ಮುಂಬೈ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರಗಳಿಂದ ಕಾಶ್ಮೀರಿ ಪಂಡಿತರು ಆ ಸ್ಥಳವನ್ನೇ ತೊರೆಯುವ ಸ್ಥಿತಿ ಎದುರಾಗಿದೆ. ಈ ಕುರಿತು ಮಾತನಾಡಿದ ಮಹಾರಾಷ್ಟ್ರದ ಸಚಿವ ಆದಿತ್ಯ ಠಾಕ್ರೆ, ಅಲ್ಲಿಂದ ಸ್ಥಳಾಂತರಗೊಳ್ಳಲು ಬಯಸುವ ಕಾಶ್ಮೀರಿ ಪಂಡಿತರಿಗೆ ಮಹಾರಾಷ್ಟ್ರದ ಬಾಗಿಲು ತೆರೆದಿದೆ ಎಂದು ಹೇಳಿದರು.
ನಾವು ಕಾಶ್ಮೀರಿ ಪಂಡಿತರನ್ನು ಬೆಂಬಲಿಸುತ್ತೇವೆ. ಅಲ್ಲಿನ ಪರಿಸ್ಥಿತಿ ಚಿಂತಾಜನಕವಾಗಿದೆ. ಇಂತಹ ಸಮಯದಲ್ಲಿ ಮತ್ತೆ ಪರಿಸ್ಥಿತಿ ಮರುಕಳಿಸುತ್ತಿರುವುದು ವಿಷಾದನೀಯ. ಅವರ ಸುರಕ್ಷತೆಗಾಗಿ ಭಾರತ ಸರ್ಕಾರ ಬಲವಾದ ಕ್ರಮವನ್ನು ತೆಗೆದುಕೊಳ್ಳುತ್ತದೆ ಎಂಬುದನ್ನು ನಿರೀಕ್ಷಿಸುತ್ತೇವೆ. ಅವರಿಗಾಗಿ ನಮ್ಮ ಬಾಗಿಲು ಸದಾ ತೆರೆದಿರುತ್ತದೆ ಎಂದು ಹೇಳಿದರು. ಇದನ್ನೂ ಓದಿ: 20 ಮಂದಿಯ ರಾಜೀನಾಮೆಯ ಬೆನ್ನಲ್ಲೇ ನೂತನ ಸಚಿವ ಸಂಪುಟ ರಚನೆ- 13 ಮಂದಿ ಪ್ರಮಾಣವಚನ
Advertisement
Advertisement
ಇತ್ತೀಚೆಗೆ ಕಾಶ್ಮೀರಿ ಪಂಡಿತರು ಹಾಗೂ ವಲಸೆ ಕಾರ್ಮಿಕರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ಸರಣಿ ಹತ್ಯೆ ನಡೆಸುತ್ತಿದ್ದಾರೆ. ಶನಿವಾರ 177 ಕಾಶ್ಮೀರಿ ಪಂಡಿತ ಶಿಕ್ಷಕರನ್ನು ಶ್ರೀನಗರದಿಂದ ಇತರ ಪ್ರದೇಶಗಳಿಗೆ ವರ್ಗಾವಣೆ ಮಾಡುವಂತೆ ಸರ್ಕಾರ ಆದೇಶ ಹೊರಡಿಸಿತ್ತು. ಇದನ್ನೂ ಓದಿ: ಬೆಂಗಳೂರಿನಲ್ಲಿ ಈದ್ಗಾ ಮೈದಾನ ವಿವಾದ- ಗ್ರೌಂಡ್‍ನಲ್ಲಿ ಹಿಂದೂ ಸಂಘಟನೆಯ ಮುಖಂಡರ ಹೈಡ್ರಾಮಾ
Advertisement
ಗುರುವಾರ ಬ್ಯಾಂಕ್ ಮ್ಯಾನೇಜರ್ ಹಾಗೂ ಓರ್ವ ಇಟ್ಟಿಗೆ ಗೂಡು ಕಾರ್ಮಿಕನನ್ನು ಎರಡು ಪ್ರತ್ಯೇಕ ಘಟನೆಗಳಲ್ಲಿ ಹತ್ಯೆ ಮಾಡಲಾಗಿತ್ತು. ಮಂಗಳವಾರ ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಶಾಲೆಯೊಂದರಲ್ಲಿ ಭಯೋತ್ಪಾದಕರ ಗುಂಡಿನ ದಾಳಿಗೆ ಶಿಕ್ಷಕಿ ಬಲಿಯಾಗಿದ್ದರು. ಮೇ 1 ರಿಂದ ಇಲ್ಲಿಯವರೆಗೆ ಕಾಶ್ಮೀರದಲ್ಲಿ ಉದ್ದೇಶಿತ ಹತ್ಯೆಗಳಿಂದ 9 ಜನ ಬಲಿಪಶುಗಳಾಗಿದ್ದಾರೆ.