ಕಲಬುರಗಿ: ಹಿಂದಿನ ಸರ್ಕಾರ ಬಂಜಾರ ಸಮುದಾಯವನ್ನು (Banjara Community) ನಿರ್ಲಕ್ಷ್ಯಿಸಿತ್ತು. ಆದರೆ ನಮ್ಮ ಸರ್ಕಾರ ಅವರಿಗೆ ಹಕ್ಕು ಪತ್ರ ನೀಡುವ ಮೂಲ ಐತಿಹಾಸಿಕ ನಿರ್ಧಾರ ಕೈಗೊಂಡಿದೆ. ಡಬಲ್ ಎಂಜಿನ್ ಸರ್ಕಾರ ಜನರ ಕಲ್ಯಾಣಕ್ಕೆ ಸಹಾಯ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಮೆಚ್ಚುಗೆ ವ್ಯಕ್ತಪಡಿಸಿದರು.
ಕಲಬುರಗಿಯ ಮಳಖೇಡಾದಲ್ಲಿ ವಿಜಯಪುರ, ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ಬಳ್ಳಾರಿ, ವಿಜಯನಗರ ಜಿಲ್ಲೆಗಳ ತಾಂಡಾ ಮತ್ತು ಹಟ್ಟಿಗಳಲ್ಲಿ ವಾಸವಾಗಿರುವ 51 ಸಾವಿರ ಕುಟುಂಬಸ್ಥರಿಗೆ ಹಕ್ಕು ಪತ್ರ ವಿತರಿಸುವ ಕಾರ್ಯಕ್ರಮದಲ್ಲಿ ಮೋದಿ ಮಾತನಾಡಿದರು. ನಗಾರಿ ಬಾರಿಸಿದ ಮೋದಿ ಸಂಕೇತಿಕವಾಗಿ 5 ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಿದರು. ಆರಂಭದಲ್ಲಿ ಲಂಬಾಣಿ ಭಾಷೆಯಲ್ಲಿ ಮಾತನಾಡಿದ ಮೋದಿ ಬಳಿಕ ಹಿಂದಿಯಲ್ಲಿ ಭಾಷಣ ಮುಂದುವರಿಸಿದರು.
Advertisement
Advertisement
ಈ ಸಮುದಾಯವರು ಹಕ್ಕುಗಳಿಗಾಗಿ ಬಹಳ ಸಂಘರ್ಷ ನಡೆಸುತ್ತಿದ್ದರು. ಹಿಂದಿನ ಸರ್ಕಾರಗಳು ಕೇವಲ ವೋಟ್ ಬ್ಯಾಂಕ್ ರಾಜಕಾರಣ ಮಾತ್ರ ಮಾಡುತ್ತಿದ್ದವು. ಹಿಂದಿನ ಸರಕಾರಗಳು ಉದಾಸಿನ ಮಾಡುತ್ತಿದ್ದವು. ಆದರೆ ಬಿಜೆಪಿ ಸರ್ಕಾರವು ಹಕ್ಕು ಪತ್ರಗಳನ್ನು ನೀಡಿ ಅವರಿಗೆ ಒಂದು ಹಕ್ಕು ನೀಡಿದೆ. ನಮ್ಮ ದೇಶಕ್ಕೆ ಸಂವಿಧಾನ ರಚನೆಯಾದ ತಿಂಗಳಿನಲ್ಲಿ ಈ ಹಕ್ಕು ಕೊಟ್ಟಿರುವುದಕ್ಕೆ ನನಗೆ ಬಹಳ ಸಂತಸ ತಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಹಿಂದಿನ ಸರ್ಕಾರಗಳದ್ದು ಕೇವಲ ವೋಟು ಬ್ಯಾಂಕ್ ರಾಜಕಾರಣ, ನಮ್ಮ ಆದ್ಯತೆ ವಿಕಾಸ: ಮೋದಿ
Advertisement
ಬಂಜಾರ ಸಮುದಾಯ ನನಗೆ ಹೊಸದಲ್ಲ. ನಮ್ಮ ಬಂಜಾರ ಸಮುದಾಯದ ಸಹೋದರ ಸಹೋದರಿಯರು ರಾಷ್ಟ್ರದ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡುತ್ತಿದ್ದಾರೆ. ಕೇಂದ್ರ ಸರ್ಕಾರವು ದೇಶಾದ್ಯಂತ ಹಳ್ಳಿಗಳಲ್ಲಿರುವ ಗ್ರಾಮೀಣ ಮನೆಗಳಿಗೆ ಹಕ್ಕು ಪತ್ರ ನೀಡುತ್ತಿದೆ. ಈಗ ಬಂಜಾರ ಸಮುದಾಯವೂ ಈ ಸೌಲಭ್ಯವನ್ನು ಪಡೆಯುತ್ತಿದೆ ಎಂದು ತಿಳಿಸಿದರು.
Advertisement
ಆಸ್ತಿ ಇಲ್ಲದವರಿಗೆ ಯಾರು ಗ್ಯಾರಂಟಿ ಕೊಡುತ್ತಾರೆ? ನಮ್ಮ ಸರ್ಕಾರ ಮುದ್ರಾ ಯೋಜನೆ ಮೂಲಕ ಅವರಿಗೆ ಗ್ಯಾರೆಂಟಿ ನೀಡಿದೆ. ಅನುಭವ ಮಂಟಪದ ಮೂಲಕ ಬಸವಣ್ಣ ಸಾಮಾಜಿಕ ನ್ಯಾಯ ತಂದರು. ಕರ್ನಾಟಕ ಸರ್ಕಾರದ ಈ ನಿರ್ಧಾರ ಬಹಳ ಸಂತೋಷ ತಂದಿದೆ. ಯಾವ ಸರ್ಕಾರ ಮಾಡದ ಕೆಲಸವನ್ನು ಸರ್ಕಾರ ಮಾಡಿದೆ. ಹಕ್ಕು ಪತ್ರ ಪಡೆದ ಮಹಿಳೆ ನನಗೆ ಆಶೀರ್ವಾದ ಮಾಡಿದರು. ಸಮಾಜದ ಅಭಿವೃದ್ಧಿಗೆ ಮತ್ತಷ್ಟು ಕೆಲಸ ಮಾಡಲಾಗುವುದು ಎಂದು ಹೇಳಿದರು.
ಉತ್ತಮ ಆಡಳಿತ ಮತ್ತು ಸೌಹಾರ್ದತೆಯೊಂದಿಗೆ ಭಾರತವನ್ನು ಅಭಿವೃದ್ಧಿಪಡಿಸುವ ದೃಷ್ಟಿಯಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ. ಸಬ್ಕಾ ಸಾಥ್, ಸಬ್ಕಾ ವಿಕಾಸ್ ಮತ್ತು ಸಬ್ಕಾ ಪ್ರಯಾಸ್ ಮಂತ್ರವು ಭಾರತದ ಬೆಳವಣಿಗೆಗೆ ಉತ್ತೇಜನ ನೀಡುತ್ತಿದೆ ಎಂದರು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k