ಓದಿ: ಸುಪ್ರೀಂ ಕೋರ್ಟ್ ಕಾನೂನು ಮಾಡಿದ್ರೆ ಸಂಸತ್ತು ಭವನವನ್ನು ಮುಚ್ಚಬೇಕು: ಬಿಜೆಪಿ ಎಂಪಿ ನಿಶಿಕಾಂತ್ ದುಬೆ
ಸುಪ್ರೀಂ ಕೋರ್ಟ್‌ನ ಹೇಳಿಕೆಯ ನಂತರ, ಅನಸ್ ತನ್ವೀರ್ ಅವರು ಅಟಾರ್ನಿ ಜನರಲ್ ಆರ್.ವೆಂಕಟರಮಣಿ ಅವರ ಅನುಮೋದನೆ ಕೋರಿ ಪತ್ರ ಬರೆದಿದ್ದಾರೆ. ದುಬೆ ಸುಪ್ರೀಂ ಕೋರ್ಟ್‌ನ ಘನತೆಯನ್ನು ಕುಗ್ಗಿಸಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಬಿಜೆಪಿ ಸಂಸದ ನಿಶಿಕಾಂತ್ ದುಬೆ ಶನಿವಾರ (ಏ.19) ಸುಪ್ರೀಂ ಕೋರ್ಟ್ ವಿರುದ್ಧ ಹೇಳಿಕೆ ನೀಡಿದ್ದರು. ಸುಪ್ರೀಂ ಕೋರ್ಟ್ ಕಾನೂನು ಮಾಡಿದರೆ ಸಂಸತ್ತು ಮತ್ತು ವಿಧಾನಸಭೆಗಳನ್ನು ಮುಚ್ಚಬೇಕು ಎಂದು ದುಬೆ ಹೇಳಿದ್ದರು. ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು ಟೀಕಿಸಿದ ಬಿಜೆಪಿ ಅವರು, ದೇಶದಲ್ಲಿನ ಅಂತರ್ಯುದ್ಧಕ್ಕೆ ಸಿಜೆಐ ಅವರೇ ಕಾರಣ ಎಂದು ಹೇಳಿದರು. ಈ ಹೇಳಿಕೆಯಿಂದ ಬಿಜೆಪಿ ಅಂತರ ಕಾಯ್ದುಕೊಂಡಿದೆ.ಇದನ್ನೂ ಓದಿ: ನನ್ನ ಶತ್ರುಗಳು ಅಂದ್ರೆ ಅದು ನನ್ನ ಚಿಕ್ಕಮ್ಮ, ರಾಕೇಶ್ ಮಲ್ಲಿ – ಪೊಲೀಸರ ಮುಂದೆ ರಿಕ್ಕಿ ರೈ ಸ್ಫೋಟಕ ಹೇಳಿಕೆ